Homeಕರ್ನಾಟಕಎಲ್ಲಾ ಕೇಸುಗಳಿಂದ ದೋಷಮುಕ್ತರಾದ ಹೋರಾಟಗಾರ ನೂರ್‌ ಶ್ರೀಧರ್‌...

ಎಲ್ಲಾ ಕೇಸುಗಳಿಂದ ದೋಷಮುಕ್ತರಾದ ಹೋರಾಟಗಾರ ನೂರ್‌ ಶ್ರೀಧರ್‌…

- Advertisement -
- Advertisement -

ನಕ್ಸಲೀಯ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಹಲವಾರು ಸುಳ್ಳುಕೇಸುಗಳಲ್ಲಿ ಸಿಕ್ಕಿಕೊಂಡು ಭೂಗತರಾಗಿದ್ದವರು ನೂರ್‌ ಶ್ರೀಧರ್‌. 2013-14ರ ಅವಧಿಯಲ್ಲಿ ದೊರೆಸ್ವಾಮಿ, ಗೌರಿಲಂಕೇಶ್‌ ಮತ್ತು ದಿವಗಂತ ಎ.ಕೆ ಸುಬ್ಬಯ್ಯನವರ ಪ್ರಯತ್ನದ ಫಲವಾಗಿ ಸರ್ಕಾರದ ಜೊತೆಗಿನ ಮಾತುಕತೆಯಂತೆ ಮುಖ್ಯವಾಹಿನಿಗೆ ಮರಳಿದ್ದ ನೂರ್ ಶ್ರೀಧರ್‌ ಮೇಲಿದ್ದ ಎಲ್ಲಾ ಕೇಸುಗಳು ಐದು ವರ್ಷಗಳ ನಂತರ ಖುಲಾಸೆಗೊಂಡಿದ್ದು ಅವರೀಗ ದೋಷಮುಕ್ತರಾಗಿದ್ದಾರೆ.

2014ರ ಡಿಸೆಂಬರ್ 08ರಂದು ತಮ್ಮ ಸಹ ಹೋರಾಟಗಾರ ಸಿರಿಮನೆ ನಾಗರಾಜುರವರೊಡನೆ ಮುಖ್ಯವಾಹಿನಿಗೆ ಮರಳಿದ್ದ ಅವರು ಒಂದು ತಿಂಗಳ ಕಾಲ ಜೈಲಿನಲ್ಲಿದ್ದು 2015ರ ಜನವರಿ 15 ರಂದು ಬಂಧಮುಕ್ತರಾಗಿದ್ದರು. ಅದಾದ ನಾಲ್ಕೂವರೆ ವರ್ಷಗಳ ನಂತರ ಇಂದು ದೋಷಮುಕ್ತರೆಂದು ಕೋರ್ಟ್‌ ಹೇಳಿದೆ. ನೂರ್‌ ಶ್ರೀಧರ್‌ರವರಿಗೆ ಸಾಮಾಜಿಕ ಮನ್ನಣೆ ಈಗಾಗಲೇ ಸಿಕ್ಕಿತ್ತು. ಇಂದಿನಿಂದ ಅವರಿಗೆ ಕಾನೂನಿನ ಮನ್ನಣೆಯು ಸಿಕ್ಕಿದೆ.

ಚಿಕ್ಕಮಗಳೂರು ಕೋರ್ಟ್‌‌ನಲ್ಲಿ ಅವರ ಮೇಲೆ ಇದ್ದ 02 ಕೇಸುಗಳು ಒಂದು ವರ್ಷದ ಹಿಂದೆಯೇ ಮುಗಿದಿದ್ದವು. ನಂತರ ಉಡುಪಿ ಕೋರ್ಟ್‌‌ನಲ್ಲಿದ್ದ 02 ಕೇಸುಗಳಲ್ಲಿ ಒಂದು ಆರು ತಿಂಗಳ ಹಿಂದೆ ಮುಗಿದಿದ್ದು ಈಗ ಕೊನೆಯ ಕೇಸ್‌ ಕೂಡ ಮುಗಿದಿದ್ದರಿಂದ ಅವರು ನಿರಾಳರಾಗಿದ್ದಾರೆ.

ಇವರು ಯಾವುದೇ ಅಪರಾಧಗಳಲ್ಲಿ ಪಾಲ್ಗೊಂಡಿಲ್ಲ, ಆ ರೀತಿಯ ಯಾವುದೇ ಸಾಕ್ಷಿಗಳ ಇಲ್ಲವೆಂದು ಕೋರ್ಟ್‌ ತೀರ್ಪು ನೀಡಿದೆ. ನೂರ್‌ ಶ್ರೀಧರ್‌ರವರೊಂದಿಗೆ ಆನಂತರ ಮುಖ್ಯವಾಹಿನಿಗೆ ಬಂದಿದ್ದ ಪದ್ಮನಾಭ್‌ 07 ಕೇಸುಗಳಲ್ಲಿ ಇದುವರೆಗೂ 05 ಕೇಸುಗಳಲ್ಲಿ ದೋಷಮುಕ್ತರಾಗಿದ್ದಾರೆ. ಇಂದು 03 ಪ್ರಕರಣಗಳಲ್ಲಿ ಅವರನ್ನು ದೋಷಮುಕ್ತರೆಂದು ಕೋರ್ಟ್‌ ಘೋಷಿಸಿದೆ.

ವಿದ್ಯಾರ್ಥಿ ದಿಸೆಯಿಂದಲೂ ಹೋರಾಟನಿರತರಾಗಿದ್ದ ನೂರ್‌ ಶ್ರೀಧರ್‌ರವರು, ಮುಖ್ಯವಾಹಿನಿಗೆ ಬಂದನಂತರ ಭೂಮಿ ವಸತಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ದಿಡ್ಡಳ್ಳಿ ಆದಿವಾಸಿಗಳ ಹೋರಾಟಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಎಲ್ಲಾ ಜನಪರ ಚಳವಳಿಗಳ ಜೊತೆ ಸಾವಯವ ಸಂಬಂಧ ಹೊಂದಿದ್ದಾರೆ.

ನಕ್ಸಲೈಟ್‌ ಚಳವಳಿಯ ಮೂಲಕ ಭೂಗತರಾಗಿದ್ದ ಹೋರಾಟಗಾರನ ಮೇಲಿನ ಎಲ್ಲಾ ಕೇಸುಗಳು ಖುಲಾಸೆಯಾಗಿ ಬಂಧಮುಕ್ತರಾಗಿರುವ ಸಂದರ್ಭದಲ್ಲಿಯೇ ಮುಖ್ಯವಾಹಿನಿ ಚಳವಳಿಯಲ್ಲಿದ್ದ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರನ್ನು ಹಳೆಯ ಸುಳ್ಳು ಕೇಸಿನಲ್ಲಿ ರಾಯಚೂರು ಪೊಲೀಸರು ಬಂಧಿಸಿರುವುದು ವಿಪರ್ಯಾಸವೇ ಸರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೊಡ್ಡಿಪಾಳ್ಯ ನರಸಿಂಹಮೂರ್ತಿ ಯವರು ಆದಷ್ಟು ಬೇಗ ಬಿಡುಗಡೆ ಆಗಬೇಕು. ಈ ನಿಟ್ಟಿನಲ್ಲಿ ವಿಚಾರವಂತರು ಮತ್ತು ಸಾಮಾಜಿಕ ಹೋರಾಟಗಾರರು ನಿರಂತರ ಪ್ರಯತ್ನ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...