ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನವೆಂಬರ್ 6 ರಂದು ವಿಚಾರಣೆಗೆ ಕರೆದಿದ್ದಾರೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ ಎಂದು TNIE ವರದಿ ಮಾಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ತಮ್ಮ ಪತ್ನಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪವನ್ನು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಡಲಾಗಿದೆ. ಮುಡಾ ಪ್ರಕರಣ
ಲೋಕಾಯುಕ್ತ ಪೊಲೀಸರು ಅಕ್ಟೋಬರ್ 25 ರಂದು ಪ್ರಕರಣದ ಆರೋಪಿಯಾಗಿರುವ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿಎಂ ಅವರನ್ನು ವಿಚಾರಣೆ ನಡೆಸಿದ್ದರು. ”ಬುಧವಾರ ಬೆಳಗ್ಗೆ ಹಾಜರಾಗುವಂತೆ ನಾವು ಹೇಳಿದ್ದೇವೆ” ಎಂದು ಲೋಕಾಯುಕ್ತದ ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಲೋಕಾಯುಕ್ತ ಪೊಲೀಸರ ಸಮನ್ಸ್‌ಗೆ ಹಾವೇರಿ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಾನು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದಾರೆ.
ಮೈಸೂರಿನ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಸಿದ್ದರಾಮಯ್ಯ, ಅವರ ಪತ್ನಿ, ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಕೂಡ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಿದ್ದರು.
ತಮಗೆ ಹಿನ್ನಡೆಯಾಗಿದ್ದ ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಕಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅಕ್ಟೋಬರ್ 24ರಂದು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಪೀಠವು ಸೆಪ್ಟೆಂಬರ್ 24 ರಂದು ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರ ಅನುಮೋದನೆಯನ್ನು ಒಪ್ಪಿಕೊಂಡಿತ್ತು ಮತ್ತು ಸಿಎಂ ಅವರ ಅರ್ಜಿಯನ್ನು ವಜಾ ಮಾಡಿತ್ತು.
ಹೈಕೋರ್ಟ್ ಆದೇಶದ ನಂತರ, ಮರುದಿನವೇ ಮೈಸೂ0ರಿನ ವಿಶೇಷ ನ್ಯಾಯಾಲಯವು ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸ್ ತನಿಖೆಗೆ ಆದೇಶಿಸಿ, ಡಿಸೆಂಬರ್ 24 ರೊಳಗೆ ತನಿಖಾ ವರದಿಯನ್ನು ಸಲ್ಲಿಸುವಂತೆ ಸೂಚಿಸಿತ್ತು. ಈ ನಡುವೆ ಪಾರ್ವತಿ ಅವರಿಗೆ ನೀಡಿದ್ದ 14 ನಿವೇಶನಗಳನ್ನು ರದ್ದು ಮಾಡುವಂತೆ ಮುಡಾಗೆ ಸಿಎಂ ಪತ್ರ ಬರೆದಿದ್ದು, ಅದನ್ನು ಮುಡಾ ಒಪ್ಪಿಕೊಂಡಿದೆ.
ಸೆಪ್ಟೆಂಬರ್ 30 ರಂದು, ಲೋಕಾಯುಕ್ತ ಎಫ್‌ಐಆರ್‌ನ ಆಧಾರದಲ್ಲಿ ಸಿಎಂ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ)ವು ಇಸಿಐಆರ್ ದಾಖಲಿಸಿದೆ. ಇದರ ನಂತರ ಮೂಡಾ ಕಚೇರಿಯ ಮೇಲೆ ಕೂಡಾ ಇಡಿ ದಾಳಿ ನಡೆಸಿತ್ತು. ಮುಡಾ ಪ್ರಕರಣ
ಇದನ್ನೂ ಓದಿ: ‘ಪೇಮೆಂಟ್ ಸೀಟ್ ಅಧ್ಯಕ್ಷ’ | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ
‘ಪೇಮೆಂಟ್ ಸೀಟ್ ಅಧ್ಯಕ್ಷ’ | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ


