Homeಮುಖಪುಟ'ಉತ್ತರ ಪ್ರದೇಶ ಮದ್ರಸಾ ಕಾಯ್ದೆ'ಯ ಸಾಂವಿಧಾನಿಕ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ ಕೋರ್ಟ್ : ಹೈಕೋರ್ಟ್ ಆದೇಶ...

‘ಉತ್ತರ ಪ್ರದೇಶ ಮದ್ರಸಾ ಕಾಯ್ದೆ’ಯ ಸಾಂವಿಧಾನಿಕ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ ಕೋರ್ಟ್ : ಹೈಕೋರ್ಟ್ ಆದೇಶ ರದ್ದು

- Advertisement -
- Advertisement -

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ 2004ರ ಉತ್ತರ ಪ್ರದೇಶ ಮದ್ರಸಾ ಶಿಕ್ಷಣ ಮಂಡಳಿ ಕಾಯ್ದೆ (Uttar Pradesh Board of Madrasa Education Act)ಯ ಸಾಂವಿಧಾನಿಕ ಸಿಂಧುತ್ವವನ್ನು ಇಂದು (ನ.5) ಎತ್ತಿ ಹಿಡಿದಿದೆ. ಈ ಮೂಲಕ ಕಾಯ್ದೆಯನ್ನು ರದ್ದುಗೊಳಿಸಿದ್ದ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಬದಿಗೊತ್ತಿದೆ.

ಕಳೆದ ಮಾರ್ಚ್‌ನಲ್ಲಿ, ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಮದ್ರಸಾ ಶಿಕ್ಷಣ ಮಂಡಳಿ ಕಾಯ್ದೆ-2004 ಅನ್ನು ರದ್ದುಗೊಳಿಸಿತ್ತು. ಈ ಕಾಯ್ದೆ ಜಾತ್ಯತೀತತೆಯ ತತ್ವಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿತ್ತು. ಆದರೆ,
ಏಪ್ರಿಲ್‌ನಲ್ಲಿ ಮಧ್ಯಂತರ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್, ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ನಿರ್ಧರಿಸುವವರೆಗೆ ಹೈಕೋರ್ಟ್ ತೀರ್ಪಿಗೆ ತಡೆ ನೀಡಿತ್ತು.

ಮದ್ರಸಾ ಕಾಯ್ದೆಯು ಮದ್ರಸಾ ಶಿಕ್ಷಣಕ್ಕೆ ಕಾನೂನು ಚೌಕಟ್ಟನ್ನು ಒದಗಿಸುತ್ತದೆ. ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಆರ್‌ಟಿ) ಪಠ್ಯಕ್ರಮದ ಹೊರತಾಗಿ, ಧಾರ್ಮಿಕ ಶಿಕ್ಷಣ ನೀಡಲು ಅನುವು ಮಾಡಿಕೊಡುತ್ತದೆ.

ಮದ್ರಸಾ ಕಾಯ್ದೆಯಡಿ ಮುಸ್ಲಿಂ ಸಮುದಾಯದ ಸದಸ್ಯರನ್ನು ಒಳಗೊಂಡ ಮದ್ರಸಾ ಶಿಕ್ಷಣ ಮಂಡಳಿಯನ್ನು ರಚಿಸಲಾಗುತ್ತದೆ. ಈ ಮಂಡಳಿ ಮದ್ರಸಾ ಶಿಕ್ಷಣದ ಪಠ್ಯ ಪುಸ್ತಕ ಸೇರಿದಂತೆ ಕೋರ್ಸ್ ಮೆಟೀರಿಯಲ್‌ಗಳನ್ನು ಸಿದ್ದಪಡಿಸುವುದು, ‘ಮೌಲವಿ’ (10ನೇ ತರಗತಿಗೆ ಸಮಾನ) ಮತ್ತು ‘ಪಾಝಿಲ್’ (ಸ್ನಾತಕೋತ್ತರಕ್ಕೆ ಸಮಾನ) ಕೋರ್ಸ್‌ಗಳಿಗೆ ಪರೀಕ್ಷೆಗಳನ್ನು ನಡೆಸುವುದು ಸೇರಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ನಡೆಸುತ್ತದೆ. ಈ ಮದ್ರಸಾ ಮಂಡಳಿಯ ಕಾರ್ಯವೈಖರಿಯ ಬಗ್ಗೆ ಕಾಯ್ದೆಯ ಸೆಕ್ಷನ್ 9ರಡಿ ವಿವರಿಸಲಾಗಿದೆ.

ಕಾಯ್ದೆಯ ಕುರಿತ ಮೇಲ್ಮವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ಉತ್ತರಿಸಿದ್ದ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ, ಕಾಯ್ದೆ ಸಾಂವಿಧಾನಿಕವಾಗಿದೆ. ಅದನ್ನು ಸಂಪೂರ್ಣವಾಗಿ ರದ್ದುಪಡಿಸಬೇಕಿಲ್ಲ. ಕೆಲವೊಂದು ಆಕ್ಷೇಪಾರ್ಹ ನಿಬಂಧನೆಗಳನ್ನು ಮಾತ್ರ ಮರು ಪರಿಶೀಲಿಸಬೇಕಿದೆ ಎಂದಿತ್ತು.

“ಧಾರ್ಮಿಕ ಶಿಕ್ಷಣದಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೂಡ ಆಸಕ್ತಿಯನ್ನು ಹೊಂದಿದೆ. ಕಾಯ್ದೆಯನ್ನು ರದ್ದುಪಡಿಸುವುದೆಂದರೆ, ‘ಮಗುವನ್ನು ಸ್ನಾನದ ನೀರಿನಿಂದ ಹೊರಗಿಟ್ಟ ಹಾಗೆ” ಎಂದು ಸಿಜೆಐ ಹೇಳಿದ್ದಾರೆ.

“ಕಾಮಿಲ್, ಫಾಝಿಲ್ ಮುಂತಾದ ಪದವಿಗಳನ್ನು ನೀಡಲು ಮದ್ರಸಾ ಮಂಡಳಿಗೆ ಅಧಿಕಾರ ನೀಡುವ 2004 ರ ಕಾಯ್ದೆಯ ಕೆಲ ನಿಬಂಧನೆಗಳು ಮತ್ತು ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ) ದ ಕಾಯ್ದೆ-1956 ರ ನಿಬಂಧನೆಗಳ ನಡುವೆ ಸಂಘರ್ಷ ಉಂಟಾಗಬಹುದು. ಏಕೆಂದರೆ, ಯುಜಿಸಿ ಕಾಯ್ದೆ ಪದವಿ ನೀಡುವ ಅಧಿಕಾರ ವಿಶ್ವ ವಿದ್ಯಾನಿಲಯಗಳಿಗೆ ಮಾತ್ರ ಇದೆ ಎಂದು ಹೇಳುತ್ತದೆ” ಎಂದು ಆದೇಶ ನೀಡುವ ವೇಳೆ ಸಿಜೆಐ ಉಲ್ಲಖಿಸಿದ್ದಾರೆ.

ಇದನ್ನೂ ಓದಿ : ಗಣಪತಿ ಪೂಜೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದರಲ್ಲಿ ತಪ್ಪಿಲ್ಲ: ಸಿಜೆಐ ಡಿ.ವೈ. ಚಂದ್ರಚೂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...