Homeಮುಖಪುಟಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಅಕ್ರಮವಾಗಿ ಮನೆ ಧ್ವಂಸ : ಯುಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

₹ 25 ಲಕ್ಷ ಮಧ್ಯಂತರ ಪರಿಹಾರ ನೀಡಲು ಸೂಚನೆ

- Advertisement -
- Advertisement -

ರಸ್ತೆ ವಿಸ್ತರಣೆ ಯೋಜನೆಗಾಗಿ ಅಕ್ರಮವಾಗಿ ಮನೆಗಳನ್ನು ಕೆಡವಿದ್ದಕ್ಕಾಗಿ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಸುಪ್ರೀಂ ಕೋರ್ಟ್ ಇಂದು (ನ. 6) ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಮಹಾರಾಜ್‌ಗಂಜ್‌ನ ನಿವಾಸಿ ಮನೋಜ್ ತಿಬ್ರೆವಾಲ್ ಆಕಾಶ್ ಎಂಬವರ ಮನೆಯನ್ನು 2019ರಲ್ಲಿ ಕೆಡವಲಾಗಿತ್ತು. ಈ ಸಂಬಂಧ ಮನೋಜ್ ಅವರು ಕಳುಹಿಸಿದ ಪತ್ರ ದೂರಿನ ಆಧಾರದ ಮೇಲೆ
2020ರಲ್ಲಿ ದಾಖಲಾದ ಸ್ವಯಂ ಪ್ರೇರಿತ ರಿಟ್ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿದೆ.

ವಿಚಾರಣೆಯ ಸಂದರ್ಭದಲ್ಲಿ, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಇದು ‘ಮಿತಿ ಮೀರಿದ’ ನಡವಳಿಕೆ ಎಂದು ಬಣ್ಣಿಸಿದೆ.

ಅರ್ಜಿದಾರರು ಸಾರ್ವಜನಿಕ ಭೂಮಿಯನ್ನು ಅತಿಕ್ರಮಿಸಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಚಂದ್ರಚೂಡ್, ಅರ್ಜಿದಾರ 3.7 ಚದರ ಮೀಟರ್ ಜಾಗವನ್ನು ಅತಿಕ್ರಮಿಸಿದ್ದಾರೆ ಎಂಬುವುದು ನಿಮ್ಮ ವಾದ, ಆಯ್ತು ನಿಮ್ಮ ವಾದವನ್ನು ನಾವು ಒಪ್ಪುತ್ತೇವೆ. ಅರ್ಜಿದಾರನಿಗೆ ಕ್ಲೀನ್ ಚಿಟ್ ನೀಡುವುದಿಲ್ಲ. ಆದರೆ, ಯಾವುದೇ ನೋಟಿಸ್ ನೀಡದೆ ನೀವು ಜನರ ಮನೆಯನ್ನು ಹೇಗೆ ಕೆಡವುತ್ತೀರಿ? ಯಾರದ್ದಾದರು ಮನೆಯನ್ನು ಹಠಾತ್ ಕೆಡವಿ ಹಾಕುವುದು ಕಾನೂನುಬಾಹಿರ” ಎಂದು ಕಿಡಿಕಾರಿದ್ದಾರೆ.

‘ಮನೆ ಕೆಡವುವ ಮುನ್ನ ನೋಟಿಸ್ ನೀಡಿಲ್ಲ. ನಿಯಮಗಳನ್ನು ಅನುಸರಿಸಿಲ್ಲ’ ಎಂಬ ಅಂಶದ ಕುರಿತು ಪ್ರತಿಕ್ರಿಯಿಸಿದ ಸಿಜೆಐ, “ಇದು ಮಿತಿ ಮೀರಿದ ನಡವಳಿಕೆಯಾಗಿದೆ. ನೀವು ಎಲ್ಲಿ ನಿಯಮಗಳನ್ನು ಅನುಸರಿಸಿದ್ದೀರಿ? ನೀವು ಯಾವುದೇ ನೋಟಿಸ್ ನೀಡಿಲ್ಲ ಎಂಬ ಅಫಿಡವಿಟ್ ನಮ್ಮ ಬಳಿ ಇದೆ. ನೀವು ನೋಟಿಸ್ ಕೊಟ್ಟಿಲ್ಲ, ಜನರ ಮನೆ ಬಳಿ ಹೋಗಿ ಮೈಕ್ ಮೂಲಕ ಮನೆ ಧ್ವಂಸಗೊಳಿಸುವ ಬಗ್ಗೆ ಹೇಳಿದ್ದೀರಿ” ಎಂದಿದ್ದಾರೆ.

“ಈ ಪ್ರಕರಣದ ಅರ್ಜಿದಾರರದ್ದು ಮಾತ್ರವಲ್ಲದೆ, ಇತರ ಎರಡ್ಮೂರು ಮನೆಗಳನ್ನೂ ನೀವು ಕಡೆವಿದ್ದೀರಿ. ನಿಯಮದ ಪ್ರಕಾರ, ಯಾರಿಗೂ ಪ್ರತ್ಯೇಕ ನೋಟಿಸ್‌ಗಳನ್ನು ನೀಡಿಲ್ಲ. ಸಾರ್ವಜನಿಕ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದೀರಿ” ಎಂದು ನ್ಯಾಯ ಪೀಠ ಹೇಳಿದೆ.

“ನೀವು ರಾತ್ರೋರಾತ್ರಿ ನುಗ್ಗಿ ಮನೆಗಳನ್ನು ಕೆಡವಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ನೀವು ಜನರಿಗೆ ಮನೆ ಖಾಲಿ ಮಾಡಲು ಸಮಯ ನೀಡಿಲ್ಲ. ಹೀಗಿರುವಾಗ ಜನರು ತಮ್ಮ ಸಾಮಾಗ್ರಿಗಳನ್ನು ಏನು ಮಾಡಬೇಕು? ಮನೆ ಕೆಡವುದಾದರೆ ಸರಿಯಾದ ಪ್ರಕ್ರಿಯೆ ಅನುಸರಿಸಬೇಕು” ಎಂದು ನ್ಯಾಯಮೂರ್ತಿ ಪರ್ದಿವಾಲಾ ಕೂಡ ಹೇಳಿದ್ದಾರೆ.

ಪ್ರತಿಯೊಬ್ಬರಿಗೂ ಪ್ರತ್ಯೇಕ ನೋಟಿಸ್‌ಗಳನ್ನು ನೀಡದೆ, ಎಲ್ಲರಿಗೂ ಸೇರಿಸಿ ಸಾರ್ವಜನಿಕ ಪ್ರಕಟಣೆ ಹೊರಡಿಸುವುದು ಮತ್ತು ಡೋಲು ಬಾರಿಸುವ ಮೂಲಕ ಅಧಿಕಾರಿಗಳು ಮಾಹಿತಿ ನೀಡುವುದಕ್ಕೆ ನ್ಯಾಯಮೂರ್ತಿ ಪರ್ದಿವಾಲ ‘ಅಸಮ್ಮತಿ’ ಸೂಚಿಸಿದ್ದಾರೆ.

ಪ್ರಕರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಹೆಚ್‌ಆರ್‌ಸಿ) ವರದಿಯನ್ನು ಪೀಠವು ಪರಿಗಣಿಸಿದೆ. “ಕೇವಲ 3.70 ಚದರ ಮೀಟರ್ ಜಾಗ ಅತಿಕ್ರಮಣವಾಗಿದ್ದಕ್ಕೆ ಅಧಿಕಾರಿಗಳು ಇಡೀ ಮನೆಯನ್ನೇ ಕಡೆವಿದ್ದಾರೆ. ಇಡೀ ಮನೆ ಕೆಡವುವ ಅಗತ್ಯ ಇರಲಿಲ್ಲ. ಆದ್ದರಿಂದ ಅರ್ಜಿದಾರರಿಗೆ ಮಧ್ಯಂತರ ಪರಿಹಾರ ನೀಡಬೇಕು. ಅರ್ಜಿದಾರರ ದೂರಿನ ಮೇರೆಗೆ ತಪ್ಪಿತಸ್ಥರ ವಿರುದ್ದ ಎಫ್‌ಐಆರ್ ದಾಖಲಿಸಬೇಕು ಮತ್ತು ಅಧಿಕಾರಿಗಳ ವಿರುದ್ದ ಇಲಾಖಾ ಕ್ರಮ ಕೈಗೊಳ್ಳಬೇಕು” ಎಂದು ಎನ್‌ಹೆಚ್‌ಆರ್‌ಸಿ ಶಿಫಾರಸು ಮಾಡಿದೆ.

ಅತಿಕ್ರಮಣಗಳನ್ನು ಗುರುತಿಸಲು ಅಧಿಕಾರಿಗಳು ಯಾವುದೇ ತನಿಖೆ ನಡೆಸಿಲ್ಲ.ಮನೆ ನೆಲಸಮ ಮಾಡುವ ಮೊದಲು ಭೂಮಿ ಸ್ವಾಧೀನಪಡಿಸಿಕೊಂಡಿದ್ದೇವೆ ಎಂದು ತೋರಿಸಲು ಯಾವುದೇ ದಾಖಲೆ ಅವರಲ್ಲಿ ಇರಲಿಲ್ಲ ಎಂಬುವುದನ್ನು ನ್ಯಾಯಾಲಯ ಗಮನಿಸಿದೆ.

ಅತಿಕ್ರಮಣದ ನಿಖರವಾದ ಪ್ರಮಾಣ, ಪ್ರಸ್ತುತ ರಸ್ತೆಯ ಅಗಲ, ಅಧಿಸೂಚಿತ ಹೆದ್ದಾರಿಯ ಅಗಲ, ಹೆದ್ದಾರಿಯ ಕೇಂದ್ರ ರೇಖೆಯ ಅಧಿಸೂಚಿತ ಅಗಲದ ವ್ಯಾಪ್ತಿಯಲ್ಲಿ ಬರುವ ಅರ್ಜಿದಾರರ ಆಸ್ತಿಯ ಪ್ರಮಾಣವನ್ನು ಬಹಿರಂಗಪಡಿಸಲು ಸರ್ಕಾರ ವಿಫಲವಾಗಿದೆ ಎಂದಿರುವ ನ್ಯಾಯಾಲಯ, ಆಪಾದಿತ ಅತಿಕ್ರಮಣವನ್ನು ಮೀರಿ ನೆಲಸಮವನ್ನು ಏಕೆ ನಡೆಸಲಾಗಿದೆ ಎಂಬುವುದರ ಕುರಿತು ಆಶ್ಚರ್ಯ ವ್ಯಕ್ತಪಡಿಸಿದೆ.

ಅಧಿಕಾರಿಗಳ ಅಕ್ರಮಗಳ ಬಗ್ಗೆ ಸ್ಥಳೀಯ ಪತ್ರಿಕೆಯಲ್ಲಿ ಪ್ರಕಟಿಸಿದ ವರದಿಗೆ ಪ್ರತೀಕಾರವಾಗಿ ತನ್ನ ಮನೆಯನ್ನು ಕೆಡವಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಈ ಆರೋಪದ ಬಗ್ಗೆ ನ್ಯಾಯಪೀಠ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ.

ಅರ್ಜಿದಾರರಿಗೆ 25 ಲಕ್ಷ ರೂಪಾಯಿ ದಂಡದ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ಈ ಪರಿಹಾರವು ಮಧ್ಯಂತರ ಸ್ವರೂಪದ್ದಾಗಿದೆ ಎಂದು ಸ್ಪಷ್ಟಪಡಿಸಿದೆ. ಅಕ್ರಮ ನೆಲಸಮಕ್ಕೆ ಕಾರಣರಾದ ಎಲ್ಲಾ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ತನಿಖೆ ನಡೆಸುವಂತೆ ಮತ್ತು ಶಿಸ್ತು ಕ್ರಮಗಳನ್ನು ಪ್ರಾರಂಭಿಸುವಂತೆ ಉತ್ತರ ಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನ್ಯಾಯಾಲಯ ಸೂಚಿಸಿದೆ. ಕಾನೂನುಬಾಹಿರ ಕ್ರಮಗಳಿಗೆ ಕಾರಣರಾದ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳುವ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಹೊಂದಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಒಂದು ತಿಂಗಳೊಳಗೆ ತನ್ನ ನಿರ್ದೇಶನಗಳನ್ನು ಅನುಸರಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ.

ರಸ್ತೆ ವಿಸ್ತರಣೆ ಯೋಜನೆಗಳಿಗೆ ಅತಿಕ್ರಮಣಗಳನ್ನು ತೆರವುಗೊಳಿಸುವ ಮುನ್ನ ಅಧಿಕಾರಿಗಳು ಅನುಸರಿಸಬೇಕಾದ ಕ್ರಮಗಳನ್ನು ತೀರ್ಪಿನಲ್ಲಿ ನ್ಯಾಯಾಲಯ ವಿವರಿಸಿದೆ. ಈ ತೀರ್ಪಿನ ಪ್ರತಿಯನ್ನು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ವಿತರಿಸಲು ನಿರ್ದೇಶಿಸಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಸಿದ್ಧಾರ್ಥ್ ಭಟ್ನಾಗರ್ ವಾದ ಮಂಡಿಸಿದರು.

ಇದನ್ನೂ ಓದಿ : ಖಾಸಗಿ ಸ್ವತ್ತು ತೀರ್ಪು : ಅಯ್ಯರ್ ಕುರಿತ ಸಿಜೆಐ ಹೇಳಿಕೆಗೆ ನ್ಯಾ. ನಾಗರತ್ನ, ಧುಲಿಯಾ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...