Homeಕರ್ನಾಟಕಬೆಳಗಾವಿ | ಎಸ್‌ಡಿಎ ಆತ್ಮಹತ್ಯೆ ಪ್ರಕರಣ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ, ತಹಶೀಲ್ದಾರ್ ವಿರುದ್ಧ...

ಬೆಳಗಾವಿ | ಎಸ್‌ಡಿಎ ಆತ್ಮಹತ್ಯೆ ಪ್ರಕರಣ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ, ತಹಶೀಲ್ದಾರ್ ವಿರುದ್ಧ ಎಫ್‌ಐಆರ್

- Advertisement -
- Advertisement -

ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ರುದ್ರಣ್ಣ ಯಡವಣ್ಣನವರ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಬಸವರಾಜ ನಾಗರಾಳ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪಿಎ ಸೋಮು ಹಾಗೂ ರುದ್ರಣ್ಣ ಅವರ ಸಹೋದ್ಯೋಗಿ ಅಶೋಕ ಕಬ್ಬಲಿಗೇರ್ ವಿರುದ್ದ ಪ್ರಕರಣದ ದಾಖಲಾಗಿದೆ.

ಮೃತ ರುದ್ರಣ್ಣ ಅವರ ತಾಯಿ ಮಲ್ಲವ್ವ ನೀಡಿದ ದೂರಿನ ಆಧಾರದ ಮೇಲೆ ಮೂವರ ವಿರುದ್ದ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ರುದ್ರಣ್ಣ ಅವರನ್ನು ನವೆಂಬರ್ 5ರಂದು ಸವದತ್ತಿ ತಹಶೀಲ್ದಾರ್ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ತನ್ನ ವರ್ಗಾವಣೆ ಹಿಂದೆ ತಹಶೀಲ್ದಾರ್ ಬಸವರಾಜ್ ನಾಗರಾಳ, ಸೋಮು ಹಾಗೂ ಅಶೋಕ ಕಬ್ಬಲಿಗೇರ್ ಅವರ ಕೈವಾಡ ಇದೆ ಎಂದು ರುದ್ರಣ್ಣ ಆರೋಪಿಸಿದ್ದರು. ಸಾವಿಗೂ ಮುನ್ನ ತಮ್ಮ ಇತರ ಸಹೋದ್ಯೋಗಿಗಳಿಗೆ ವಾಟ್ಸಾಪ್ ಸಂದೇಶ ಕಳಿಸಿದ್ದರು.

“ನನ್ನ ಸಾವಿಗೆ ತಹಶೀಲ್ದಾರ್ ಬಸವರಾಜ್ ನಾಗರಾಳ ಮತ್ತು ಸೋಮು ಅವರೇ ನೇರ ಕಾರಣ. ಅಶೋಕ್ ಕಬ್ಬಲಿಗೇರ್ ಕೂಡ ಕಾರಣ. ಬೆಳಗಾವಿ ಕಚೇರಿಯಲ್ಲಿ ತುಂಬಾ ಅನ್ಯಾಯ ನಡೆಯುತ್ತಿದೆ. ದಯವಿಟ್ಟು ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು” ಎಂದು ರುದ್ರಣ್ಣ ವಾಟ್ಸಾಪ್ ಸಂದೇಶದಲ್ಲಿ ಹೇಳಿದ್ದರು ಎನ್ನಲಾಗಿದೆ.

ಸಂದೇಶ ಕಳುಹಿಸಿದ ಬಳಿಕ ತಹಶೀಲ್ದಾರ್ ಕಚೇರಿಗೆ ತೆರಳಿದ್ದ ರುದ್ರಣ್ಣ, ತಹಶೀಲ್ದಾರ್ ಕೊಠಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಮಗನ ಸಾವಿಗೆ ಬಸವರಾಜ್ ನಾಗರಾಳ, ಸೋಮು ಹಾಗೂ ಅಶೋಕ್ ಕಬ್ಬಲಿಗೇರ್ ಕಾರಣ. ಅವರನ್ನು ಬಂಧಿಸಬೇಕು, ನನ್ನ ಮಗನ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ರುದ್ರಣ್ಣ ತಾಯಿ ದೂರು ನೀಡಿದ್ದಾರೆ. ದೂರು ಆಧರಿಸಿ ಪೊಲೀಸರು ಮೂವರ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ನನ್ನ ಪಿಎ ಭಾಗಿಯಾದ ಬಗ್ಗೆ ಗೊತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

“ತಹಶೀಲ್ದಾರ್‌ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರುದ್ರಣ್ಣ ಯಡವಣ್ಣವರ ಅವರ ಪ್ರಕರಣದಲ್ಲಿ ನನ್ನ ಆಪ್ತ ಸಹಾಯಕ ಸೋಮು ಭಾಗಿಯಾದ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಈ ವಿಚಾರದಲ್ಲಿ ನಿಷ್ಪಕ್ಷಪಾತ ತನಿಖೆಯಾಗಬೇಕು. ನೊಂದ ಕುಟುಂಬಕ್ಕೆ ನ್ಯಾಯ ಸಿಗಬೇಕು” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, “ಸಚಿವರಿಗೆ ಹತ್ತು ಹದಿನೈದು ಪಿಎಗಳು ಇರುವುದು ಸಹಜ. ಸೋಮು ಹೆಸರು ಪ್ರಕರಣದಲ್ಲಿರುವುದು ನನಗೆ ಮಾಧ್ಯಮಗಳ ಮೂಲಕವೇ ಗೊತ್ತಾಗಿದೆ. ನಾನು ರುದ್ರಣ್ಣ ಅವರನ್ನು ಯಾವತ್ತೂ ಭೇಟಿಯಾಗಿಲ್ಲ, ಯಾವ ಕೆಲಸಕ್ಕೂ ಸಂಪರ್ಕಿಸಿಲ್ಲ” ಎಂದಿದ್ದಾರೆ.


ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...