Homeಮುಖಪುಟಜಾರ್ಖಂಡ್: 30 ಬಂಡಾಯ ನಾಯಕರನ್ನು ಉಚ್ಚಾಟಿಸಿದ ಬಿಜೆಪಿ

ಜಾರ್ಖಂಡ್: 30 ಬಂಡಾಯ ನಾಯಕರನ್ನು ಉಚ್ಚಾಟಿಸಿದ ಬಿಜೆಪಿ

- Advertisement -
- Advertisement -

ಜಾರ್ಖಂಡ್‌ನಲ್ಲಿ ಪಕ್ಷದ ನಾಯಕರ ವಲಸೆಯನ್ನು ತಡೆಯಲು ಬಿಜೆಪಿ ಕೈಗೊಂಡ ಡ್ಯಾಮೇಜ್ ಕಂಟ್ರೋಲ್ ಕ್ರಮಗಳ ನಡುವೆಯು, ಪಕ್ಷದ ವಿರುದ್ಧವಾಗಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ನಾಮಪತ್ರ ಸಲ್ಲಿಸಿದ 30 ಬಂಡಾಯ ನಾಯಕರನ್ನು ಬಿಜೆಪಿ ಮಂಗಳವಾರ ಉಚ್ಚಾಟಿಸಿದೆ.

ರಾಜ್ಯ ಬಿಜೆಪಿ ಮುಖ್ಯಸ್ಥ ಬಾಬುಲಾಲ್ ಮರಾಂಡಿ ಅವರ ನಿರ್ದೇಶನದ ಮೇರೆಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ಪ್ರದೀಪ್ ವರ್ಮಾ ಅವರು ಬಂಡಾಯ ನಾಯಕರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜಾರ್ಖಂಡ್‌ನಲ್ಲಿ ಬಿಜೆಪಿ ಘೋಷಿಸಿದ 35 ಕ್ಕೂ ಹೆಚ್ಚು ಅಭ್ಯರ್ಥಿಗಳು ಬೇರೆ ಪಕ್ಷದಿಂದ ಬಂದ ನಾಯಕರಾಗಿದ್ದು, ಇದು ಕಾರ್ಯಕರ್ತರಲ್ಲಿ ನಿರಾಶೆ ಮೂಡಿಸಿತ್ತು. “ಅವರ ವಿಶ್ವಾಸಾರ್ಹತೆಯ ಬಗ್ಗೆ ಪಕ್ಷದೊಳಗೆ ಅನುಮಾನವುದೆ. ಅವರಲ್ಲಿ ಹಲವರು ಪಕ್ಷವನ್ನು ತೊರೆದು ಜೆಎಂಎಂ ಅಥವಾ ಕಾಂಗ್ರೆಸ್‌ಗೆ ಸೇರಲು ಬಯಸುತ್ತಿದ್ದಾರೆ” ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ.

ಈ ಬಿಕ್ಕಟ್ಟನ್ನು ನಿರ್ವಹಿಸಲು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ರಾಂಚಿಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ಅತೃಪ್ತ ನಾಯಕರೊಂದಿಗೆ ಸಾಧ್ಯವಾದಷ್ಟು ಮತ್ತೆ ಸಂಪರ್ಕ ಸಾಧಿಸಲು ಮತ್ತು ಸಕಾರಾತ್ಮಕ ವಾತಾವರಣವನ್ನು ಬೆಳೆಸಲು ಅವರು ಪಕ್ಷದ ಪ್ರತಿನಿಧಿಗಳಿಗೆ ಸೂಚಿಸಿದ್ದಾರೆ. ಅಭ್ಯರ್ಥಿಗಳ ಘೋಷಣೆಯ ನಂತರ ಮತ್ತಷ್ಟು ರಾಜೀನಾಮೆಗಳನ್ನು ತಡೆಯಲು ಸಂತೋಷ್ ಒತ್ತು ನೀಡಿದ್ದಾರೆ ಎಂದು ವರದಿಯಾಗಿದೆ. ಇಷ್ಟೆ ಅಲ್ಲದೆ, ಶಿವರಾಜ್ ಸಿಂಗ್ ಚೌಹಾಣ್ ಅವರಂತಹ ಹಿರಿಯ ನಾಯಕರು ಅತೃಪ್ತ ನಾಯಕರನ್ನು ಭೇಟಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಆಡಳಿತಾರೂಢ ಇಂಡಿಯಾ ಮೈತ್ರಿಕೂಟವು ‘ಒಂದು ಮತ, ಏಳು ಗ್ಯಾರಂಟಿ’ ಎಂಬ 7 ಗ್ಯಾರೆಂಟಿ ಯೋಜನೆಗಳನ್ನು ಘೋಷಿಸಿದೆ. ಈ ಗ್ಯಾರೆಂಟಿಗಳಲ್ಲಿ ಪ್ರತ್ಯೇಕ ಹಿಂದುಳಿದ ವರ್ಗ ಕಲ್ಯಾಣ ಸಚಿವಾಲಯದ ಭರವಸೆ ನೀಡಿದೆ. ಬುಡಕಟ್ಟು ಜನಾಂಗದವರನ್ನು ಓಲೈಸಲು ಖತಿಯಾನ್ ಆಧಾರಿತ ನಿವಾಸ ನೀತಿಯನ್ನು ಪರಿಚಯಿಸಲಾಗಿದೆ.

ಇದನ್ನೂ ಓದಿ: ಸಾರ್ವಜನಿಕವಾಗಿ ಬಿಜೆಪಿ ನಾಯಕನ ಪಾದ ಮುಟ್ಟಿದ ನಿತೀಶ್; ಟೀಕಿಸಿದ ಲಾಲು ಪ್ರಸಾದ್

ಸಾರ್ವಜನಿಕವಾಗಿ ಬಿಜೆಪಿ ನಾಯಕನ ಪಾದ ಮುಟ್ಟಿದ ನಿತೀಶ್; ಟೀಕಿಸಿದ ಲಾಲು ಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...