Homeಮುಖಪುಟಗಡಿಯಾರ ಚಿಹ್ನೆ ಬಳಕೆ ಕುರಿತು 'ಸೂಚನೆ' ಪ್ರಕಟಿಸುತ್ತೇವೆ: ಎನ್‌ಸಿಪಿ ಅಜಿತ್ ಪವಾರ್ ಬಣ

ಗಡಿಯಾರ ಚಿಹ್ನೆ ಬಳಕೆ ಕುರಿತು ‘ಸೂಚನೆ’ ಪ್ರಕಟಿಸುತ್ತೇವೆ: ಎನ್‌ಸಿಪಿ ಅಜಿತ್ ಪವಾರ್ ಬಣ

- Advertisement -
- Advertisement -

ತಮ್ಮ ಪಕ್ಷದ ‘ಗಡಿಯಾರ ಚಿಹ್ನೆ’ಯನ್ನು ‘ವಿಚಾರಣಾಧೀನ’ ಎಂಬುವುದನ್ನು ಸೂಚಿಸಿ ಪತ್ರಿಕೆಗಳಲ್ಲಿ ಹೊಸದಾಗಿ ಜಾಹಿರಾತುಗಳನ್ನು ಪ್ರಕಟಿಸುವುದಾಗಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಬಣವು ಬುಧವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ದೀಪಂಕರ್ ದತ್ತಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು 36 ಗಂಟೆಗಳ ಒಳಗೆ ಪತ್ರಿಕೆಗಳಲ್ಲಿ ಹೊಸದಾಗಿ ಸೂಚನೆಗಳನ್ನು ಪ್ರಕಟಿಸುವಂತೆ ಅಜಿತ್ ಪವಾರ್ ಅವರ ಬಣಕ್ಕೆ ನಿರ್ದೇಶನ ನೀಡಿದೆ. ಗಡಿಯಾರ ಚಿಹ್ನೆ

“ವ್ಯಾಪಕ ಪ್ರಚಾರದೊಂದಿಗೆ ಪತ್ರಿಕೆಗಳ ಪ್ರಮುಖ ಭಾಗದಲ್ಲಿ ಇದನ್ನು ಪ್ರಕಟಿಸ ಬೇಕು” ಎಂದು ನ್ಯಾಯಾಲಯ ಹೇಳಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ “ಗಡಿಯಾರ” ಚಿಹ್ನೆಯನ್ನು ಬಳಸದಂತೆ ಅಜಿತ್ ಪವಾರ್ ಅವರ ಬಣಕ್ಕೆ ನಿರ್ದೇಶನ ನೀಡಬೇಕು ಎಂದು ಶರದ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಬಣವು ಸುಪ್ರೀಂಕೋರ್ಟ್‌ಗೆ ಕೋರಿತ್ತು. ಈ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಕ್ಟೋಬರ್ 24 ರಂದು, ನ್ಯಾಯಾಲಯವು ಅಜಿತ್ ಪವಾರ್ ಬಣಕ್ಕೆ ರಾಜ್ಯ ಚುನಾವಣೆಯ ಎಲ್ಲಾ ಪ್ರಚಾರ ಸಾಮಗ್ರಿಗಳಿಗೆ ‘ವಿಚಾರಣಾಧೀನ’ ಎಂಬ ಸೂಚನೆ ಸೇರಿಸುವಂತೆ ನಿರ್ದೇಶಿಸಿತ್ತು. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ಒಂದೇ ಹಂತದಲ್ಲಿ ನವೆಂಬರ್ 20 ರಂದು ಮತದಾನ ನಡೆಯಲಿದೆ. ಜಾರ್ಖಂಡ್ ಚುನಾವಣೆಯ ಜೊತೆಗೆ ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಗಡಿಯಾರ ಚಿಹ್ನೆ

ರಾಜ್ಯ ಚುನಾವಣೆಯಲ್ಲಿ ಅಜಿತ್ ಪವಾರ್ ಪಾಳಯಕ್ಕೆ ಹೊಸ ಚಿಹ್ನೆ ನೀಡಬೇಕು ಎಂದು ಕೋರಿ ಶರದ್ ಪವಾರ್ ಬಣ ಸಲ್ಲಿಸಿರುವ ಮಧ್ಯಂತರ ಅರ್ಜಿಗೆ ಪ್ರತಿಕ್ರಿಯೆಯಾಗಿ ಅಜಿತ್ ಪವಾರ್ ಬಣಕ್ಕೆ ಪ್ರತಿಯಾಗಿ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ.

ಈ ನಡುವೆ ಶರದ್ ಪವಾರ್ ಬಣದ ನಾಯಕಿ ಸುಪ್ರಿಯಾ ಸುಳೆ ಬುಧವಾರ ಅಜಿತ್ ಪವಾರ್ ಜೊತೆಗೆ ಯಾವುದೆ ಹೊಂದಾಣಿಕೆ ಇಲ್ಲ ಎಂದಿದ್ದು, ಊಹಾಪೋಹಗಳನ್ನು ತಿರಸ್ಕರಿಸಿದ್ದಾರೆ. ಎರಡು ಬಣಗಳ ನಡುವಿನ ರಾಜಕೀಯ ಜಗಳ ನಿಜವಾಗಿದ್ದು, ಅಜಿತ್ ಪವಾರ್ ಅವರು ಸ್ವಯಂಪ್ರೇರಿತವಾಗಿ ಪಕ್ಷವನ್ನು ತೊರೆದಿದ್ದಾರೆ ಎಂದು ದಿ ಹಿಂದೂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಹೇಳಿದ್ದಾರೆ.

2023ರ ಜುಲೈ ತಿಂಗಳಲ್ಲಿ ಅಜಿತ್ ಪವಾರ್ ಅವರು ಪಕ್ಷದ ಹಲವಾರು ಶಾಸಕರೊಂದಿಗೆ ಮಹಾರಾಷ್ಟ್ರದ ಸಮ್ಮಿಶ್ರ ಸರ್ಕಾರವನ್ನು ಸೇರಿಕೊಂಡಿದ್ದರು. ಈ ವೇಳೆಗೆ ಸರ್ಕಾರವು ಬಿಜೆಪಿ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣವನ್ನು ಒಳಗೊಂಡಿತ್ತು. ಸಮ್ಮಿಶ್ರಕ್ಕೆ ಸೇರಿದ ನಂತರ ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾದರು.

ಇದರ ನಂತರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ ವಿಭಜನೆಯಾಗಿತ್ತು. ಒಂದು ಬಣ ಶರದ್ ಪವಾರ್ ಅವರ ಬೆಂಬಲಕ್ಕೆ ನಿಂತರೆ, ಇನ್ನೊಂದು ಬಣ ಅಜಿತ್ ಪವಾರ್ ಅವರನ್ನು ಬೆಂಬಲಿಸಿತ್ತು. ಅದರ ನಂತರ ಫೆಬ್ರವರಿಯಲ್ಲಿ, ಚುನಾವಣಾ ಆಯೋಗವು ಅಜಿತ್ ಪವಾರ್ ನೇತೃತ್ವದ ಬಣವನ್ನು ನಿಜವಾದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷವೆಂದು ಗುರುತಿಸಿ ಗಡಿಯಾರದ ಚಿಹ್ನೆಯನ್ನು  ಅವರಿಗೆ ನಿಗದಿಪಡಿಸಿತ್ತು.

ಇದೇ ವೇಳೆ ಚುನಾವಣಾ ಆಯೋಗ ಶರದ್ ಪವಾರ್ ಅವರ ಬಣಕ್ಕೆ “ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ – ಶರದ್ಚಂದ್ರ ಪವಾರ್” ಎಂಬ ಹೆಸರನ್ನು ಮತ್ತು ಲೋಕಸಭೆ ಚುನಾವಣೆಗೆ ಮುಂಚಿತವಾಗಿ “ತುತ್ತೂರು ಊದುವ ವ್ಯಕ್ತಿ”ಯ ಚಿಹ್ನೆಯನ್ನು ನಿಗದಿಪಡಿಸಿತ್ತು. ಚುನಾವಣಾ ಆಯೋಗದ ಈ ತೀರ್ಮಾನದ ವಿರುದ್ಧ ಶರದ್ ಪವಾರ್ ನೇತೃತ್ವದ ಬಣ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.

ಮಾರ್ಚ್‌ನಲ್ಲಿ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಕೆ.ವಿ.ವಿಶ್ವನಾಥನ್ ಅವರ ಪೀಠವು ಅಜಿತ್ ಪವಾರ್ ನೇತೃತ್ವದ ಬಣವು ಲೋಕಸಭೆ ಚುನಾವಣೆಗೆ ಗಡಿಯಾರ ಚಿಹ್ನೆಯನ್ನು ಬಳಸಲು ಅನುಮತಿಸುವುದಾಗಿ ತೀರ್ಪು ನೀಡಿತು. ಆದಾಗ್ಯೂ, ಬಣವು ಚಿಹ್ನೆಯ ಬಳಕೆಯು ‘ವಿಚಾರಣಾಧೀನವಾಗಿದೆ’ ಮತ್ತು ಈ ಪ್ರಕಣದ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಿ ಪತ್ರಿಕೆಗಳಲ್ಲಿ ಸಾರ್ವಜನಿಕ ನೋಟಿಸ್ ನೀಡುವಂತೆ ಹೇಳಿತ್ತು.

ಅದೇ ವೇಳೆಗೆ ಅಜಿತ್ ಪವಾರ್ ಬಣವು ತನ್ನ ಚುನಾವಣಾ ಪ್ರಚಾರ ಸಾಮಗ್ರಿಗಳಲ್ಲಿ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳು ಸೇರಿದಂತೆ ಗಡಿಯಾರದ ಚಿಹ್ನೆಯ ಬಳಕೆಯನ್ನು ‘ವಿಚಾರಣಾಧೀನ’ ಎಂದು ನಮೂದಿಸುವಂತೆ ಆ ಸಮಯದಲ್ಲಿ ನಿರ್ದೇಶಿಸಲಾಗಿತ್ತು.

ಇದನ್ನೂ ಓದಿ: PMLA ಅಡಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯ: ಸುಪ್ರೀಂ ಕೋರ್ಟ್

PMLA ಅಡಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...