ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆಯನ್ನು ಪಶ್ಚಿಮ ಬಂಗಾಳದಿಂದ ಹೊರಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನಂತರ ಮತ್ತೊಂದು ತನಿಖೆಗೆ ಆದೇಶಿಸಲು ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರಿಗೆ ಅಧಿಕಾರವಿದೆ ಎಂದು ಹೇಳಿದ್ದಾರೆ. ಕೋಲ್ಕತ್ತಾ ಅತ್ಯಾಚಾರ
ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಸಿಬಿಐ ಸಲ್ಲಿಸಿದ ಆರನೇ ಸ್ಥಿತಿ ವರದಿಯನ್ನು ಸಹ ಸುಪ್ರೀಂ ಕೋರ್ಟ್ ಪರಿಶೀಲಿಸಿದ್ದು, ಆದರೆ ತನಿಖೆ ನಡೆಯುತ್ತಿರುವುದರಿಂದ ಪ್ರಕರಣದ ಬಗ್ಗೆ ಅವಲೋಕನ ಮಾಡುವುದನ್ನು ತಪ್ಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಕೋಲ್ಕತ್ತಾ ನ್ಯಾಯಾಲಯವು ಪ್ರಧಾನ ಆರೋಪಿ ಸಂಜಯ್ ರಾಯ್ ವಿರುದ್ಧ ನವೆಂಬರ್ 4 ರಂದು ಆರೋಪಗಳನ್ನು ರೂಪಿಸಲಾಗಿದ್ದು, ಪ್ರಕರಣದ ದೈನಂದಿನ ವಿಚಾರಣೆ ನವೆಂಬರ್ 11 ರಿಂದ ಪ್ರಾರಂಭವಾಗಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವಿಚಾರಣೆಯ ಸಂದರ್ಭದಲ್ಲಿ, ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುವವರ ಸುರಕ್ಷತೆಗಾಗಿ ಪ್ರೋಟೋಕಾಲ್ ಸಿದ್ಧಪಡಿಲು ರಚಿಸಲಾದ ರಾಷ್ಟ್ರೀಯ ಕಾರ್ಯಪಡೆ (ಎನ್‌ಟಿಎಫ್) ತನ್ನ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದೆ.
ಎನ್‌ಟಿಎಫ್‌ನ ವರದಿಯನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಹಂಚಿಕೊಳ್ಳುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದ್ದು, ನಾಲ್ಕು ವಾರಗಳ ನಂತರ ವಿಚಾರಣೆ ನಡೆಸುವುದಾಗಿ ವಿಚಾರಣೆಯನ್ನು ಮುಂದೂಡಿದೆ. ಕೋಲ್ಕತ್ತಾ ಅತ್ಯಾಚಾರ
ರಾಜ್ಯದಲ್ಲಿ ನಾಗರಿಕ ಸ್ವಯಂಸೇವಕರನ್ನು ನೇಮಿಸಿಕೊಳ್ಳುವ ಕುರಿತು ಅಕ್ಟೋಬರ್ 15 ರಂದು ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರವನ್ನು ಪ್ರಶ್ನಿಸಿತ್ತು, ಅವರ ನೇಮಕಾತಿ ಹಾಗೂ ಮತ್ತು ನೇಮಕಾತಿ ಪ್ರಕ್ರಿಯೆಯ ಅಂಕಿ ಅಂಶವನ್ನು ಕೇಳಿದೆ.
ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರತ್ಯೇಕ ವಿಶ್ರಾಂತಿ ಕೊಠಡಿಗಳನ್ನು ಹೊರತುಪಡಿಸಿ ಸಿಸಿಟಿವಿಗಳನ್ನು ಅಳವಡಿಸುವುದು ಮತ್ತು ಶೌಚಾಲಯಗಳನ್ನು ನಿರ್ಮಿಸುವಲ್ಲಿ ರಾಜ್ಯವು “ವಿಳಂಬ” ಮಾಡುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 30 ರಂದು ಅಸಮಾಧಾನ ವ್ಯಕ್ತಪಡಿಸಿತು ಮತ್ತು ಅಕ್ಟೋಬರ್ 15 ರೊಳಗೆ ಅದನ್ನು ಪೂರ್ಣಗೊಳಿಸಲು ಆದೇಶಿಸಿತ್ತು.
ಇದನ್ನೂ ಓದಿ: ಗಡಿಯಾರ ಚಿಹ್ನೆ ಬಳಕೆ ಕುರಿತು ‘ಸೂಚನೆ’ ಪ್ರಕಟಿಸುತ್ತೇವೆ: ಎನ್‌ಸಿಪಿ ಅಜಿತ್ ಪವಾರ್ ಬಣ
ಗಡಿಯಾರ ಚಿಹ್ನೆ ಬಳಕೆ ಕುರಿತು ‘ಸೂಚನೆ’ ಪ್ರಕಟಿಸುತ್ತೇವೆ: ಎನ್‌ಸಿಪಿ ಅಜಿತ್ ಪವಾರ್ ಬಣ


