Homeಮುಖಪುಟಗುಜರಾತ್‌ನ ಬಿಳಿ ಈರುಳ್ಳಿ ಬೆಳೆಯುವ ರೈತರಿಗೆ ಮಾತ್ರ ಏಕೆ ಆದ್ಯತೆ ನೀಡಿದಿರಿ - ಪ್ರಧಾನಿಗೆ ಕಾಂಗ್ರೆಸ್...

ಗುಜರಾತ್‌ನ ಬಿಳಿ ಈರುಳ್ಳಿ ಬೆಳೆಯುವ ರೈತರಿಗೆ ಮಾತ್ರ ಏಕೆ ಆದ್ಯತೆ ನೀಡಿದಿರಿ – ಪ್ರಧಾನಿಗೆ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಮಹಾರಾಷ್ಟ್ರದ ಈರುಳ್ಳಿ ಬೆಳೆಯುವ ರೈತರಿಗಿಂತ ಗುಜರಾತ್‌ನ ಬಿಳಿ ಈರುಳ್ಳಿ ರೈತರಿಗೆ ಏಕೆ ಆದ್ಯತೆ ನೀಡಲಾಗಿದೆ ಮತ್ತು ಮಹಾರಾಷ್ಟ್ರದಲ್ಲಿ ಆದಿವಾಸಿಗಳ ಅರಣ್ಯ ಹಕ್ಕುಗಳನ್ನು ಬಿಜೆಪಿ ಏಕೆ ದುರ್ಬಲಗೊಳಿಸಿದೆ ಎಂದು ಕಾಂಗ್ರೆಸ್ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದೆ. ಧುಲೆ ಮತ್ತು ನಾಸಿಕ್‌ನಲ್ಲಿ ಪ್ರಧಾನಿ ಮೋದಿಯವರ ರ್ಯಾಲಿಗಳಿಗೆ ಮುಂಚಿತವಾಗಿ ಕಾಂಗ್ರೆಸ್ ಈ ಪ್ರಶ್ನೆಗಳನ್ನು ಪ್ರಧಾನಿಯ ಮುಂದಿಟ್ಟಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಅವರು X ನಲ್ಲಿ ಈ ಪ್ರಶ್ನೆಗಳನ್ನು ಹಾಕಿದ್ದಾರೆ. ಗುಜರಾತ್‌

ಕಳೆದ ವರ್ಷ ಡಿಸೆಂಬರ್‌ನಿಂದ ಮಹಾರಾಷ್ಟ್ರದ ಈರುಳ್ಳಿ ರಫ್ತಿನ ಮೇಲೆ ಮೋದಿ ಸರ್ಕಾರ ಹೇರಿದ ನಿರ್ಬಂಧದಿಂದ ಈರುಳ್ಳಿ ರೈತರು ತತ್ತರಿಸಿ ಹೋಗಿದ್ದಾರೆ. ಬೆಳೆಯ ಋತುವಿನಲ್ಲಿ ಹವಾಮಾನ ಮತ್ತು ನೀರಿನ ಬಿಕ್ಕಟ್ಟಿನಿಂದ ರೈತರು ತಮ್ಮ ಸಾಮಾನ್ಯ ಬೆಳೆಯಲ್ಲಿ ಕೇವಲ 50% ದಷ್ಟು ಮಾತ್ರ ಉತ್ಪಾದಿಸಲು ಸಾಧ್ಯವಾಯಿತು ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅಂತಿಮವಾಗಿ ಈರುಳ್ಳಿಯನ್ನು ಕೊಯ್ಲು ಮಾಡಿದಾಗ, ರೈತರು ಅನಿಯಂತ್ರಿತ ರಫ್ತು ನಿಷೇಧವನ್ನು ಎದುರಿಸಿದ್ದಾರೆ. ಈ ನಿಷೇಧ ಅವರಿಗೆ ಮಾರಕವಾಗಿ ಕಡಿಮೆ ಬೆಲೆಗೆ ಬೆಳೆಯನ್ನು ಮಾರಾಟ ಮಾಡಬೇಕಾಯಿತು. ಈ ಮೂಲಕ ಅವರು ಭಾರಿ ನಷ್ಟ ಅನುಭವಿಸಿದರು. ಆದರೆ ಕೇಂದ್ರ ಸರ್ಕಾರ ಇದನ್ನು ಮತ್ತಷ್ಟು ಹದಗೆಡಿಸಿದ್ದು, ಬಿಳಿ ಈರುಳ್ಳಿ ರಫ್ತು ಮಾಡಲು ಅವಕಾಶ ಮಾಡಿಕೊಟ್ಟಿತ್ತು. ಈ ಈರುಳ್ಳಿಯನ್ನು ಪ್ರಾಥಮಿಕವಾಗಿ ಗುಜರಾತ್‌ನಲ್ಲಿ ಬೆಳೆಯಲಾಗುತ್ತದೆ. ಆದರೆ ಕೆಂಪು ಈರುಳ್ಳಿ ಬೆಳೆಯುವ ಮಹಾರಾಷ್ಟ್ರದ ರೈತರು ರಫ್ತು ನಿಷೇಧದಿಂದ ಎರಡು ತಿಂಗಳು ಹೊರಗುಳಿದರು. ಈ ನಿಷೇಧ ತೆರವು ಮಾಡಿದ್ದರೂ, ರಫ್ತಿನ ಮೇಲೆ 20% ಸುಂಕವು ಜಾರಿಯಲ್ಲಿದೆ” ಎಂದು ಅವರು ಹೇಳಿದ್ದಾರೆ. ಗುಜರಾತ್‌

“ಜೈವಿಕವಲ್ಲದ ಪ್ರಧಾನಿ ಅವರು ಈ ರೀತಿಯಾಗಿ ಪಕ್ಷಾಪಾತ ಮಾಡಿದರು ಎಂದು ವಿವರಿಸಬಹುದೇ? ಗುಜರಾತ್‌ನ ಈರುಳ್ಳಿ ಬೆಳೆಯುವ ರೈತರ ಪರವಾಗಿ ಕಾಳಜಿ ವ್ಯಕ್ತಪಡಿಸುವಾಗ, ಮಹಾರಾಷ್ಟ್ರದ ಈರುಳ್ಳಿ ರೈತರನ್ನು ಅವರು ಏಕೆ ನಿರ್ಲಕ್ಷಿಸಿದ್ದಾರೆ?” ಎಂದು ರಮೇಶ್ ಅವರು ತಮ್ಮ ಪೋಸ್ಟ್‌ನಲ್ಲಿ ಕೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಆದಿವಾಸಿಗಳ ಅರಣ್ಯ ಹಕ್ಕುಗಳನ್ನು ಬಿಜೆಪಿ ದುರ್ಬಲಗೊಳಿಸಿದೆ

2006 ರಲ್ಲಿ ಕಾಂಗ್ರೆಸ್ ಅರಣ್ಯ ಹಕ್ಕುಗಳ ಕಾಯಿದೆ (ಎಫ್‌ಆರ್‌ಎ) ಅನ್ನು ಅಂಗೀಕರಿಸಿತು, ಇದು ಆದಿವಾಸಿ ಮತ್ತು ಅರಣ್ಯ-ವಾಸಿಸುವ ಸಮುದಾಯಗಳಿಗೆ ತಮ್ಮದೇ ಆದ ಕಾಡುಗಳನ್ನು ನಿರ್ವಹಿಸಲು ಕಾನೂನು ಹಕ್ಕುಗಳನ್ನು ನೀಡಿತು ಎಂದು ರಮೇಶ್ ಹೇಳಿದ್ದಾರೆ. ಆದರೆ ಈ ಅರಣ್ಯ ಹಕ್ಕು ಕಾಯ್ದೆ (ಎಫ್‌ಆರ್‌ಎ) ಅನುಷ್ಠಾನಕ್ಕೆ ಬಿಜೆಪಿ ಸರ್ಕಾರ ಅಡ್ಡಿಪಡಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಕಾಯ್ದೆಗೆ ಅಡ್ಡಿಪಡಿಸಿದ ಕಾರಣಕ್ಕೆ ಲಕ್ಷಾಂತರ ಆದಿವಾಸಿಗಳು ಅದರ ಪ್ರಯೋಜನಗಳಿಂದ ವಂಚಿತರಾಗಿದ್ದಾರೆ. ಅವರು ಸಲ್ಲಿಸಿದ 401, 046 ವೈಯಕ್ತಿಕ ಹಕ್ಕುಗಳಲ್ಲಿ ಕೇವಲ 52% ವನ್ನು ಮಾತ್ರ ಅನುಮೋದಿಸಲಾಗಿದೆ ಮತ್ತು ಸಮುದಾಯ ಹಕ್ಕುಗಳಿಗೆ ಅರ್ಹವಾದ 50,045 ಚದರ ಕಿಮೀಗಳಲ್ಲಿ ಕೇವಲ 23.5% ದಷ್ಟು (11,769 ಚದರ ಕಿಮೀ) ಭೂಮಿ ಹಕ್ಕುಗಳನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

“ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಆದಿವಾಸಿ ಸಮುದಾಯಗಳಿಗೆ ಅವರ ಹಕ್ಕುಗಳನ್ನು ಒದಗಿಸಲು ಏಕೆ ವಿಫಲವಾಗಿದೆ?” ರಮೇಶ್ ಕೇಳಿದ್ದು, ನಾಸಿಕ್ ಮುನ್ಸಿಪಲ್ ಕಾರ್ಪೊರೇಶನ್‌ಗೆ ಮಹಾಯುತಿ ಸರ್ಕಾರ ಏಕೆ ಚುನಾವಣೆ ನಡೆಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೋಲ್ಕತ್ತಾ ಅತ್ಯಾಚಾರ – ಕೊಲೆ ಪ್ರಕರಣ | ವಿಚಾರಣೆಯನ್ನು ಪ.ಬಂಗಾಳದಿಂದ ವರ್ಗಾಯಿಸಲು ಸುಪ್ರೀಂ ನಕಾರ

ಕೋಲ್ಕತ್ತಾ ಅತ್ಯಾಚಾರ – ಕೊಲೆ ಪ್ರಕರಣ | ವಿಚಾರಣೆಯನ್ನು ಪ.ಬಂಗಾಳದಿಂದ ವರ್ಗಾಯಿಸಲು ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...