Homeಕರ್ನಾಟಕರೈತನ ಆತ್ಮಹತ್ಯೆಗೆ ವಕ್ಫ್ ಕಥೆ ಕಟ್ಟಿದ ಮಾಧ್ಯಮಗಳು : ಸುಳ್ಳು ಸುದ್ದಿ ಹಂಚಿಕೊಂಡ ಸಂಸದ ತೇಜಸ್ವಿ...

ರೈತನ ಆತ್ಮಹತ್ಯೆಗೆ ವಕ್ಫ್ ಕಥೆ ಕಟ್ಟಿದ ಮಾಧ್ಯಮಗಳು : ಸುಳ್ಳು ಸುದ್ದಿ ಹಂಚಿಕೊಂಡ ಸಂಸದ ತೇಜಸ್ವಿ ಸೂರ್ಯ

- Advertisement -
- Advertisement -

“ತನ್ನ ಜಮೀನಿನ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ನಮೂದು ಆಗಿದ್ದಕ್ಕೆ ಮನನೊಂದು ಹಾವೇರಿಯ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ನಿನ್ನೆ (ನ.7) ಕನ್ನಡದ ಕೆಲ ಮಾಧ್ಯಮಗಳು ಸುದ್ದಿ ಪ್ರಸಾರ ಮಾಡಿತ್ತು. ಈ ಸುದ್ದಿಯನ್ನು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಎಕ್ಸ್‌ನಲ್ಲಿ ಹಂಚಿಕೊಂಡಿದ್ದರು. ಆದರೆ, ಅದು ಸುಳ್ಳು ಸುದ್ದಿ ಎಂದು ಹಾವೇರಿ ಪೊಲೀಸರು ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದ್ದಾರೆ.

ಕನ್ನಡ ಸುದ್ದಿ ವೆಬ್‌ಸೈಟ್‌ಗಳಾದ ‘ಕನ್ನಡ ನ್ಯೂಸ್‌ ನೌ, ಕನ್ನಡ ದುನಿಯಾ, ಪಬ್ಲಿಕ್ ಟಿವಿ‘ ಸೇರಿದಂತೆ ಕೆಲ ಮಾಧ್ಯಮಗಳು ‘ಜಮೀನಿನ ಪಹಣಿಯಲ್ಲಿ ‘ವಕ್ಫ್’ ಹೆಸರು ನಮೂದು, ಹಾವೇರಿಯಲ್ಲಿ ಮನನೊಂದು ರೈತ ಆತ್ಮಹತ್ಯೆ’ ಎಂಬ ಶೀರ್ಷಿಕೆಗಳಲ್ಲಿ ಸುಳ್ಳು ಸುದ್ದಿ ಪ್ರಕಟಿಸಿತ್ತು.

ಈ ಪೈಕಿ ಕನ್ನಡ ದುನಿಯಾ ಪ್ರಕಟಿಸಿದ್ದ ಸುದ್ದಿಯ ಸ್ಕ್ರೀನ್ ಶಾಟ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದ ಸಂಸದ ತೇಜಸ್ವಿ ಸೂರ್ಯ,”ತನ್ನ ಭೂಮಿಯನ್ನು ವಕ್ಫ್‌ ಕಬಳಿಸಿದೆ ಎಂದು ಗೊತ್ತಾಗಿ ಹಾವೇರಿಯಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಝಮೀರ್ ಅಹ್ಮದ್ ಅವರ ಅಲ್ಪಸಂಖ್ಯಾತರನ್ನು ಓಲೈಸುವ ತರಾತುರಿಯಿಂದ ಕರ್ನಾಟಕ ಪ್ರತಿದಿನ ದುರಂತ ಪರಿಣಾಮಗಳನ್ನು ಎದುರಿಸುತ್ತಿದೆ” ಎಂದು ಬರೆದುಕೊಂಡಿದ್ದರು. ಪ್ರಸ್ತುತ ಈ ಪೋಸ್ಟ್‌ ಅನ್ನು ತೇಜಸ್ವಿ ಸೂರ್ಯ ಡಿಲಿಟ್ ಮಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರೂ ಕೂಡ ಇದೇ ಸುಳ್ಳು ಸುದ್ದಿಯನ್ನು ಹಂಚಿಕೊಂಡಿದ್ದರು ಎಂದು ವರದಿಯಾಗಿದೆ. ಆದರೆ, ಅವರ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ನಮಗೆ ಆ ರೀತಿಯ ಪೋಸ್ಟ್‌ಗಳು ಕಂಡು ಬಂದಿಲ್ಲ.

ಸುಳ್ಳು ಸುದ್ದಿ ಪೊಲೀಸರಿಂದ ಸ್ಪಷ್ಟನೆ

ಮಾಧ್ಯಮಗಳು ಪ್ರಕಟಿಸಿದ ಮತ್ತು ತೇಜಸ್ವಿ ಸೂರ್ಯ ಹಂಚಿಕೊಂಡಿದ್ದ ಸುದ್ದಿ ಸುಳ್ಳು ಎಂಬುವುದನ್ನು ಹಾವೇರಿ ಜಿಲ್ಲಾ ಪೊಲೀಸ್ ಫ್ಯಾಕ್ಟ್‌ಚೆಕ್ ಮೂಲಕ ಸ್ಪಷ್ಟಪಡಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್ಪಿ, “07.11.2024 ರಂದು ಕನ್ನಡ ನ್ಯೂಸ್ ನೌ ಎಂಬ ಹೆಸರಿನ ಡಿಜಿಟಲ್ ನ್ಯೂಸ್‌ನಲ್ಲಿ ಹಾವೇರಿ ಜಿಲ್ಲೆಯ ಹರಣಗಿ ಗ್ರಾಮದ ರೈತ ಚನ್ನಪ್ಪ ಎಂಬುವವರ ಪುತ್ರ ರುದ್ರಪ್ಪ ಎಂಬ ರೈತ, 8 ವರ್ಷಗಳ ಹಿಂದೆ 4 ಎಕರೆ ಹೊಲದ ಪಹಣಿಯಲ್ಲಿ ವಕ್ಫ್ ಹೆಸರು ಬಂದಿರುವುದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವದಾಗಿ ಹಾವೇರಿ ರೈತರು ಆರೋಪಿಸಿದ್ದಾರೆಂದು ವರದಿ ಪ್ರಕಟ ಮಾಡಿರುತ್ತಾರೆ. ಆದರೆ, ಮೃತ ರುದ್ರಪ್ಪ ತಂದೆ ಚನ್ನಪ್ಪ ಬಾಳಿಕಾಯಿ ಇತನು ತಮ್ಮ ಆಸ್ತಿಯ ಪಹಣಿಯಲ್ಲಿ ವಕ್ಫ್ ಎಂದು ನಮೂದು ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಯಾವುದೇ ರೀತಿ ಪ್ರಕರಣ ದಾಖಲಾಗಿರುವುದಿಲ್ಲ” ಎಂದು ತಿಳಿಸಿದ್ದಾರೆ.

“ದಿನಾಂಕ 06.01.2022 ರಂದು ಚನ್ನಪ್ಪ ಬಾಳಿಕಾಯಿ ಅವರ ಮಗ ರುದ್ರಪ್ಪ ಐಸಿಐಸಿಐ ಬ್ಯಾಂಕ್ ಹಾವೇರಿ ಶಾಖೆಯಲ್ಲಿ 3 ಲಕ್ಷ ಹಾಗೂ ಖಾಸಗಿಯಾಗಿ 4 ಲಕ್ಷ ರೂಪಾಯಿ ಕೈಸಾಲ ಮಾಡಿಕೊಂಡಿದ್ದು, ಅತೀ ಹೆಚ್ಚು ಮಳೆಯಾಗಿ ಬೆಳೆ ಹಾನಿಯಾಗಿದ್ದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಅವರ ತಂದೆ ಚನ್ನಪ್ಪ ಬಾಳಿಕಾಯಿ ದೂರು ನೀಡಿದ್ದು, ಆಡೂರ ಪೊಲೀಸ್ ಠಾಣೆ ಯುಡಿಆರ್ ಸಂಖ್ಯೆ: 03/2022, ಕಲಂ: 174 ಸಿಆರ್‌ಪಿಸಿ ಪ್ರಕಾರ ಯುಡಿಆ‌ರ್ ದಾಖಲಿಸಿಕೊಳ್ಳಲಾಗಿದೆ. ಅದರಲ್ಲಿ ತಮ್ಮ ಆಸ್ತಿಯಲ್ಲಿ ವಕ್ಫ್ ಎಂದು ನಮೂದಾಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಯಾವುದೇ ರೀತಿ ನಮೂದಿಸಿರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಮೃತರ ಬಗ್ಗೆ ಆಡೂರ ಪಿಎಸ್‌ಐ ರವರು ತನಿಖೆ ಕೈಗೊಂಡು, ಬೆಳೆ ಹಾನಿಯಾಗಿದ್ದರಿಂದ ಸಾಲ ಮಾಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಸಾಕ್ಷಾಧಾರಗಳನ್ನು ಸಂಗ್ರಹಿಸಿ, ಅಂತಿಮ ವರದಿಯನ್ನು ಹಾನಗಲ್ ತಹಶೀಲ್ದಾರ್‌ರಿಗೆ ಸಲ್ಲಿಸಿರುತ್ತಾರೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ಒದಗಿಸಲಾಗಿರುತ್ತದೆ” ಎಂದು ಫ್ಯಾಕ್ಟ್ ಚೆಕ್ ಪ್ರಕಟಣೆಯಲ್ಲಿ ಎಸ್ಪಿ ತಿಳಿಸಿದ್ದಾರೆ.

ಪೊಲೀಸರ ಈ ಪ್ರಕಟಣೆಯಿಂದ ಸಂಸದ ತೇಜಸ್ವಿ ಸೂರ್ಯ ಸುಳ್ಳು ಸುದ್ದಿ ಹಂಚಿಕೊಂಡಿರುವುದು ಖಚಿತವಾಗಿದೆ. ಹಾಗಾಗಿ, ಅವರ ವಿರುದ್ದ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಸಾಗರ | ಆರ್‌ಎಸ್‌ಎಸ್‌ ಮುಖಂಡ ವನಶ್ರೀ ಮಂಜಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...