Homeಕರ್ನಾಟಕರೈತನ ಆತ್ಮಹತ್ಯೆ ಬಗ್ಗೆ ಸುಳ್ಳು ಸುದ್ದಿ ಹಂಚಿಕೆ : ಸಂಸದ ತೇಜಸ್ವಿ ಸೂರ್ಯ, ನ್ಯೂಸ್ ಪೋರ್ಟಲ್‌ಗಳ...

ರೈತನ ಆತ್ಮಹತ್ಯೆ ಬಗ್ಗೆ ಸುಳ್ಳು ಸುದ್ದಿ ಹಂಚಿಕೆ : ಸಂಸದ ತೇಜಸ್ವಿ ಸೂರ್ಯ, ನ್ಯೂಸ್ ಪೋರ್ಟಲ್‌ಗಳ ಸಂಪಾದಕರ ವಿರುದ್ಧ ಎಫ್‌ಐಆರ್

- Advertisement -
- Advertisement -

“ತನ್ನ ಜಮೀನಿನ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ನಮೂದು ಆಗಿದ್ದಕ್ಕೆ ಮನನೊಂದು ಹಾವೇರಿಯ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಸುಳ್ಳು ಸುದ್ದಿ ಪ್ರಕಟಿಸಿದ ಮಾಧ್ಯಮಗಳು ಮತ್ತು ಅದೇ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ದ ಎಫ್‌ಐಆರ್ ದಾಖಲಾಗಿದೆ.

ಸುಳ್ಳು ಸುದ್ದಿ ಹಂಚಿಕೆ ಸಂಬಂಧ ಸಂಸದ ತೇಜಸ್ವಿ ಸೂರ್ಯ, ಕನ್ನಡ ದುನಿಯಾ ಈ-ಪೇಪರ್ ಮತ್ತು ಕನ್ನಡ ನ್ಯೂಸ್ ಈ-ಪೇಪರ್ ಸುದ್ದಿ ತಾಣಗಳ ಸಂಪಾದಕರ ವಿರುದ್ದ ಹಾವೇರಿಯ ಸೈಬರ್, ಆರ್ಥಿಕ ಹಾಗೂ ಮಾದಕ ದ್ರವ್ಯ ನಿಯಂತ್ರಣ (ಸಿಇಎನ್) ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 353 (2) (ವಿವಿಧ ಗುಂಪುಗಳ ನಡುವೆ ದ್ವೇಷ ಬಿತ್ತುವ ಹಾಗೂ ದ್ವೇಷ ಉಂಟು ಮಾಡಲು ಪ್ರಚೋದಿಸುವ ಸುಳ್ಳು ಸುದ್ದಿ) ಅಡಿ ಪ್ರಕರಣ ದಾಖಲಾಗಿದೆ.

ಕನ್ನಡ ಸುದ್ದಿ ವೆಬ್‌ಸೈಟ್‌ಗಳಾದ ‘ಕನ್ನಡ ನ್ಯೂಸ್‌ ನೌ, ಕನ್ನಡ ದುನಿಯಾ, ಪಬ್ಲಿಕ್ ಟಿವಿ‘ ಸೇರಿದಂತೆ ಕೆಲ ಮಾಧ್ಯಮಗಳು ‘ಜಮೀನಿನ ಪಹಣಿಯಲ್ಲಿ ‘ವಕ್ಫ್’ ಹೆಸರು ನಮೂದು, ಹಾವೇರಿಯಲ್ಲಿ ಮನನೊಂದು ರೈತ ಆತ್ಮಹತ್ಯೆ’ ಎಂಬ ಶೀರ್ಷಿಕೆಗಳಲ್ಲಿ ಸುಳ್ಳು ಸುದ್ದಿ ಪ್ರಕಟಿಸಿತ್ತು.

‘ತನ್ನ 4 ಎಕರೆ ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದು ಆಗಿದ್ದಕ್ಕೆ ಮನನೊಂದು ಹಾವೇರಿ ಜಿಲ್ಲೆಯ ಹರನಗಿ ಗ್ರಾಮದ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಕ್ಫ್ ನೋಟಿಸ್ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಗೆ ಆಗಮಿಸಿದ ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ಪರಿಶೀಲನೆಯ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಂಬಿಕಾ ಪಾಲ್ ಅವರಿಗೂ ರೈತರು ಈ ಕುರಿತು ದೂರು ನೀಡಿದ್ದಾರೆ’ ಎಂದು ವರದಿಗಳಲ್ಲಿ ಹೇಳಿತ್ತು.

ಇದೇ ಸುದ್ದಿಯನ್ನು ಸಂಸದ ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಎಕ್ಸ್‌ನಲ್ಲಿ ಹಂಚಿಕೊಂಡು, ಬಳಿಕ ಡಿಲಿಟ್ ಮಾಡಿದ್ದರು. ಆದರೆ, ರೈತ ರುದ್ರಪ್ಪ ಐಸಿಐಸಿಐ ಬ್ಯಾಂಕ್ ಹಾವೇರಿ ಶಾಖೆಯಲ್ಲಿ 3 ಲಕ್ಷ ಹಾಗೂ ಖಾಸಗಿಯಾಗಿ 4 ಲಕ್ಷ ರೂಪಾಯಿ ಕೈಸಾಲ ಮಾಡಿಕೊಂಡಿದ್ದು, ಅತೀ ಹೆಚ್ಚು ಮಳೆಯಾಗಿ ಬೆಳೆ ಹಾನಿಯಾಗಿದ್ದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಅವರ ಆತ್ಮಹತ್ಯೆಗೂ ವಕ್ಫ್ ವಿಷಯಕ್ಕೂ ಸಂಬಂಧವಿಲ್ಲ ಎಂದು ಹಾವೇರಿ ಪೊಲೀಸರು ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಸುಳ್ಳು ಸುದ್ದಿ ಹರಡಿದ್ದರ ವಿರುದ್ದ ಸುನಿಲ್ ಹುಚ್ಚಣ್ಣನವರ ಎಂಬವರು ದೂರು ನೀಡಿದ್ದಾರೆ. ದೂರು ಪರಿಗಣಿಸಿದ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ : ರೈತನ ಆತ್ಮಹತ್ಯೆಗೆ ವಕ್ಫ್ ಕಥೆ ಕಟ್ಟಿದ ಮಾಧ್ಯಮಗಳು : ಸುಳ್ಳು ಸುದ್ದಿ ಹಂಚಿಕೊಂಡ ಸಂಸದ ತೇಜಸ್ವಿ ಸೂರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...