Homeಮುಖಪುಟಗ್ಯಾರಂಟಿ ಯೋಜನೆ ಕುರಿತು ಜಾಹೀರಾತು : ಮಹಾರಾಷ್ಟ್ರ ಬಿಜೆಪಿಗೆ ಕ್ರಮದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆ ಕುರಿತು ಜಾಹೀರಾತು : ಮಹಾರಾಷ್ಟ್ರ ಬಿಜೆಪಿಗೆ ಕ್ರಮದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮಹಾರಾಷ್ಟ್ರ ಬಿಜೆಪಿಗೆ ಕ್ರಮದ ಎಚ್ಚರಿಕೆ ನೀಡಿದ ಸಿಎಂ

- Advertisement -
- Advertisement -

‘ವಾದಾ ಕಿಯಾ ದೋಖಾ ದಿಯಾ’ ಎಂದು ಕರ್ನಾಟಕ, ತೆಲಂಗಾಣ ಮತ್ತು ಹಿಮಾಚಲ ಪ್ರದೇಶದ ಕಾಂಗ್ರೆಸ್‌ ಸರ್ಕಾರಗಳ ಗ್ಯಾರಂಟಿ ಯೋಜನೆ ಬಗ್ಗೆ ಪತ್ರಿಕೆಯಲ್ಲಿ ಜಾಹೀರಾತು ನೀಡಿದ ಮಹಾರಾಷ್ಟ್ರ ಬಿಜೆಪಿ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಆಕ್ರೋಶ ಹೊರ ಹಾಕಿದ ಸಿಎಂ, “ಸುಳ್ಳೇ ಬಿಜೆಪಿಯ ಮನೆ ದೇವರು’ ಎಂದು ನಾವು ಹೇಳುತ್ತಿರುವುದು ಸುಳ್ಳಲ್ಲ. ಮಹಾರಾಷ್ಟ್ರದ ಬಿಜೆಪಿ ನಮ್ಮ ಯಶಸ್ವಿ ಗ್ಯಾರಂಟಿ ಯೋಜನೆಯಾಗಿರುವ ಗೃಹಲಕ್ಷ್ಮಿ ಬಗ್ಗೆ ಒಂದು ಅಪ್ಪಟ ಸುಳ್ಳನ್ನು ಮಾಧ್ಯಮಗಳಲ್ಲಿ ಜಾಹೀರಾತು ಮೂಲಕ ಪ್ರಕಟಿಸಿ, ಸಿಕ್ಕಿ ಹಾಕಿಕೊಂಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಭರವಸೆ ನೀಡಿದಂತೆ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರದೆ ಮೋಸ ಮಾಡಿದೆ ಎನ್ನುವುದು ಬಿಜೆಪಿ ಆರೋಪ. ಪ್ರಧಾನಿ ಮೋದಿಯವರೇ, ಇದೇನು ನಮಗೆ ಆಶ್ಚರ್ಯ ಉಂಟುಮಾಡಿಲ್ಲ. ಮನೆ ಒಡೆಯನ ಬುದ್ದಿ ಮನೆಯವರಿಗೆಲ್ಲ ಬಂದಿದೆ. ಹೋದಲ್ಲಿ ಬಂದಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳುಗಳನ್ನು ಉದುರಿಸುವ ನಿಮ್ಮಿಂದಲೇ ಪ್ರೇರಣೆ ಪಡೆದು ಮಹಾರಾಷ್ಟ್ರ ಬಿಜೆಪಿ ಇಷ್ಟೊಂದು ನಿರ್ಲಜ್ಜತನದಿಂದ ಈ ಹಸಿಸುಳ್ಳನ್ನು ಪ್ರಕಟಿಸಿದೆ ಎನ್ನುವುದು ನಿಸ್ಸಂಶಯ” ಎಂದು ಬರೆದುಕೊಂಡಿದ್ದಾರೆ.

“ಗೃಹಲಕ್ಷ್ಮಿ ಯೋಜನೆಯಡಿ 2023ರ ಆಗಸ್ಟ್ ತಿಂಗಳಿನಿಂದ ಈವರೆಗೆ 1.22 ಕೋಟಿ ಮನೆಯೊಡತಿಯರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಸಂದಾಯವಾಗುತ್ತಿದೆ. ಈ ರೀತಿ ಒಟ್ಟು 30,285 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ. ಅನುಮಾನ ಇದ್ದವರು ಈ 1.22 ಕೋಟಿ ಮನೆ ಒಡತಿಯರನ್ನೇ ಕೇಳಿ ಪರಾಂಬರಿಸಿಕೊಳ್ಳಿ” ಎಂದಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿಯವರೇ, ಇದು ನಿಮ್ಮ ಸುಳ್ಳಿನಿಂದಲೇ ಪ್ರೇರಣೆ ಪಡೆದು ಹೇಳಿರುವ ಸುಳ್ಳಾಗಿರುವ ಕಾರಣ ದಯವಿಟ್ಟು ನಮ್ಮ ಗ್ಯಾರಂಟಿ ಯೋಜನೆ ಬಗ್ಗೆ ಮಹಾರಾಷ್ಟ್ರ ಬಿಜೆಪಿ ಹೇಳಿರುವ ಸುಳ್ಳಿಗಾಗಿ ದೇಶದ ಜನತೆಯ ಕ್ಷಮೆ ಯಾಚಿಸಿ, ಸತ್ಯಸಂಗತಿಯನ್ನು ಸಾರ್ವಜನಿಕರಿಗೆ ತಿಳಿಸಬೇಕೆಂದು ಎಂದು ಆಗ್ರಹಿಸುತ್ತೇನೆ” ಎಂದು ಹೇಳಿದ್ದಾರೆ.

“ಮಹಾರಾಷ್ಟ್ರ ಬಿಜೆಪಿ ತಾನು ಪ್ರಕಟಿಸಿರುವ ಸುಳ್ಳಿನ ಜಾಹೀರಾತಿನಷ್ಟೇ ಗಾತ್ರದ ಜಾಹೀರಾತಿನಲ್ಲಿ ಸತ್ಯ ಸಂಗತಿಯನ್ನು ತಿಳಿಸಿ ಅಲ್ಲಿನ ಎಲ್ಲ ಮಾಧ್ಯಮಗಳಲ್ಲಿ ಪ್ರಕಟಿಸುವಂತೆ ನೋಡಿಕೊಳ್ಳಬೇಕು. ಇದಕ್ಕೆ ತಪ್ಪಿದ್ದಲ್ಲಿ ನಮ್ಮ ಸರ್ಕಾರ ಮುಂದಿನ ಕ್ರಮದ ಬಗ್ಗೆ ಯೋಚನೆ ಮಾಡಲಿದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ರೈತನ ಆತ್ಮಹತ್ಯೆ ಬಗ್ಗೆ ಸುಳ್ಳು ಸುದ್ದಿ ಹಂಚಿಕೆ : ಸಂಸದ ತೇಜಸ್ವಿ ಸೂರ್ಯ, ನ್ಯೂಸ್ ಪೋರ್ಟಲ್‌ಗಳ ಸಂಪಾದಕರ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...