Homeಅಂತರಾಷ್ಟ್ರೀಯಸಾಮಾಜಿಕ ಮಾಧ್ಯಮ ಬಳಸಲು 16 ವರ್ಷ ಆಗಿರಬೇಕು - ಆಸ್ಟ್ರೇಲಿಯಾ ಸರ್ಕಾರದಿಂದ ಕಾನೂನು ಪ್ರಸ್ತಾಪ

ಸಾಮಾಜಿಕ ಮಾಧ್ಯಮ ಬಳಸಲು 16 ವರ್ಷ ಆಗಿರಬೇಕು – ಆಸ್ಟ್ರೇಲಿಯಾ ಸರ್ಕಾರದಿಂದ ಕಾನೂನು ಪ್ರಸ್ತಾಪ

- Advertisement -
- Advertisement -

ಮಕ್ಕಳು ಸಾಮಾಜಿಕ ಮಾಧ್ಯಮವನ್ನು ಬಳಸಲು ಪ್ರಾರಂಭಿಸಲು 16 ವರ್ಷಗಳ ವಯಸ್ಸಿನ ಮಿತಿಯನ್ನು ಹೇರುವ ಕಾನೂನು ಪರಿಚಯಿಸಲು ಆಸ್ಟ್ರೇಲಿಯ ಸರ್ಕಾರ ಮುಂದಾಗಿದೆ. ಈ ಕಾನೂನು ಅನುಸರಣೆಯಾಗುತ್ತಿದೆ ಎಂದು ಖಾತ್ರಿಪಡಿಸುವ ಜವಾಬ್ದಾರಿ ಸಾಮಾಜಿಕ ಮಾಧ್ಯಮಗಳಿಗೆ ಹೊರಿಸುತ್ತಿರುವುದಾಗಿ ಆಸ್ಟ್ರೇಲಿಯಾ ಸರ್ಕಾರ ಗುರುವಾರ ಘೋಷಿಸಿತು. ಸಾಮಾಜಿಕ ಮಾಧ್ಯಮ ಬಳಸಲು

“ಸಾಮಾಜಿಕ ಮಾಧ್ಯಮವು ನಮ್ಮ ಮಕ್ಕಳಿಗೆ ಹಾನಿ ಮಾಡುತ್ತಿದೆ. ಇಂತಹ ಕಾನೂನು ಪರಿಚಯಿಸಲು ಇದು ಸಕಾಲ ಎಂದು ನಾನು ಭಾವಿಸುತ್ತಿದ್ದೇನೆ” ಎಂದು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಆಂಥೋನಿ ಅಲ್ಬನೀಸ್ ಹೇಳಿದ್ದಾರೆ. ನವೆಂಬರ್ 18 ರಂದು ಪ್ರಾರಂಭವಾಗುವ ಈ ವರ್ಷದ ಅಧಿವೇಶನದ ಕೊನೆಯ ಎರಡು ವಾರಗಳಲ್ಲಿ ಶಾಸನವನ್ನು ಸಂಸತ್ತಿನಲ್ಲಿ ಪರಿಚಯಿಸಲಾಗುವುದು ಎಂದು ಹೇಳಿರುವ ಅವರು, ಕಾನೂನು ಅಂಗೀಕರಿಸಿದ 12 ತಿಂಗಳ ನಂತರ ಸಾಮಾಜಿಕ ಮಾಧ್ಯಮ ಬಳಸಲು ಪ್ರಾರಂಭಿಸುವ ವಯಸ್ಸಿನ ಮಿತಿಯು ಜಾರಿಗೆ ಬರಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಕ್ಸ್‌, ಟಿಕ್‌ಟಾಕ್, ಇನ್ಸ್‌ಟಾಗ್ರಾಮ್ ಮತ್ತು ಫೇಸ್‌ಬುಕ್ ಸೇರಿದಂತೆ ಸಾಮಾಜಿಕ ಮಾಧ್ಯಮ ಕಂಪೆನಿಗಳು 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಆಸ್ಟ್ರೇಲಿಯನ್ ಮಕ್ಕಳನ್ನು ಅದರಿಂದ ಹೇಗೆ ಹೊರಗಿಡಬಹುದು ಎಂಬ ಬಗ್ಗೆ ಈ ಒಂದು ವರ್ಷದಲ್ಲಿ ಕೆಲಸ ಮಾಡಬೇಕು ಎಂದು ಅವರು ಹೇಳಿದ್ದಾರೆ.

“ನಾನು ಸಾವಿರಾರು ಪೋಷಕರು, ಅಜ್ಜಿಯರು, ಅಂಕಲ್ ಮತ್ತು ಆಂಟಿಯರೊಂದಿಗೆ ಈ ಬಗ್ಗೆ ಮಾತನಾಡಿದ್ದೇನೆ. ಅವರು, ನನ್ನಂತೆಯೆ ಆನ್‌ಲೈನ್‌ನಲ್ಲಿ ನಮ್ಮ ಮಕ್ಕಳ ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ” ಎಂದು ಪ್ರಧಾನಿ ಅಲ್ಬನೀಸ್ ಹೇಳಿದ್ದಾರೆ. ಸ್ಮಾರ್ಟ್‌ಫೋನ್‌ಗಳು ಮತ್ತು ಸಾಮಾಜಿಕ ಮಾಧ್ಯಮಗಳಂತಹ ತಂತ್ರಜ್ಞಾನಗಳನ್ನು ಬಳಸುತ್ತಿರುವ ಯುವಜನರನ್ನು ಮೇಲ್ವಿಚಾರಣೆ ಮಾಡುವುದು ಹೇಗೆ ಎಂಬುದರ ಕುರಿತು ಪ್ರಪಂಚದಾದ್ಯಂತದ ಸರ್ಕಾರಗಳು ಚಿಂತಿಸುತ್ತಿರುವಾಗ ಆಸ್ಟ್ರೇಲಿಯಾ ಸರ್ಕಾರ ಈ ಪ್ರಸ್ತಾಪ ಮಾಡಿದೆ.

ಆಸ್ಟ್ರೇಲಿಯಾ ಸರ್ಕಾರ ಪ್ರಸ್ತಾಪ ಮಾಡಿರುವ ಕಾನೂನಿನಲ್ಲಿ, ವಯೋಮಿತಿಯನ್ನು ಉಲ್ಲಂಘಿಸಿದ್ದಕ್ಕಾಗಿ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ದಂಡ ವಿಧಿಸಲಾಗುತ್ತದೆ. ಆದರೆ ಅದರನ್ನು ಬಳಸಿದ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮತ್ತು ಅವರ ಪೋಷಕರಿಗೆ ಯಾವುದೆ ದಂಡವನ್ನು ಕಾನೂನು ಪ್ರಸ್ತಾಪಿಸಿಲ್ಲ. “ಸಾಮಾಜಿಕ ಮಾಧ್ಯಮಗಳಿಗೆ ಪ್ರವೇಶವನ್ನು ತಡೆಗಟ್ಟಲು ಫ್ಲಾಟ್‌ಫಾರ್ಮ್‌ ಅವರೆ ಸಮಂಜಸವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅದು ಅವರ ಜವಾಬ್ದಾರಿಯಾಗಿದ್ದು, ಈ ಜವಾಬ್ದಾರಿಯು ಪೋಷಕರು ಅಥವಾ ಮಕ್ಕಳ ಮೇಲೆ ಇರುವುದಿಲ್ಲ” ಎಂದು ಪ್ರಧಾನಿ ಅಲ್ಬನೀಸ್ ಹೇಳಿದ್ದಾರೆ.

ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನ ಸುರಕ್ಷತಾ ಮುಖ್ಯಸ್ಥ ಆಂಟಿಗೋನ್ ಡೇವಿಸ್, ಸರ್ಕಾರವು ಪರಿಚಯಿಸಲು ಬಯಸುವ ಯಾವುದೇ ವಯಸ್ಸಿನ ಮಿತಿಗಳನ್ನು ಕಂಪನಿಯು ಗೌರವಿಸುತ್ತದೆ ಎಂದು ಹೇಳಿದ್ದಾರೆ. ಆದರೆ, ಆಸ್ಟ್ರೇಲಿಯಾದಲ್ಲಿ ಡಿಜಿಟಲ್ ಉದ್ಯಮದ ಪರ ವಾದಿಸುವ ಡಿಜಿಟಲ್ ಇಂಡಸ್ಟ್ರಿ ಗ್ರೂಪ್ Inc, ಸರ್ಕಾರ ನೀತಿಯನ್ನು ಟೀಕಿಸಿದ್ದು, “21 ನೇ ಶತಮಾನದ ಸವಾಲುಗಳಿಗೆ 20 ನೇ ಶತಮಾನದ ಪ್ರತಿಕ್ರಿಯೆ” ಎಂದು ಹೇಳಿದೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ಜಿರಿಬಾಮ್‌ನಲ್ಲಿ ಆರು ಮನೆಗಳಿಗೆ ಬೆಂಕಿ, ಗ್ರಾಮಸ್ಥರ ಮೇಲೆ ಹಲ್ಲೆ

ಮಣಿಪುರ ಹಿಂಸಾಚಾರ: ಜಿರಿಬಾಮ್‌ನಲ್ಲಿ ಆರು ಮನೆಗಳಿಗೆ ಬೆಂಕಿ, ಗ್ರಾಮಸ್ಥರ ಮೇಲೆ ಹಲ್ಲೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...