Homeಮುಖಪುಟ"ಮಹಾರಾಷ್ಟ್ರದ ಜನರು ಇದನ್ನೆಲ್ಲ ಇಷ್ಟಪಡುವುದಿಲ್ಲ" : ಯೋಗಿ ಆದಿತ್ಯನಾಥ್ ಹೇಳಿಕೆಗೆ ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್...

“ಮಹಾರಾಷ್ಟ್ರದ ಜನರು ಇದನ್ನೆಲ್ಲ ಇಷ್ಟಪಡುವುದಿಲ್ಲ” : ಯೋಗಿ ಆದಿತ್ಯನಾಥ್ ಹೇಳಿಕೆಗೆ ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಆಕ್ಷೇಪ

- Advertisement -
- Advertisement -

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಹಾರಾಷ್ಟ್ರದ ಚುನಾವಣಾ ರ್‍ಯಾಲಿಯಲ್ಲಿ “batenge to katenge”(ವಿಭಜನೆಯಾದ್ರೆ, ಮುಗಿಸ್ತಾರೆ) ಎಂಬ ಘೋಷಣೆ ಪುನರುಚ್ಚರಿಸಿರುವುದಕ್ಕೆ ಬಿಜೆಪಿಯ ಮಿತ್ರಪಕ್ಷ ಎನ್‌ಸಿಪಿ ನಾಯಕ ಅಜಿತ್ ಪವಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಇಂತಹ ಹೇಳಿಕೆಗಳನ್ನು ನಮ್ಮ ರಾಜ್ಯದ ಜನರು ಇಷ್ಟಪಡುವುದಿಲ್ಲ” ಎಂದು ಹೇಳಿದ್ದಾರೆ.

ಪುಣೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು “ಮಹಾರಾಷ್ಟ್ರವು ಛತ್ರಪತಿ ಶಿವಾಜಿ ಮಹಾರಾಜ್, ರಾಜರ್ಷಿ ಶಾಹು ಮಹಾರಾಜ್ ಮತ್ತು ಮಹಾತ್ಮ ಫುಲೆ ಅವರಿಗೆ ಸೇರಿದೆ. ನೀವು ಮಹಾರಾಷ್ಟ್ರವನ್ನು ಇತರ ರಾಜ್ಯಗಳೊಂದಿಗೆ ಹೋಲಿಸಬೇಡಿ. ಮಹಾರಾಷ್ಟ್ರದ ಜನರು ಇಂತಹ ಹೇಳಿಕೆಗಳನ್ನು ಇಷ್ಟಪಡುವುದಿಲ್ಲ” ಎಂದು ಆದಿತ್ಯನಾಥ್ ಅವರ ಹೇಳಿಕೆ ಬಗ್ಗೆ ಅಜಿತ್ ಪವಾರ್ ಪ್ರತಿಕ್ರಿಯಿಸಿದ್ದಾರೆ.

ಸಮಾಜದ ಎಲ್ಲ ವರ್ಗದವರನ್ನು ಜೊತೆಯಲ್ಲಿ ಕೊಂಡೊಯ್ಯುವುದು ಶಿವಾಜಿ ಮಹಾರಾಜರ ಬೋಧನೆ. ಮಹಾರಾಷ್ಟ್ರದ ಜನರು ಸದಾ ಕೋಮು ಸೌಹಾರ್ದತೆಯನ್ನು ಕಾಪಾಡಲು ಶ್ರಮಿಸುತ್ತಿದ್ದಾರೆ ಎಂದಿದ್ದಾರೆ.

“ಬೇರೆ ರಾಜ್ಯಗಳ ಜನರು ಇಲ್ಲಿಗೆ ಬಂದಾಗ, ಅವರು ತಮ್ಮ ಜನರನ್ನು ಗಮನದಲ್ಲಿಟ್ಟುಕೊಂಡು ಮಾತನಾಡುತ್ತಾರೆ. ಆದರೆ, ಮಹಾರಾಷ್ಟ್ರವು ಅದನ್ನು ಎಂದಿಗೂ ಸ್ವೀಕರಿಸುವುದಿಲ್ಲ. ಇದು ಇಲ್ಲಿನ ಎಲ್ಲಾ ಚುನಾವಣೆಗಳ ಇತಿಹಾಸವಾಗಿದೆ” ಎಂದು ಅಜಿತ್ ಪವಾರ್ ಹೇಳಿದ್ದಾರೆ.

ನವೆಂಬರ್ 20ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಪ್ರಚಾರದ ಭಾಗವಾಗಿ ವಾಶಿಮ್‌ನಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಆದಿತ್ಯನಾಥ್ ಅವರು ತಮ್ಮ ಪ್ರಸಿದ್ಧ ಘೋಷಣೆ “batenge to katenge” ಅನ್ನು ಪುನರುಚ್ಚರಿಸಿದ್ದರು.

“ನಾನು ಛತ್ರಪತಿ ಶಿವಾಜಿ ಮಹಾರಾಜರಿಂದ ಸ್ಫೂರ್ತಿ ಪಡೆಯುತ್ತಿದ್ದೇನೆ. ವಿಭಜನೆಯಾಗದಂತೆ ನಿಮ್ಮಲ್ಲಿ ಮನವಿ ಮಾಡುತ್ತೇನೆ, ಏಕೆಂದರೆ ನಾವು ವಿಭಜನೆಯಾದಾಗಲೆಲ್ಲಾ ನಾವು ನಾಶವಾಗುತ್ತೇವೆ” ಎಂದು ಆದಿತ್ಯನಾಥ್ ಹೇಳಿದ್ದರು.

ಇದನ್ನೂ ಓದಿ : ಬ್ರಾಂಪ್ಟನ್‌ನ ಹಿಂದೂ ಸಭಾ ಪ್ರತಿಭಟನೆಯಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ಆರೋಪ; ಕೆನಡಾ ಪೊಲೀಸರಿಂದ ಓರ್ವನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...