Homeಮುಖಪುಟಪ್ರವಾಸೋದ್ಯಮ ಕುಸಿತ ಎಂದ ವ್ಯಕ್ತಿಯ ವಿರುದ್ಧ ಗೋವಾ ಅಧಿಕಾರಿಗಳು ದೂರು!

ಪ್ರವಾಸೋದ್ಯಮ ಕುಸಿತ ಎಂದ ವ್ಯಕ್ತಿಯ ವಿರುದ್ಧ ಗೋವಾ ಅಧಿಕಾರಿಗಳು ದೂರು!

- Advertisement -
- Advertisement -

ರಾಜ್ಯದಲ್ಲಿ ಪ್ರವಾಸೋದ್ಯಮವು ಕುಸಿತ ಕಾಣುತ್ತಿದೆ ಎಂದು ಪ್ರತಿಪಾದಿಸಲು “ಸುಳ್ಳು ಅಂಕಿ-ಅಂಶಗಳನ್ನು” ಉಲ್ಲೇಖಿಸಿದ್ದಾರೆ ಎಂದು ಆರೋಪಿಸಿ ಗೋವಾ ಸರ್ಕಾರವು ವ್ಯಕ್ತಿಯೊಬ್ಬರ ವಿರುದ್ಧ ಶುಕ್ರವಾರ ಪೊಲೀಸ್ ದೂರು ದಾಖಲಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ವ್ಯಕ್ತಿಯು ಲಂಡನ್ ಮೂಲದ ವಿಶ್ಲೇಷಣಾ ಕಂಪನಿಯಾದ CEIC ಡೇಟಾದ ಅಂಕಿಅಂಶಗಳನ್ನು ಉಲ್ಲೇಖಿಸಿ, “ಗೋವಾದಲ್ಲಿ ಪ್ರವಾಸೋದ್ಯಮವು ಕುಸಿಯುತ್ತಿದೆ” ಎಂದು ಹೇಳಿದ್ದರು. ಪ್ರವಾಸೋದ್ಯಮ ಕುಸಿತ

ಗೋವಾದಲ್ಲಿ ವಿದೇಶಿ ಪ್ರವಾಸಿಗರ 2019 ಮತ್ತು 2023 ಅಂಕಿ ಅಂಶಗಳ ನಡುವಿನ ಹೋಲಿಕೆಯನ್ನು ಉಲ್ಲೇಖಿಸಿ ರಾಮಾನುಜ್ ಮುಖರ್ಜಿ ಅವರು ನವೆಂಬರ್ 5 ರಂದು ಟ್ವಿಟರ್‌ನಲ್ಲಿ ಪೋಸ್ಟ್ ಹಾಕಿದ್ದರು. ಅದರಲ್ಲಿ ಅವರು ವಿದೇಶಿ ಪ್ರವಾಸಿಗರು ಗೋವಾ ಬದಲಿಗೆ ಶ್ರೀಲಂಕಾದಂತಹ ಇತರ ಸ್ಥಳಗಳಿಗೆ ತೆರಳುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಭಾರತೀಯ ಪ್ರವಾಸಿಗರು ಗೋವಾಕ್ಕೆ ಇನ್ನೂ ಭೇಟಿ ನೀಡುತ್ತಿದ್ದಾರೆ. ಅದರೆ, ವಿದೇಶದಲ್ಲಿ ಗೋವಾದಂತೆಯೆ ಇರುವ ಹಲವಾರು ಅಗ್ಗದ ಸ್ಥಳಗಳಿರುವಾಗ ಮತ್ತು ಗೋವಾದಲ್ಲಿ ಪ್ರವಾಸಿಗರ ಶೋಷಣೆಯ ಬಗ್ಗೆಗಿನ ವಿಚಾರ ಹರಡಿದರೆ ಅವರು ಕೂಡಾ ಶೀಘ್ರದಲ್ಲೇ ಗೋವಾಗೆ ಭೇಟಿ ನೀಡುವುದನ್ನು ನಿಲ್ಲಿಸುತ್ತಾರೆ” ಎಂದು ಅವರು ಹೇಳಿದ್ದರು.

ಲಂಡನ್ ಮೂಲದ ವಿಶ್ಲೇಷಣಾ ಕಂಪನಿಯಾದ CEIC ಡೇಟಾದ ಅಂಕಿಅಂಶಗಳನ್ನು ಉಲ್ಲೇಖಿಸಿ, “ಗೋವಾದಲ್ಲಿ ಪ್ರವಾಸೋದ್ಯಮವು ಕುಸಿತ ಕಂಡಿದೆ” ಎಂದು ಮುಖರ್ಜಿ ಉಲ್ಲೇಖಿಸಿದ್ದರು. ಪ್ರವಾಸೋದ್ಯಮ ಕುಸಿತ

ಮುಖರ್ಜಿ ಅವರ ಪೋಸ್ಟ್‌ಗೆ ಪ್ರತಿಕ್ರಿಯೆಯಾಗಿ, ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಗೋವಾದಲ್ಲಿ ವಿಶ್ವಾಸಾರ್ಹ ಸಾರಿಗೆ ಮತ್ತು ಸಮಂಜಸವಾದ ಹೋಟೆಲ್ ದರಗಳನ್ನು ಹುಡುಕಲು ಹೆಣಗಾಡುತ್ತಿರುವ ಅನುಭವಗಳ ಬಗ್ಗೆ ವಿವರಿಸಿದ್ದಾರೆ.

ಆದಾಗ್ಯೂ, ರಾಜ್ಯದ ಪ್ರವಾಸೋದ್ಯಮ ಇಲಾಖೆಯು, ಮುಖರ್ಜಿ ಅವರು ಸುಳ್ಳು ದತ್ತಾಂಶವನ್ನು ಇಟ್ಟುಕೊಂಡು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದೆ. ಅವರು “ಸಾರ್ವಜನಿಕ ಕಿಡಿಗೇಡಿತನ” ಮಾಡುತ್ತಿದ್ದಾರೆ ಎಂದು ಎಂದು ಆರೋಪಿಸಿ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ಅವರ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

“ಇಂತಹ ಸುಳ್ಳು ಹೇಳಿಕೆಗಳ ಪ್ರಚಾರವು ನಮ್ಮ ರಾಜ್ಯದ ಪ್ರತಿಷ್ಠೆಗೆ ಧಕ್ಕೆ ತರುವುದಲ್ಲದೆ, ಸಾರ್ವಜನಿಕ ನೆಮ್ಮದಿಗೆ ಗಂಭೀರ ಅಪಾಯವನ್ನುಂಟುಮಾಡುತ್ತದೆ. ಅವರ ಈ ಹೇಳಿಕೆಯು ಗೋವಾದ ಇಮೇಜ್ ಅನ್ನು ದುರ್ಬಲಗೊಳಿಸುವ ಗುರಿಯನ್ನು ಹೊಂದಿರುವ ಗುಪ್ತ ಕಾರ್ಯಸೂಚಿಯ ಭಾಗವಾಗಿರಬಹುದು ಎಂದು ಪ್ರವಾಸೋದ್ಯಮ ಇಲಾಖೆಯು ವಿಶೇಷವಾಗಿ ಆತಂಕ ವ್ಯಕ್ತಪಡಿಸಿದೆ” ಎಂದು ಅವರು ದೂರಿನಲ್ಲಿ ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಪೋಸ್ಟ್ ಅನ್ನು ಅಪ್‌ಲೋಡ್ ಮಾಡುವ ಮೊದಲು ಮುಖರ್ಜಿ ಅವರು ಪ್ರವಾಸೋದ್ಯಮ ಇಲಾಖೆಯೊಂದಿಗೆ ಸಮಾಲೋಚಿಸಿಲ್ಲ, ಅವರು ನೀಡಿರುವ ಅಂಕಿ-ಅಂಶದ ವಿಶ್ವಾಸಾರ್ಹತೆ ಪ್ರಶ್ನಾರ್ಹವಾಗಿದೆ. ಜೊತೆಗೆ ಅವರ ಹೇಳಿಕೆಗಳು ಸಾರ್ವಜನಿಕ ಅಶಾಂತಿಯನ್ನು ಉಂಟುಮಾಡುವ ಉದ್ದೇಶವನ್ನು ಹೊಂದಿವೆ” ಎಂದು ಅವರು ಆರೋಪಿಸಿದ್ದಾರೆ.

ಪ್ರವಾಸೋದ್ಯಮ ಇಲಾಖೆಯ ದೂರಿಗೆ ಪ್ರತಿಕ್ರಿಯಿಸಿರುವ ಮುಖರ್ಜಿ, ತಾನು ಸಾರ್ವಜನಿಕವಾಗಿ ಲಭ್ಯವಿರುವ ಡೇಟಾವನ್ನು ಉಲ್ಲೇಖಿಸಿದ್ದೇನೆ ಎಂದು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರವಾಸಿಗರು ಎತ್ತುವ ದೂರುಗಳನ್ನು ಪರಿಹರಿಸುವ ಬದಲು ರಾಜ್ಯ ಸರ್ಕಾರವು “ಟೀಕೆಗಳನ್ನು ಮುಚ್ಚಲು ಕಾನೂನನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ” ಎಂದು ಅವರು ಆರೋಪಿಸಿದ್ದಾರೆ.

“ಟೀಕೆಗಳನ್ನು ಇಲ್ಲದಂತೆ ಮಾಡಲು ಕಾನೂನಿನ ದುರುಪಯೋಗ ಮಾಡುವ ಬದಲು, ನಾನು ಉಲ್ಲೇಖಿಸಿದ ಅಂಕಿ ಅಂಶಗಳು ತಪ್ಪಾಗಿದೆ ಎಂದು ಅವರು ಸರಿಯಾದ ಅಂಕಿ ಅಂಶಗಳನ್ನು ಅಲ್ಲಿಗೆ ಹಾಕಬೇಕು. ಸರ್ಕಾರದ ಈ ಬೆದರಿಕೆಯನ್ನು ಕಾನೂನು ವಿಧಾನಗಳ ಮೂಲಕ ಎದುರಿಸುತ್ತೇನೆ” ಎಂದು ಮುಖರ್ಜಿ ಅವರು ಹೇಳಿದರು.

ಇದನ್ನೂ ಓದಿ: ವಿದ್ಯಾರ್ಥಿ ನೀತಿ ರದ್ದು ಮಾಡಿದ ಕೆನಡಾ – ಭಾರತದ 90% ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ವಿದ್ಯಾರ್ಥಿ ನೀತಿ ರದ್ದು ಮಾಡಿದ ಕೆನಡಾ – ಭಾರತದ 90% ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...