Homeಕರ್ನಾಟಕಬೆಂಗಳೂರು | ನಗರದಲ್ಲಿ 12 ಗಂಟೆಯೊಳಗೆ ಮೂರು ಕೊಲೆಗಳು!

ಬೆಂಗಳೂರು | ನಗರದಲ್ಲಿ 12 ಗಂಟೆಯೊಳಗೆ ಮೂರು ಕೊಲೆಗಳು!

- Advertisement -
- Advertisement -

ಬೆಂಗಳೂರಿನಲ್ಲಿ ಕಳೆದ 12 ಗಂಟೆಯೊಳಗೆ ಮೂರು ಕೊಲೆಗಳು ವರದಿಯಾಗಿವೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ನಗರದ ಈಶಾನ್ಯ ಭಾಗದಲ್ಲಿ ಲಾಜಿಸ್ಟಿಕ್ಸ್ ಸಂಸ್ಥೆಯೊಂದರಲ್ಲಿ ಕ್ಲೀನರ್‌ಗಳಾಗಿ ಕೆಲಸ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕಡಿದು ಕೊಲೆ ಮಾಡಲಾಗಿದ್ದು, ಹೊಂಗಸಂದ್ರದಲ್ಲಿ ಮಹಿಳೆಯೊಬ್ಬರನ್ನು ಆಕೆಯ ಮಗನೆ ಹತ್ಯೆಗೈದಿರುವ ಘಟನೆ ಸಂಭವಿಸಿದೆ. ಬೆಂಗಳೂರು

ಶನಿವಾರ ಬೆಳಗ್ಗೆ ಸಹೋದ್ಯೋಗಿಯೊಬ್ಬರು ಅವರು ಕೆಲಸ ಮಾಡುತ್ತಿದ್ದ ಶೆಡ್‌ಗೆ ಪ್ರವೇಶಿಸಿದಾಗ ಕ್ರಮವಾಗಿ ರಾಮನಗರ ಮತ್ತು ಮಂಡ್ಯ ಮೂಲದ ನಾಗೇಶ್ (52) ಮತ್ತು ಮಂಜು ಗೌಡ (44) ಅವರ ಶವಗಳು ಪತ್ತೆಯಾಗಿವೆ. ಕೊಲೆಗೀಡಾ ವ್ಯಕ್ತಿಗಳಿಬ್ಬರಿಗೆ ಗಟ್ಟಿಯಾದ ವಸ್ತುವಿನಿಂದ ತಲೆಗೆ ಮಾರಣಾಂತಿಕ ಗಾಯ ಮಾಡಲಾಗಿದ್ದು, ತೀವ್ರ ರಕ್ತಶ್ರಾವದ ಕಾರಣಕ್ಕೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು ಬಾಗಲೂರು ಸಮೀಪದ ಸಿಂಗಹಳ್ಳಿಯಲ್ಲಿರುವ ಲಾಜಿಸ್ಟಿಕ್ ಕಂಪನಿಯಲ್ಲಿ ನಾಲ್ಕು ವರ್ಷಗಳಿಂದ ಉದ್ಯೋಗಿಯಾಗಿದ್ದರು. ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇವರಿಬ್ಬರ ಜೊತೆ ಶೆಡ್ ಹಂಚಿಕೊಂಡಿದ್ದ ಸಹೋದ್ಯೋಗಿ ಸುರೇಶ್ ಪ್ರಮುಖ ಶಂಕಿತ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಶುಕ್ರವಾರ ರಾತ್ರಿ ಮೂವರು ಸಹೋದ್ಯೋಗಿಗಳು ಮದ್ಯಪಾನ ಮಾಡಲು ಜಮಾಯಿಸಿದ್ದಾಗ ಘಟನೆ ನಡೆದಿರಬಹುದು ಎಂದು ಪೊಲೀಸರು ಹೇಳಿದ್ದಾರೆ. ರಾತ್ರಿ 11.30 ರ ಸುಮಾರಿಗೆ ಸುರೇಶ್ ಸ್ಥಳದಿಂದ ಪರಾರಿಯಾಗುವ ಮೊದಲು ನಾಗೇಶ್ ಮತ್ತು ಮಂಜು ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ.

ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 103 (ಕೊಲೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಆರೋಪಿ ಸುರೇಶ್‌ ಹುಡುಕಾಟಕ್ಕಾಗಿ ತಂಡವನ್ನು ರಚಿಸಿದ್ದಾರೆ ಎಂದು ವರದಿ ಹೇಳಿದೆ.

ಎರಡನೇ ಘಟನೆಯಲ್ಲಿ, ತಮಿಳುನಾಡು ಮೂಲದ ಜಯಮ್ಮ ಶುಕ್ರವಾರ ಸಂಜೆ ಆಕೆಯ ಹಿರಿಯ ಮಗ ಉಮೇಶ್ (33) ಅವರನ್ನು ಭೇಟಿ ಮಾಡಿದ ನಂತರ ಅವರ ಮನೆಯಲ್ಲಿ ಕೊಲೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉಮೇಶ್ ತಮ್ಮ ತಾಯಿಯ ಜೊತೆಯಲ್ಲಿ ಪದೇ ಪದೇ ಜಗಳವಾಡುತ್ತಿದ್ದ ಕಾರಣ ಜಯಮ್ಮ ಕಿರಿಯ ಮಗನೊಂದಿಗೆ ಹೊಂಗಸಂದ್ರಕ್ಕೆ ತೆರಳಿದ್ದರು.

ಮಹಿಳೆಯು ಇದ್ದ ಮನೆಯ ಓನರ್‌ ಜಯಮ್ಮ ಅವರ ದೇಹವನ್ನು ಪತ್ತೆ ಮಾಡಿದ್ದು, ಈ ವೇಳೆ ಮೃತದೇಹದಲ್ಲಿ ಕತ್ತು ಹಿಸುಕಿರುವುದು ಅಥವಾ ಉಸಿರುಗಟ್ಟಿಸುವಿಕೆಯ ಗುರುತುಗಳನ್ನು ಹೊಂದಿದ್ದು, ಹಾಗಾಗಿ ಅವರು ಪೋಲೀಸರಿಗೆ ತಿಳಿಸಿದ್ದಾರೆ. ಅವರ ಮೃತದೇಹವನ್ನು ಸಹ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ತನ್ನ ತಾಯಿ ಇದ್ದ ಹೊಸ ಮನೆಯ ಜಾಡು ಹಿಡಿದು ಆರೋಪಿ ಉಮೇಶ್ ಅಲ್ಲಿಗೆ ತೆರಳಿದ್ದು, ಅಲ್ಲಿ ಅವರೊಂದಿಗೆ ಹಣದ ವಿಚಾರವಾಗಿ ಆಕೆಯನ್ನು ಕೊಲೆ ಮಾಡಿರಬಹುದು ಎಂದು ಪೊಲೀಸರು ನಂಬಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಆಸ್ತಿಯನ್ನು ಮಾರಾಟ ಮಾಡಿದರೂ ಅದರಿಂದ ಬಂದ ಹಣವನ್ನು ಅವರು ಅವರಿಗೆ ನೀಡಿರಲಿಲ್ಲ ಎಂದು ವರದಿಯಾಗಿದೆ. ಘಟನೆಯ ಸಮಯದಲ್ಲಿ, ಆಕೆಯ ಕಿರಿಯ ಮಗ, ಕೆಎಸ್ಆರ್ಟಿಸಿ ಬಸ್ ಚಾಲಕನು ಆನೇಕಲ್ನಲ್ಲಿ ಕರ್ತವ್ಯದಲ್ಲಿದ್ದರು ಎನ್ನಲಾಗಿದೆ.

ಬೊಮ್ಮನಹಳ್ಳಿ ಪೊಲೀಸರು ಬಿಎನ್‌ಎಸ್ ಸೆಕ್ಷನ್ 103 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಶಂಕಿತನನ್ನು ಗುರುತಿಸಲಾಗಿದೆ ಮತ್ತು ಶೀಘ್ರದಲ್ಲೇ ಆತನನ್ನು ಬಂಧಿಸುವ ನಿರೀಕ್ಷೆಯಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ NEET ಆಕಾಂಕ್ಷಿಯನ್ನು ಒತ್ತೆಯಾಳಾಗಿ ಇರಿಸಿ ಅತ್ಯಾಚಾರ; ಇಬ್ಬರು ಶಿಕ್ಷಕರ ಬಂಧನ

ಅಪ್ರಾಪ್ತ NEET ಆಕಾಂಕ್ಷಿಯನ್ನು ಒತ್ತೆಯಾಳಾಗಿ ಇರಿಸಿ ಅತ್ಯಾಚಾರ; ಇಬ್ಬರು ಶಿಕ್ಷಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...