Homeಮುಖಪುಟ'ಕೆಫಿಯಹ್' ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದ ನಾಲ್ವರನ್ನು ವಶಕ್ಕೆ ಪಡೆದ ಕೇರಳ ಪೊಲೀಸರು!

‘ಕೆಫಿಯಹ್’ ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದ ನಾಲ್ವರನ್ನು ವಶಕ್ಕೆ ಪಡೆದ ಕೇರಳ ಪೊಲೀಸರು!

- Advertisement -
- Advertisement -

ಕೊಚ್ಚಿಯ ಜವಾಹರಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆದ ಕೇರಳ ಬ್ಲಾಸ್ಟರ್ಸ್ ಎಫ್‌ಸಿ ಮತ್ತು ಹೈದರಾಬಾದ್ ಎಫ್‌ಸಿ ಫುಟ್‌ಬಾಲ್ ಪಂದ್ಯದ ವೇಳೆ ಪ್ಯಾಲೆಸ್ತೀನ್ ಪರ ಬೆಂಬಲದ ಸಂಕೇತವಾದ ‘ಕೆಫಿಯಹ್’ ಧರಿಸಿದ್ದಕ್ಕಾಗಿ ಕೇರಳ ಪೊಲೀಸರು ನಾಲ್ವರನ್ನು ಐದು ಗಂಟೆಗಳ ಕಾಲ ವಶಕ್ಕೆ ಪಡೆದಿರುವ ಘಟನೆ ನವೆಂಬರ್ 7ರಂದು ನಡೆದಿದೆ. ರಾಜ್ಯ ಪೊಲೀಸರ ಈ ಕ್ರಮದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ವಶಕ್ಕೆ ಒಳಗಾದವರನ್ನು ರೆಜಾಜ್, ಅಬ್ದುಲ್ಲಾ, ಅಮೀನ್ ಮತ್ತು ಮಿದ್ಲಾಜ್ ಎಂದು ಗುರುತಿಸಲಾಗಿದ್ದು, ಈ ಸ್ನೇಹಿತರ ಗುಂಪು ನವೆಂಬರ್ 7 ರ ಗುರುವಾರ ಟಿಕೆಟ್ ಸರದಿಯಲ್ಲಿ ಕಾಯುತ್ತಿದ್ದಾಗ ಪೊಲೀಸರು ಅವರನ್ನು ಸಂಜೆ 7 ಗಂಟೆಗೆ ಪಲರಿವಟ್ಟಂ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಲಪ್ಪುರಂ ಅಪರಾಧ ವಿಭಾಗದ ಪೊಲೀಸರು ಅಮೀನ್ ಸಂಬಂಧಿಕರನ್ನು ಸಂಪರ್ಕಿಸಿದ್ದಾರೆ ಎಂದು ರೆಜಾಜ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೇರಳ ಬ್ಲಾಸ್ಟರ್ಸ್ ಎಫ್‌ಸಿ 28 ನಿಷೇಧಿತ ವಸ್ತುಗಳನ್ನು ಕ್ರೀಡಾಂಗಣದಲ್ಲಿ ನಿಷೇಧಿಸಿ ಪಟ್ಟಿ ಮಾಡಿತ್ತು. ಆದರೆ ಪ್ರೇಕ್ಷಕರು ಕೆಫಿಯೆಹ್ ಧರಿಸಿ ಪಂದ್ಯ ವೀಕ್ಷಿಸುವುದನ್ನು ಇದು ನಿಷೇಧಿಸಿರಲಿಲ್ಲ. ಫ್ರೆಂಚ್ ಕ್ಲಬ್ ಪ್ಯಾರಿಸ್ ಸೇಂಟ್ ಜರ್ಮೈನ್ (PSG) ಅಭಿಮಾನಿಗಳು ಚಾಂಪಿಯನ್ಸ್ ಲೀಗ್ ಪಂದ್ಯದಲ್ಲಿ ಫ್ರೀ ಪ್ಯಾಲೆಸ್ಟೈನ್ ಎಂದು ಹೇಳುವ ದೊಡ್ಡ ಟಿಫೊವನ್ನು ಬಿಚ್ಚಿಟ್ಟ ಘಟನೆಯ ಬೆನ್ನಲ್ಲೆ ಈ ಘಟನೆ ನಡೆದಿದೆ.

ವಶಕ್ಕೆ ಒಳಗಾಗಿರುವ ರೆಜಾಜ್ ಮಾತನಾಡಿ, ತಾವು ಪ್ರತಿಭಟನೆ ನಡೆಸುವ ಉದ್ದೇಶವನ್ನು ಹೊಂದಿಲ್ಲ,ಬದಲಾಗಿ ಪ್ಯಾಲೆಸ್ಟೈನ್ ಪರ ರಾಜಕೀಯದ ಕಾರಣಕ್ಕಾಗಿ ಕೆಫಿಯೆಹ್ ಧರಿಸಿದ್ದಾಗಿ ತಿಳಿಸಿದ್ದಾರೆ.

“ನಾವು ಯಾವುದೇ ಬ್ಯಾನರ್, ಫಲಕ ಅಥವಾ ಧ್ವಜವನ್ನು ಹಿಡಿದಿಲ್ಲ. ಟಿಕೆಟ್ ಲಭ್ಯವಿದೆ ಎಂದು ನನ್ನ ಸ್ನೇಹಿತರು ನನ್ನನ್ನು ಕರೆದಿದ್ದರಿಂದ ನಾನು ಪಂದ್ಯಕ್ಕೆ ಬಂದೆ. ನಾವು ಟಿಕೆಟ್ ಸರದಿಯಲ್ಲಿ ಕಾಯುತ್ತಿರುವಾಗ, ಸಹಾಯಕ ಪೊಲೀಸ್ ಆಯುಕ್ತರು ಕೆಫಿಯೆಹ್ ಎಂದರೇನು ಎಂದು ಕೇಳಿದರು. ಇದನ್ನು ಒಳಗೆ ಬಿಡುವುದಿಲ್ಲ ಎಂದು ಹೇಳಿದ್ದಾರೆ” ಎಂದು ರೆಜಾಜ್ ಹೇಳಿದ್ದಾರೆ.

“ಇದನ್ನು ಸಭ್ಯ ರೀತಿಯಲ್ಲಿ ಧರಿಸುವುಕ್ಕೆ ನಿಯಮಗಳು ಅಡ್ಡಿ ಮಾಡುವುದಿಲ್ಲ ಎಂದು ನಾನು ಅವರಿಗೆ ಹೇಳಿದೆ. ಈ ವೇಳೆ ಅವರು ನಮ್ಮ ಹೆಸರುಗಳನ್ನು ಕೇಳಿದ್ದು, ನಾನು ಅವರಿಗೆ ಹೆಸರು ಕೇಳಿದ ನಂತರ ನಮಗೆ ಕಾಯುವಂತೆ ಹೇಳಿದರು. ನಂತರ ಹೆಚ್ಚಿನ ಪೊಲೀಸರು ಸ್ಥಳಕ್ಕೆ ಬಂದರು. ನಂತರ ಎಸಿಪಿ ಕೆಲವು ಫೋನ್ ಕರೆಗಳನ್ನು ಮಾಡಿ  ಸ್ಪಷ್ಟನೆಗಾಗಿ ಠಾಣೆಗೆ ಬರುವಂತೆ ಹೇಳಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ನಮ್ಮನ್ನು ಧರ್ಮದ ಆಧಾರದ ಮೇಲೆ ಪ್ರಶ್ನಿಸಲಾಗಿದೆ ಎಂದು ಜನಪ್ರಿಯ ಸ್ವತಂತ್ರ ಪತ್ರಕರ್ತರೂ ಆಗಿರುವ ರೆಜಾಜ್ ವಿವರಿಸಿದ್ದಾರೆ. “ಮತ್ತೊಬ್ಬ ಬಂಧಿತ ವ್ಯಕ್ತಿ ಅಬ್ದುಲ್ಲಾ ಅವರು ತಿರುವನಂತಪುರಂನಲ್ಲಿ ನೆಲೆಸಿದ್ದು, ತಾನು ಮಸೀದಿಯೊಂದರಲ್ಲಿ ಧರ್ಮಗುರು ಎಂದು ಹೇಳಿದಾಗ, ಸರ್ಕಲ್ ಇನ್ಸ್‌ಪೆಕ್ಟರ್ ನೀವೆಲ್ಲರೂ ಮದರಸಾಗಳಿಗೆ ಹೋಗುತ್ತೀರಾ ಎಂದು ಕೇಳಿದ್ದಾರೆ” ಎಂದು ರೆಜಾಜ್ ಹೇಳಿದ್ದಾರೆ.

ನನ್ನ ಜೊತೆಗಿದ್ದ ನನ್ನ ಇತರ ಸ್ನೇಹಿತರು ಮಲಪ್ಪುರಂ ಮತ್ತು ಪಾಲಕ್ಕಾಡ್‌ನಿಂದ ಬಂದಿದ್ದರಿಂದ, ಪಂದ್ಯಕ್ಕೆ ಬೇರೆ ಜಿಲ್ಲೆಗಳಿಂದ ಏಕೆ ಒಟ್ಟಿಗೆ ಬಂದರು ಎಂದು ಸಿಐ ನಮ್ಮನ್ನು ಕೇಳಿದ್ದಾರೆ. ಅದಾಗ್ಯೂ, ಕೇರಳ ಬ್ಲಾಸ್ಟರ್ಸ್ ಪಂದ್ಯಕ್ಕೆ ಎರ್ನಾಕುಲಂ ನಿವಾಸಿಗಳು ಮಾತ್ರ ಹಾಜರಾಗುವುದಿಲ್ಲ ಎಂಬುದು ನಮಗೆಲ್ಲರಿಗೂ ತಿಳಿದಿದೆ. ನಂತರ ನಾವು ಒಬ್ಬರನ್ನೊಬ್ಬರು ಹೇಗೆ ತಿಳಿದಿದ್ದೇವೆ, ನಮ್ಮ ಉದ್ದೇಶವೇನು, ನಾವು ಯಾವ ಪುಸ್ತಕಗಳನ್ನು ಓದುತ್ತೇವೆ, ಇತರ ವಿಷಯಗಳ ಜೊತೆಗೆ ನಾವು ಹೊಂದಿರುವ ರಾಜಕೀಯದಂತಹ ಬಹಳಷ್ಟು ವೈಯಕ್ತಿಕ ವಿವರಗಳನ್ನು ಕೇಳಲಾಯಿತು ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಆಂಧ್ರಪ್ರದೇಶ | ವಾಟ್ಸಾಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆ ನೀಡುವ ಯೋಜನೆ

ಆಂಧ್ರಪ್ರದೇಶ | ವಾಟ್ಸಾಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆ ನೀಡುವ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...