Homeಕರ್ನಾಟಕರಾಜ್ಯದ 6,158 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು! - ವರದಿ

ರಾಜ್ಯದ 6,158 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು! – ವರದಿ

- Advertisement -
- Advertisement -

ರಾಜ್ಯದಲ್ಲಿರುವ ಸುಮಾರು 6,158 ಸರ್ಕಾರಿ ಶಾಲೆಗಳು ತಲಾ ಒಬ್ಬ ಶಿಕ್ಷಕರನ್ನು ಹೊಂದಿದೆ ಎಂದು TNIE ಪತ್ರಿಕೆ ವರದಿ ಮಾಡಿದೆ. ಈ 6,158 ಶಿಕ್ಷಕರು ತಮ್ಮ ಶಾಲೆಯ 1.38 ಲಕ್ಷ ವಿದ್ಯಾರ್ಥಿಗಳಿಗೆ ಜವಾಬ್ದಾರರಾಗಿದ್ದಾರೆ ಎಂದು ಅದು ಹೇಳಿದೆ. ವಿಪರ್ಯಾಸವೇನೆಂದರೆ, ರಾಜ್ಯದ 530 ಶಾಲೆಗಳಲ್ಲಿ ಶೂನ್ಯ ದಾಖಲಾತಿಯಿದ್ದು, ಅಲ್ಲಿ 358 ಶಿಕ್ಷಕರಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ರಾಜ್ಯದ 6,158

ವರದಿಯು ರಾಜ್ಯದ ಸರ್ಕಾರಿ ಶಾಲೆಗಳ ವ್ಯವಸ್ಥೆಯಲ್ಲಿನ ಗಂಭೀರ ಲೋಪವನ್ನು ಎತ್ತಿತೋರಿಸಿದ್ದು, ಕೆಲವು ಶಾಲೆಗಳು ಕೆಲವೇ ಶಿಕ್ಷಕರನ್ನು ಹೊಂದಿದ್ದರೆ (ಹಲವು ಸಂದರ್ಭಗಳಲ್ಲಿ ಒಬ್ಬರು), ಇತರ ಶೂನ್ಯ ದಾಖಲಾತಿ ಹೊಂದಿರುವ ಶಾಲೆಗಳು ಹೆಚ್ಚುವರಿ ಸಿಬ್ಬಂದಿಯನ್ನು ಹೊಂದಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ. ಅದಾಗ್ಯೂ, ಶೂನ್ಯ ದಾಖಲಾತಿ ಶಾಲೆಗಳ ಶಿಕ್ಷಕರನ್ನು ಅಗತ್ಯವಿರುವೆಡೆಗೆ ವರ್ಗಾಯಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಹೇಳಿದೆ ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2023-24 ರಲ್ಲಿ ಏಕ ಶಿಕ್ಷಕರು ಇದ್ದ 6,360 ಶಾಲೆಗಳು ಇದ್ದು, 2024-25 ರಲ್ಲಿ ಇದರ ಸಂಖ್ಯೆ 6,158ಕ್ಕೆ ಇಳಿಕೆಯಾಗಿದೆ. ಅಂದರೆ ಒಂದು ವರ್ಷದಲ್ಲಿ 202 ರಷ್ಟು ಕಡಿಮೆಯಾಗಿದೆ. ಆದಾಗ್ಯೂ, ದಾಖಲಾತಿಯು 33,794 ರಷ್ಟು ಕಡಿಮೆಯಾಗಿದೆ ಎಂದು ವರದಿ ಉಲ್ಲೇಖಿಸಿದ್ದು, ಮಕ್ಕಳು ಶಾಲೆ ತೊರೆದ ಕಾರಣಕ್ಕೆ ದಾಖಲಾತಿ ಕಡಿಮೆಯಾಗಿದೆ ಎಂದು ತಜ್ಞರು ಹೇಳಿದ್ದಾಗಿ ಪತ್ರಿಕೆ ವರದಿ ಮಾಡಿದೆ.

ವಿಷಯ ಶಿಕ್ಷಕರ ಕೊರತೆಯ ಕಾರಣಕ್ಕೆ ವಿದ್ಯಾರ್ಥಿಗಳು ಶಾಲೆ ತೊರೆಯುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಅನೇಕ ಸಂದರ್ಭಗಳಲ್ಲಿ ಶಿಕ್ಷಕರನ್ನು ಕನ್ನಡ ಅಥವಾ ಸಮಾಜಶಾಸ್ತ್ರವನ್ನು ಕಲಿಸಲು ಮಾತ್ರ ನಿಯೋಜಿಸಲಾಗುತ್ತಿದ್ದು, ಗಣಿತ ಮತ್ತು ವಿಜ್ಞಾನ ಅಥವಾ ಇಂಗ್ಲಿಷ್‌ನಂತಹ ಪ್ರಮುಖ ವಿಷಯಗಳಿಗೆ ಶಿಕ್ಷಕರ ನಿಯೋಜನೆ ಆಗುತ್ತಿಲ್ಲ ಎಂದು ವರದಿ ಹೇಳಿದೆ.

ಅದೇ ರೀತಿ, “100% ಉತ್ತೀರ್ಣ ದರವನ್ನು” ಕಾಪಾಡಿಕೊಳ್ಳಲು, ಶಾಲೆಗಳು ಸಾಮಾನ್ಯವಾಗಿ “ಶೈಕ್ಷಣಿಕವಾಗಿ ದುರ್ಬಲ ಆಗಿರುವ ವಿದ್ಯಾರ್ಥಿಗಳನ್ನು ಹೊರಗೆ ತಳ್ಳುತ್ತಿವೆ” ಎಂದು ತಜ್ಞರ ಹೇಳಿಕೆಯನ್ನು ವರದಿಯು ಹೇಳಿದೆ.

ಮಕ್ಕಳ ಹಕ್ಕುಗಳ ಕಾರ್ಯಕರ್ತ ಮತ್ತು ಚೈಲ್ಡ್ ರೈಟ್ಸ್ ಟ್ರಸ್ಟ್‌ನ ಕಾರ್ಯನಿರ್ವಾಹಕ ನಿರ್ದೇಶಕ ವಾಸುದೇವ್ ಶರ್ಮಾ ಮಾತನಾಡಿ, “ಶಾಲೆಗಳಲ್ಲಿ ಶಿಕ್ಷಕರು ಕನ್ನಡ ಅಥವಾ ಸಮಾಜಶಾಸ್ತ್ರವನ್ನು ಮಾತ್ರ ಕಲಿಸುತ್ತಾರೆ. ಆದರೆ, ತಮ್ಮ ಮಕ್ಕಳು ಗಣಿತ ಮತ್ತು ವಿಜ್ಞಾನವನ್ನು ಕಲಿಸುವ ಶಾಲೆಗಳಿಗೆ ತೆರಳಬೇಕು ಎಂದು ಪೊಷಕರು ಬಯಸುತ್ತಾರೆ. ಅದಕ್ಕಾಗಿ ಅನೇಕರು ಅನುದಾನಿತ ಅಥವಾ ಖಾಸಗಿ ಶಾಲೆಗಳತ್ತ ಒಲವು ತೋರುತ್ತಿದ್ದಾರೆ” ಎಂದು ಹೇಳಿದ್ದಾರೆ ಎಂದು ವರದಿ ಹೇಳಿದೆ.

“ಇದಲ್ಲದೆ, ಒಬ್ಬ ವಿದ್ಯಾರ್ಥಿಯು ಉನ್ನತ ಪ್ರಾಥಮಿಕ ಹಂತವನ್ನು ತಲುಪುವ ಹೊತ್ತಿಗೆ, ಶಾಲೆಗಳು ಉದ್ದೇಶಪೂರ್ವಕವಾಗಿ 10 ನೇ ತರಗತಿಯಲ್ಲಿ ‘100% ಉತ್ತೀರ್ಣ ದರ’ ಕಾಯ್ದುಕೊಳ್ಳಲು ಶೈಕ್ಷಣಿಕವಾಗಿ ದುರ್ಬಲವಾಗಿರುವ ವಿದ್ಯಾರ್ಥಿಯನ್ನು ಹೊರಹಾಕುತ್ತವೆ. ಆದರೆ, ಇದು ನಿಜವಾದ ಶಿಕ್ಷಣದ ಗುಣಮಟ್ಟವನ್ನು ಪ್ರತಿಬಿಂಬಿಸುವುದಿಲ್ಲ, ಬದಲಾಗಿ ವ್ಯವಸ್ಥೆಯ ವೈಫಲ್ಯವನ್ನು ಮರೆಮಾಡುತ್ತದೆ” ಎಂದು ಹೇಳಿದ್ದಾರೆ.

7 ಮತ್ತು 8 ನೇ ತರಗತಿ ಮತ್ತು 10 ನೇ ತರಗತಿಯ ನಡುವೆ ಡ್ರಾಪ್ಔಟ್ ದರಗಳು ಏಕೆ ಹೆಚ್ಚಾಗುತ್ತವೆ ಎಂಬ ಬಗ್ಗೆ ಯಾರೂ ಪ್ರಶ್ನಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ರಾಜ್ಯದ 6,158

“ಈ ಮಕ್ಕಳು ಎಲ್ಲಿಗೆ ಹೋಗುತ್ತಾರೆ? ಅವರು ಬೇರೆ ಶಾಲೆಗಳಿಗೆ ಸೇರುತ್ತಿದ್ದಾರೆಯೆ ಅಥವಾ ಇಲ್ಲವೇ ಎಂಬ ಬಗ್ಗೆ ಯಾವುದೇ ದಾಖಲೆಗಳಿಲ್ಲ. ಬಾಲಕಾರ್ಮಿಕರು ಇಲ್ಲ ಎಂದು ಸರ್ಕಾರ ಹೇಳಿಕೊಂಡರೂ. ಈ ಮಕ್ಕಳಲ್ಲಿ ಕೆಲವರು ಬಲವಂತವಾಗಿ ದುಡಿಮೆಗೆ ತಳ್ಳಲ್ಪಡುತ್ತಿದ್ದಾರೆ. ಇನ್ನು ಕೆಲವರು ಬಾಲ್ಯವಿವಾಹಕ್ಕೆ ಬಲಿಯಾಗುತ್ತಿದ್ದಾರೆ. ಆದಾಗ್ಯೂ, ಸಂಬಂಧಿಸಿದ ಇಲಾಖೆಗಳು ಯಾವುದೇ ಬಾಲ್ಯವಿವಾಹ ನಡೆಯದಂತೆ ನೋಡಿಕೊಳ್ಳುತ್ತಿದೆ” ಎಂದು ಶರ್ಮಾ ಹೇಳಿದ್ದಾರೆ.

ಇಷ್ಟೆ ಅಲ್ಲದೆ, ಶಿಕ್ಷಕರು ಹೆಚ್ಚಾಗಿ ನಗರಗಳು ಅಥವಾ ಪಟ್ಟಣಗಳ ಶಾಲೆಗಳಿಗೆ ವರ್ಗಾಯಿಸಲು ಪ್ರಭಾವ ಬಳಸುತ್ತಾರೆ. ಅನೇಕ ಸಂದರ್ಭಗಳಲ್ಲಿ, ಶಿಕ್ಷಕರೂ ಕೂಡಾ ದೂರದ ಪ್ರದೇಶಗಳಲ್ಲಿನ ಶಾಲೆಗಳಲ್ಲಿ ಕೆಲಸಕ್ಕೆ ತೆರಳದ ಕಾರಣ ವಿದ್ಯಾರ್ಥಿಗಳು ಶಿಕ್ಷಕರಿಲ್ಲದೆ ಕಲಿಕೆಯಿಂದ ವಂಚಿತರಾಗುತ್ತಾರೆ. ಇದರಲ್ಲಿ ಶಿಕ್ಷಕರಿಗೂ ಅನ್ಯಾಯವಾಗುತ್ತದೆ. ಏಕೆಂದರೆ ಅವರಿಗೆ ವಸತಿ ಒದಗಿಸದಿದ್ದರೆ, ಅವರು ಪ್ರತಿದಿನ 50 ಕಿಮೀ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ತಜ್ಞರು ಹೇಳುತ್ತಾರೆ.

ಅಭಿವೃದ್ಧಿ ಶಿಕ್ಷಣತಜ್ಞ ಪ್ರಾಧ್ಯಾಪಕ ನಿರಂಜನಾರಾಧ್ಯ ವಿಪಿ ಮಾತನಾಡಿ, “ಇಡೀ ಶಾಲೆ ಒಬ್ಬ ಶಿಕ್ಷಕರನ್ನು ಹೊಂದಿರುವುದು ಶಿಕ್ಷಣ ಹಕ್ಕು ಕಾಯಿದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಕಾಯ್ದೆಯ ಪ್ರಕಾರ, ಲೋವರ್ ಪ್ರೈಮರಿ ಸ್ಕೂಲ್ (ಎಲ್‌ಪಿಎ) ಕನಿಷ್ಠ ಇಬ್ಬರು ಶಿಕ್ಷಕರನ್ನು ಹೊಂದಿರಬೇಕು ಹಾಗೂ ಹೈಯರ್ ಪ್ರೈಮರಿ ಸ್ಕೂಲ್ (ಎಚ್‌ಪಿಎ) ಕನಿಷ್ಠ ಮೂವರು ಶಿಕ್ಷಕರನ್ನು ಹೊಂದಿರಬೇಕು” ಅವರು ಹೇಳಿದ್ದಾರೆ. ಒಂದು ಶಾಲೆಗೆ ಒಬ್ಬ ಶಿಕ್ಷಕ ಇದ್ದರೆ ಅಂತಹ ಶಾಲೆಗೆ ಹೆಚ್ಚಿನ ಪೋಷಕರು ತಮ್ಮ ಮಕ್ಕಳನ್ನು ದಾಖಲಿಸುವುದಿಲ್ಲ ಎಂದು ಅವರು ಹೇಳುತ್ತಾರೆ.

“ಕೇವಲ ಕಲಿಕೆಯ ಮಾಧ್ಯಮವಾಗಿ ಅಲ್ಲ, ಕನಿಷ್ಠ ಭಾಷೆಯಾಗಿ ಆದರೂ ತಮ್ಮ ಮಕ್ಕಳು ಇಂಗ್ಲಿಷ್ ಕಲಿಯಬೇಕೆಂದು ಹೆಚ್ಚಿನ ಪೋಷಕರು ಬಯಸುತ್ತಾರೆ. ಆದರೆ, ಒಬ್ಬ ಶಿಕ್ಷಕ ಈ ಎಲ್ಲಾ ವಿಷಯಗಳು, ತರಗತಿಗಳು ಮತ್ತು ಕಾರ್ಯಗಳನ್ನು ನಿರ್ವಹಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಅದಾಗ್ಯೂ, ರಾಜ್ಯಾದ್ಯಂತ ಸುಮಾರು 5,000 ಶಿಕ್ಷಕರ ನೇಮಕಾತಿಗೆ ಇಲಾಖೆ ಚಾಲನೆ ನೀಡಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಕೆ.ವಿ. ತ್ರಿಲೋಕಚಂದ್ರ ತಿಳಿಸಿದ್ದಾರೆ ಎಂದು TNIE ವರದಿ ಮಾಡಿದೆ. ವಿಶೇಷವಾಗಿ ಹೈದರಾಬಾದ್-ಕರ್ನಾಟಕ ಪ್ರದೇಶದಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ಗುರಿಯನ್ನು ಇದು ಹೊಂದಿದ್ದು, ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೂ ನೇಮಕಾತಿ ಅಭಿಯಾನವನ್ನು ವಿಸ್ತರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ | ‘ಮಲ್ಲು ಹಿಂದೂ ಆಫೀಸರ್ಸ್’ ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತು

ಕೇರಳ | ‘ಮಲ್ಲು ಹಿಂದೂ ಆಫೀಸರ್ಸ್’ ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...