ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯನ್ನು ತಿರಸ್ಕರಿಸಿದ ಹೈಕೋರ್ಟ್‌ನದ್ದು ‘ರಾಜಕೀಯ ತೀರ್ಪು’ ಎಂದಿದ್ದ ಸಚಿವ ಝಮೀರ್ ಅಹ್ಮದ್ ವಿರುದ್ದ ಕ್ರಮಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್ ಸೂಚಿಸಿದ್ದಾರೆ.
ಈ ಸಂಬಂಧ ಅಡ್ವೋಕೇಟ್ ಜನರಲ್ ಅವರಿಗೆ ನವೆಂಬರ್ 6ರಂದು ಪತ್ರ ಬರೆದಿರುವ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಹೈಕೋರ್ಟ್ ಆದೇಶದ ವಿರುದ್ದ ಗಂಭೀರ ಆರೋಪ ಮಾಡಿದ ಮತ್ತು ನ್ಯಾಯಾಲಯದ ಸಮಗ್ರತೆಯನ್ನು ಪ್ರಶ್ನಿಸಿದ ಆರೋಪ ಝಮೀರ್ ಅವರ ಮೇಲಿನ. ಈ ಸಂಬಂಧ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದ್ದಾರೆ.
ಮುಡಾ ನಿವೇಶನ ಹಂಚಿಕೆಯ ಆಪಾದಿತ ಅಕ್ರಮಕ್ಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿದ್ದ ಸಿದ್ದರಾಮಯ್ಯ ಅವರ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಈ ತೀರ್ಪನ್ನು ಝಮೀರ್ ಅಹ್ಮದ್ ಟೀಕಿಸಿದ್ದರು.
ಝಮೀರ್ ಹೇಳಿಕೆಯ ವಿರುದ್ದ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು. ಅವರ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ ಕೋರಿದ್ದರು.
ಇದನ್ನೂ ಓದಿ : ಉಡುಪಿ | ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಆರೋಪಿ ಸಾವು : ಎಸ್ಪಿ ಪ್ರತಿಕ್ರಿಯೆ


