Homeಕರ್ನಾಟಕನೆರೆ ಸಂಕಷ್ಟವನ್ನು ಕಾಂಗ್ರೆಸ್ ಚುನಾವಣಾ ವಿಷಯವಾಗಿಸಬೇಕು : ಎಚ್.ಎಸ್ ದೊರೆಸ್ವಾಮಿ

ನೆರೆ ಸಂಕಷ್ಟವನ್ನು ಕಾಂಗ್ರೆಸ್ ಚುನಾವಣಾ ವಿಷಯವಾಗಿಸಬೇಕು : ಎಚ್.ಎಸ್ ದೊರೆಸ್ವಾಮಿ

- Advertisement -
- Advertisement -

ಕರ್ನಾಟಕದಲ್ಲಿ ಶಾಸಕರ ಅನರ್ಹತೆಯ ಕಾರಣದಿಂದ ತೆರವಾದ 17 ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಈ ಅನರ್ಹರೆಲ್ಲ ಬಿಜೆಪಿ ಟಿಕೆಟ್ ಪಡೆಯಲು ಹರಸಾಹಸ ಮಾಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಈ ಎಲ್ಲಾ ಸೀಟುಗಳನ್ನೂ ಈ ಅನರ್ಹರಿಗೆ ಬಿಟ್ಟುಕೊಡಲು ಒಪ್ಪುತ್ತಿಲ್ಲ.

ಈ ಮಧ್ಯೆ ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆಗಳಿಗೆ ಚುನಾವಣೆ ನಡೆದು ಹರಿಯಾಣದಲ್ಲಿ ಬಿಜೆಪಿ ಸರ್ಕಾರ ಸ್ಥಾಪನೆಯಾಗಲಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಶಿವಸೇನೆ ಕೂಡಿಕೊಂಡು ಸರ್ಕಾರ ನಡೆಸುವಷ್ಟು ಬಹುಮತ ದೊರೆತಿದೆ. ಎಣಿಕೆಯ ಮೊದಲ ದಿನ ಫಲಿತಾಂಶಗಳ ವಿಶ್ಲೇಷಣೆ ಮಾಡಿದ ಒಂದು ಸಂಸ್ಥೆ, ಆಡಳಿತಾರೂಢ ಬಿಜೆಪಿ ಪಕ್ಷ ಈ ಎರಡೂ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಹೇಳಹೆಸರಿಲ್ಲದಂತಾಗುತ್ತವೆ ಎಂದು ಭವಿಷ್ಯ ನುಡಿದಿತ್ತು. ಆದರೆ ಅದರ ಮಾತು ಹುಸಿಯಾಯಿತು. ಮೋದಿ, ಅಮಿತ್ ಶಾದ್ವಯರಿಗೆ ಇದರಿಂದ ಮುಖಭಂಗವಾಗಿದೆ. ಕಾಂಗ್ರೆಸನ್ನು ಮುಗಿಸಿಯೇ ಬಿಡಬೇಕೆಂದು ಪಣತೊಟ್ಟಿರುವ ಮೋದಿ, ಶಾಗಳಿಗೆ ಶಾಕ್ ಆಗಿದೆ. ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಮಾಡಿರುವುದನ್ನು ಮತ್ತು ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಕೆಲವು ವಿರೋಧ ಪಕ್ಷಗಳ ನಾಯಕರನ್ನು ಬಿಜೆಪಿಗೆ ಸೇರಿಸಿಕೊಂಡಿದ್ದನ್ನು ಬಂಡವಾಳ ಮಾಡಿಕೊಂಡು ಮೋದಿ ಮತ್ತು ಶಾ ಚುನಾವಣೆ ಎದುರಿಸಿದರು.

ಆದರೆ ಈ ಗಿಮಿಕ್‍ಗಳು ಅವರ ನೆರವಿಗೆ ಬರಲಿಲ್ಲ. ಲೋಕಲ್ ಸಮಸ್ಯೆಗಳಾದ ನಿರುದ್ಯೋಗ, ಪದಾರ್ಥಗಳ ಬೆಲೆ ಏರಿಕೆ ಇವುಗಳ ಪ್ರಸ್ತಾಪ ಮಾಡದೆ ಹೋದರೂ, ಮಹಾರಾಷ್ಟ್ರದಲ್ಲಿ ಸಂಭವಿಸಿದ ನೆರೆ ಹಾವಳಿ, ನೆರೆ ಹಾನಿ ಇವುಗಳನ್ನು ಉಪೇಕ್ಷೆ ಮಾಡಿ ತಮ್ಮ ಪ್ರತಿಷ್ಟೆಯನ್ನು ಕೊಚ್ಚಿಕೊಂಡಿದ್ದು ಮತದಾರರನ್ನು ಕೆರಳಿಸಿತು. ಕಾಂಗ್ರೆಸ್ಸನ್ನು ನಿರ್ನಾಮ ಮಾಡಲು ನಾವು ಬಿಡುವುದಿಲ್ಲ ಎಂದು ಮೋದಿ, ಶಾಗಳಿಗೆ ಸೆಡ್ಡು ಹೊಡೆದು ಕಾಂಗ್ರೆಸ್ಸಿಗರನ್ನು ಸಾಕಷ್ಟು ಸಂಖ್ಯೆಯಲ್ಲಿ ಮತದಾರರು ಗೆಲ್ಲಿಸಿದ್ದಾರೆ.

2014ರಲ್ಲಿ ಹರ್ಯಾಣ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಿದ್ದ ಮತಗಳಿಗೂ 2019ರಲ್ಲಿ ಬಿದ್ದ ಓಟಿನ ಸಂಖ್ಯೆಗೂ ತುಂಬ ವ್ಯತ್ಯಾಸವಿದೆ. ಮಹಾರಾಷ್ಟ್ರದ ವಿದರ್ಭ, ಪಶ್ಚಿಮ ಮಹಾರಾಷ್ಟ್ರ ಮತ್ತು ಹರ್ಯಾಣದ ಗ್ರಾಮಾಂತರ ಪ್ರದೇಶದಲ್ಲಿ ಸಂಭವಿಸಿರುವ ಗ್ರಾಮೀಣ ಜನರ ನಿರುದ್ಯೋಗ ಸಮಸ್ಯೆ, ನೆರೆಯಿಂದ ಉಂಟಾದ ಸಮಸ್ಯೆಗಳಿಗೆ ಗಮನ ಕೊಡದೆ ಇರುವುದು ಮತದಾರರನ್ನು ಕೆಣಕಿತ್ತು. ಅವರು ಬಿಜೆಪಿ ವಿರುದ್ಧ ಸೆಟೆದು ನಿಂತರು. ಬಿಜೆಪಿಯಲ್ಲಿ ಗೆದ್ದವರ ಸಂಖ್ಯೆ ಕಡಿಮೆಯಾಗುವುದಕ್ಕೆ ಇದು ಮುಖ್ಯ ಕಾರಣವಾಯಿತು.
ಬಿಜೆಪಿಯಲ್ಲಿರುವ ಸಕ್ರಿಯ ಜಿಲ್ಲಾ ನಾಯಕರನ್ನೂ ಕಡೆಗಣಿಸಿ ಕಾಂಗ್ರೆಸ್ಸಿನಿಂದ ಎನ್‍ಸಿಪಿಯಿಂದ ಅಧಿಕಾರ ಆಮಿಷಕ್ಕೆ ಒಳಗಾಗಿ ಬಿಜೆಪಿಗೆ ಧಾವಿಸಿಬಂದ ಅಧಿಕಾರದಾಹಿಗಳಿಗೆ ಉಮೇದುವಾರಿಕೆ ನೀಡಿದ್ದು, ಬಿಜೆಪಿಯಲ್ಲಿನ ಒಡಕಿಗೆ ಕಾರಣವಾಯಿತು. ಹರ್ಯಾಣ ಮತ್ತು ಮಹಾರಾಷ್ಟ್ರಗಳಲ್ಲಿ ಪಕ್ಷಾಂತರವಾಗಿದ್ದವರಲ್ಲಿ ತಲಾ 8 ಮಂದಿ ಈ ಚುನಾವಣೆಯಲ್ಲಿ ಸೋಲನ್ನಪ್ಪಿದರು. ಅನರ್ಹರನ್ನು ಬೇರೆ ಬೇರೆ ಕಾರಣಗಳಿಗಾಗಿ ಮಂತ್ರಿಸ್ಥಾನದಲ್ಲಿ ಕೂಡಿಸುವುದು ಮತದಾರನ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಅನರ್ಹ ಶಾಸಕರ ರಾಜಕೀಯ ಭವಿಷ್ಯ ಮುಂದೇನು?

ಜನ ನೆರೆಹಾವಳಿ, ಜಲಕ್ಷಾಮ ಇವುಗಳಿಂದ ತತ್ತರಿಸುತ್ತಿರುವಾಗ ಅದರ ಪರಿಹಾರಕ್ಕೆ ಪರಿಣಾಮಕಾರಿಯಾದ ನೆರವು ನೀಡುವುದರಲ್ಲಿ ಉದಾಸೀನ ತೋರಿದ ಮಂತ್ರಿಗಳನ್ನು ಮತದಾರ ಸಹಿಸುವುದಿಲ್ಲ ಎಂಬುದು ಮಹಾರಾಷ್ಟ್ರ ಚುನಾವಣೆಯಲ್ಲಿ ಸಾಬೀತಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಗಮನಿಸಬೇಕಾದ ಅಂಶ ಎಂದರೆ ಕಾಂಗ್ರೆಸ್ಸು ಕಂಗೆಟ್ಟು ಕೂತಿದ್ದರೂ, ಕಳಾಹೀನವಾಗಿದ್ದರೂ ಸೋನಿಯಾ ಗಾಂಧಿ ಬಿಟ್ಟರೆ ಇನ್ಯಾರೂ ಅಧ್ಯಕ್ಷಸ್ಥಾನದಲ್ಲಿ ಕೂಡಲು ಅರ್ಹರಲ್ಲ ಎಂಬ ದುರವಸ್ಥೆ ಕಾಂಗ್ರೆಸ್‍ಗೆ ಬಂದಿದ್ದರೂ, ಕಾಂಗ್ರೆಸ್‍ಗೆ ಇಷ್ಟೊಂದು ಸೀಟುಗಳು ಹರ್ಯಾಣದಲ್ಲೂ, ಮಹಾರಾಷ್ಟ್ರದಲ್ಲೂ ಹೇಗೆ ಲಭಿಸಿದವು? ಮೊದಲನೆಯ ಕಾರಣ ಮೋದಿ, ಶಾಗಳ ಅಬ್ಬರದ ಪ್ರಚಾರದಲ್ಲಿ ಜನಕ್ಕೆ ನಂಬಿಕೆ ಕಳೆದುಹೋಗಿರುವುದು ಮತ್ತು ಹೈಕಮಾಂಡ್ ಲೋಕಮ್ಯಾಂಡಾಗಿ ಪರಿವರ್ತಿತವಾಗಿದ್ದರೂ ಗ್ರಾಸ್ ರೂಟ್ ಕಾಂಗ್ರೆಸ್ ವರ್ಕರ್ಸ್ ಗಟ್ಟಿಯಾಗಿ ನಿಂತಿರುವುದು ಕಾಂಗ್ರೆಸ್ ಚೇತರಿಕೆಗೆ ಮುಖ್ಯ ಕಾರಣವಾಗಿದೆ.

ಈಗ ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ಘೋಷಣೆಯಾಗಲಿದೆ. 17 ಸೀಟುಗಳಿಗೆ ನಡೆಯುವ ಈ ಉಪಚುನಾವಣೆಗೆ ಅನರ್ಹರೆಂದು ಘೋಷಿಸಲ್ಪಟ್ಟಿರುವ 17 ಮಂದಿಯನ್ನು ಅಭ್ಯರ್ಥಿಗಳನ್ನಾಗಿ ನಿಲ್ಲಿಸಲು ಬಿಜೆಪಿ ತೀರ್ಮಾನಿಸಿದೆ. ಅನರ್ಹರು ಮಧ್ಯಂತರ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ತೀರ್ಪಿತ್ತರೆ ಬಿಜೆಪಿ ಬೇರೆಯವರಿಗೇ ಸೀಟು ಕೊಡುವುದು ಅನಿವಾರ್ಯವಾದೀತು.
ಅದೇನೇ ಇರಲಿ ಕಾಂಗ್ರೆಸ್ ಸಂಸ್ಥೆ ಈ ಮರು ಚುನಾವಣೆಯನ್ನು ಎದುರಿಸುವುದು ಅನಿವಾರ್ಯ. ಕರ್ನಾಟಕ ಕಾಂಗ್ರೆಸ್ಸಿನ ನಾಯಕರಲ್ಲಿ ಐಕಮತ್ಯ ಇಲ್ಲ. ಇಂತಹ ಸಂದರ್ಭದಲ್ಲಿ ಸಾಮೂಹಿಕ ನಾಯಕತ್ವವನ್ನು ರೆಡಿಮಾಡುವುದು ಅನಿವಾರ್ಯ. ಆ ಕೆಲಸ ಕೂಡಲೇ ಆಗಬೇಕು.

ಬಿಜೆಪಿ ಸರ್ಕಾರವೇ ಕರ್ನಾಟಕದಲ್ಲಿ ಕೇಂದ್ರದಲ್ಲೂ ಅಧಿಕಾರದಲ್ಲಿದ್ದರೂ ಇಲ್ಲಿ ನಡೆದುಹೋಗಿರುವ ನೆರೆ ಹಾವಳಿ ಮತ್ತು ಜಲಕ್ಷಾಮದ ಕಾರಣದಿಂದ ಇಲ್ಲಿಯ ಜನ ತತ್ತರಿಸಿಹೋಗಿದ್ದರೂ ಕೇಂದ್ರಸರ್ಕಾರದ ಮೋದಿ ಮತ್ತು ಶಾ ಅವರು ಕಠಿಣ ಹೃದಯಗಳಾಗಿ ಜನರ ಕಷ್ಟಕ್ಕೂ ಸ್ಪಂದಿಸದೆ ಇರುವುದನ್ನು ಖಂಡಿಸಿ ಈ ಚುನಾವಣೆ ಮುಗಿದ ಕೂಡಲೇ ಕಾಂಗ್ರೆಸ್ ಶಾ ಮತ್ತು ಮೋದಿ ವಿರುದ್ಧ ಅಸಹಕಾರ ಚಳವಳಿ ಆರಂಭಿಸುವುದಾಗಿ ಘೋಷಿಸಬೇಕು. ಈ ಚಳವಳಿಗೆ ಬೇಕಾದ ಸಿದ್ಧತೆಯನ್ನು ಈಗಿನಿಂದಲೇ ಮಾಡಿಕೊಳ್ಳಬೇಕು. ಪ್ರತಿ ಜಿಲ್ಲೆಯಲ್ಲೂ ಈ ಅಸಹಕಾರ ಚಳವಳಿ ಪರಿಣಾಮಕಾರಿಯಾಗಿ ನಡೆಸುವುದಕ್ಕೆ ಬೇಕಾದ ಸಿದ್ಧತೆಯನ್ನು ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮದ ಮಟ್ಟದ ಕಾಂಗ್ರೆಸ್ಸಿಗರು ಈ ಕೂಡಲೇ ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರದಿಂದ ಪೂರ್ಣ ಪ್ರಮಾಣದ ನೆರವು ಬರುವವರೆಗೂ ಈ ಅಸಹಕಾರ ಚಳವಳಿ ಮುಂದುವರೆಯಬೇಕು.

ಚುನಾವಣಾ ಪ್ರಚಾರ ಕಾಲದಲ್ಲಿ ಈ ಅಸಹಕಾರ ಚಳವಳಿ ಕುರಿತು ವ್ಯಾಪಕ ಪ್ರಚಾರ ನೀಡಬೇಕು. ಈ ಅನರ್ಹ ಅಭ್ಯರ್ಥಿಗಳು ಸಮಯಸಾಧಕರು, ಸ್ವಾರ್ಥಿಗಳು, ಅಧಿಕಾರದಾಹಿಗಳು, ಪ್ರಜಾಪ್ರಭುತ್ವಕ್ಕೆ ಮಾರಕರು ಎಂಬುದನ್ನು ಮತದಾರರಿಗೆ ಮನಮುಟ್ಟುವಂತೆ ತಿಳಿಸಬೇಕು. ಇಂತಹದು ಚುನಾವಣಾ ವಿಚಾರಗಳಾಗದೇ ಇದ್ದರೆ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...