Homeಮುಖಪುಟಕೇರಳ | 'ಮಲ್ಲು ಹಿಂದೂ ಆಫೀಸರ್ಸ್' ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು...

ಕೇರಳ | ‘ಮಲ್ಲು ಹಿಂದೂ ಆಫೀಸರ್ಸ್’ ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತು

- Advertisement -
- Advertisement -

ಕೇರಳ ಸರ್ಕಾರ ಸೋಮವಾರ (ನ.11) ಐಎಎಸ್ ಅಧಿಕಾರಿಗಳಾದ ಕೆ.ಗೋಪಾಲಕೃಷ್ಣನ್ ಮತ್ತು ‘ಕಲೆಕ್ಟರ್ ಬ್ರೋ’ ಎಂದು ಜನಪ್ರಿಯರಾಗಿದ್ದ ಎನ್. ಪ್ರಶಾಂತ್ ಅವರನ್ನು ಶಿಸ್ತು ಕ್ರಮದ ಭಾಗವಾಗಿ ಅಮಾನತುಗೊಳಿಸಿದೆ ಎಂದು ವರದಿಯಾಗಿದೆ.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನಿರ್ದೇಶಕ ಕೆ. ಗೋಪಾಲಕೃಷ್ಣನ್ ಅವರನ್ನು ಕೇರಳದ ‘ಹಿಂದೂ ಐಎಎಸ್ ಅಧಿಕಾರಿಗಳಿಗೆ ಪ್ರತ್ಯೇಕವಾಗಿ ವಾಟ್ಸಾಪ್ ಗ್ರೂಪ್’ ರಚಿಸಿದ್ದಕ್ಕಾಗಿ ಮತ್ತು ಕೃಷಿ ಇಲಾಖೆಯ ವಿಶೇಷ ಕಾರ್ಯದರ್ಶಿ ಎನ್. ಪ್ರಶಾಂತ್ ಅವರನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಯತಿಲಕ್ ಅವರನ್ನು ಟೀಕಿಸಿದ್ದಕ್ಕಾಗಿ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಅಧಿಕಾರಿಗಳ ಕಾರ್ಯವೈಖರಿ ಕುರಿತು ಮುಖ್ಯ ಕಾರ್ಯದರ್ಶಿ ಸಲ್ಲಿಸಿದ ವರದಿಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ರಾಜ್ಯ-ಸರ್ಕಾರದ ಉಪಕ್ರಮವಾದ ‘ಉನ್ನತಿ’ಯಿಂದ ಕಡತಗಳು ನಾಪತ್ತೆಯಾಗಿವೆ ಎಂದು ಮಾತೃಭೂಮಿ ನ್ಯೂಸ್ ವರದಿ ಮಾಡಿದ ಬಳಿಕ, ಅಧಿಕಾರಿಗಳಾದ ಪ್ರಶಾಂತ್ ಮತ್ತು ಜಯತಿಲಕ್ ನಡುವೆ ಜಗಳ ಶುರುವಾಗಿತ್ತು. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಯತಿಲಕ್ ಅವರು ‘ಉನ್ನತಿ’ ಉಪಕ್ರಮದ ನೇತೃತ್ವ ವಹಿಸಿದ್ದ ಪ್ರಶಾಂತ್ ಅವರ ಸರ್ಕಾರಕ್ಕೆ ವರದಿ ನೀಡಿದ್ದರು.

ನಂತರ ಪ್ರಶಾಂತ್ ಅವರ ಹಾಜರಾತಿ ದಾಖಲೆಗಳನ್ನು ಸುಳ್ಳು ಮಾಡಿದ ಆರೋಪದ ಮೇಲೆ ಮಾತೃಭೂಮಿ ನ್ಯೂಸ್ ಮತ್ತೊಂದು ವರದಿ ಮಾಡಿತ್ತು.

ನವೆಂಬರ್ 9ರ ಶನಿವಾರದಂದು, ಜಯತಿಲಕ್ ಅವರು ವರದಿಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿ ಪ್ರಶಾಂತ್ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಲವಾರು ಯುವ ಐಎಎಸ್ ಅಧಿಕಾರಿಗಳ ಜೀವನವನ್ನು ಹಾಳು ಮಾಡಿದ್ದಾರೆ. ಅವರು ತಮ್ಮ ಕುಟುಂಬಕ್ಕೆ ಉಪಕಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಪ್ರಶಾಂತ್ ಅವರು ತಮ್ಮ ಹಿರಿಯ ಅಧಿಕಾರಿಯನ್ನು ಸಿನಿಮಾ ಡೈಲಾಗ್ ಬಳಸಿ ಲೇವಡಿ ಮಾಡಿದ್ದರು.

ಅಮಾನತ್ತಾದ ಇನ್ನೋರ್ವ ಅಧಿಕಾರಿ ಗೋಪಾಲಕೃಷ್ಣನ್ ಅವರು ಹಿಂದೂ ಐಎಎಸ್ ಅಧಿಕಾರಿಗಳಿಗಾಗಿಯೇ ಪ್ರತ್ಯೇಕ ವಾಟ್ಸಾಪ್ ಗ್ರೂಪ್ ರಚಿಸಿರುವ ಆರೋಪವಿದೆ. ‘ಮಲ್ಲು ಹಿಂದೂ ಆಫೀಸರ್ಸ್’ ಎಂಬ ವಾಟ್ಸಾಪ್ ಗ್ರೂಪನ್ನು ದೀಪಾವಳಿಗೆ ಸಂಬಂಧಿಸಿದಂತೆ ಗೋಪಾಲಕೃಷ್ಣನ್ ರಚಿಸಿದ್ದಾರೆ ಎಂದು ವರದಿಯಾಗಿದೆ.

ಕೆಲವು ಐಎಎಸ್ ಅಧಿಕಾರಿಗಳು ಈ ಬಗ್ಗೆ ಗೋಪಾಲಕೃಷ್ಣನ್ ಬಳಿ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದರು. ನಂತರ ಆ ವಾಟ್ಸಾಪ್ ಗ್ರೂಪನ್ನು ಡಿಲಿಟ್ ಮಾಡಲಾಗಿತ್ತು.

ಗ್ರೂಪಿನ ಸ್ಕ್ರೀನ್‌ಶಾಟ್ ಮಾಧ್ಯಮಗಳಿಗೆ ಸೋರಿಕೆಯಾದಾಗ, ಗೋಪಾಲಕೃಷ್ಣನ್ ತಮ್ಮ ಮೊಬೈಲ್ ಫೋನ್ ಹ್ಯಾಕ್ ಆಗಿದೆ ಎಂದು ಹೇಳಿದ್ದರು. “ಯಾರೋ ನನ್ನ ಮೊಬೈಲ್ ಹ್ಯಾಕ್ ಮಾಡಿದಂತೆ ತೋರುತ್ತಿದೆ, ಅದರಲ್ಲಿ 11 ಗ್ರೂಪ್‌ಗಳನ್ನು ರಚಿಸಿದ್ದಾರೆ. ನನ್ನ ಎಲ್ಲಾ ಸಂಪರ್ಕ ಸಂಖ್ಯೆಗಳನ್ನು ಅದಕ್ಕೆ ಸೇರಿಸಿದ್ದಾರೆ. ನಾನು ಈಗ ವಾಟ್ಸಾಪ್ ಅನ್‌ ಇನ್‌ಸ್ಟಾಲ್ ಮಾಡಿದ್ದೇನೆ. ಅದರಲ್ಲಿದ್ದ ಎಲ್ಲಾ ಗ್ರೂಪ್‌ಗಳನ್ನು ಮ್ಯಾನುಅಲ್ ಆಗಿ ತೆಗೆದು ಹಾಕಿದ್ದೇನೆ. ಶೀಘ್ರದಲ್ಲೇ ನನ್ನ ಫೋನ್ ಬದಲಾಯಿಸುತ್ತೇನೆ” ಎಂದು ಹೇಳಿಕೊಂಡಿದ್ದರು.

ತನ್ನ ಫೋನ್ ಹ್ಯಾಕ್ ಆಗಿದೆ ಎಂದು ಗೋಪಾಲಕೃಷ್ಣನ್ ದೂರು ನೀಡಿದ ನಂತರ ಪೊಲೀಸರು ತನಿಖೆ ನಡೆಸಿದ್ದರು. ಆದರೆ, ಫೋರೆನ್ಸಿಕ್ ಪರೀಕ್ಷೆಯಲ್ಲಿ ಅವರ ಮೊಬೈಲ್ ಹ್ಯಾಕ್‌ ಆದ ಬಗ್ಗೆ ಯಾವುದೇ ಪುರಾವೆಗಳು ಪೊಲೀಸರಿಗೆ ಸಿಕ್ಕಿರಲಿಲ್ಲ. ಅಲ್ಲದೆ, ಪೊಲೀಸರಿಗೆ ನೀಡುವ ಮೊದಲು ತನ್ನ ಫೋನ್ ಅನ್ನು ಫಾರ್ಮ್ಯಾಟ್ ಮಾಡಿದ್ದೇನೆ ಎಂದು ಗೋಪಾಲಕೃಷ್ಣನ್ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ. ಮೊಬೈಲ್ ಸೈಬರ್ ದಾಳಿಗೆ ಒಳಗಾದ ಯಾವುದೇ ಲಕ್ಷಣಗಳು ಗೋಪಾಕೃಷ್ಣನ್ ಅವರ ಮೊಬೈಲ್‌ನಲ್ಲಿ ಪೊಲೀಸರಿಗೆ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿ : ‘ಕೋಮುದ್ವೇಷ’ ಹರಡುವ ಕಾರ್ಟೂನ್ | ಬಿಜೆಪಿ ವಿರುದ್ಧ ಚು.ಆಯೋಗಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...