Homeಮುಖಪುಟಸಮನ್ಸ್ ಪ್ರಶ್ನಿಸಿ ಕೇಜ್ರಿವಾಲ್ ಹೈಕೋರ್ಟ್‌ಗೆ ಅರ್ಜಿ; ಇಡಿಗೆ ನೋಟಿಸ್

ಸಮನ್ಸ್ ಪ್ರಶ್ನಿಸಿ ಕೇಜ್ರಿವಾಲ್ ಹೈಕೋರ್ಟ್‌ಗೆ ಅರ್ಜಿ; ಇಡಿಗೆ ನೋಟಿಸ್

- Advertisement -
- Advertisement -

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ತಮಗೆ ಸಮನ್ಸ್ ನೀಡಿರುವುದನ್ನು ಪ್ರಶ್ನಿಸಿ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ ಮನವಿಯ ಬಗ್ಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾರಿ ನಿರ್ದೇಶನಾಲಯದ ಪ್ರತಿಕ್ರಿಯೆ ಕೇಳಿದೆ. ಅದಾಗ್ಯೂ, ನ್ಯಾಯಮೂರ್ತಿ ಮನೋಜ್ ಕುಮಾರ್ ಓಹ್ರಿ ಅವರು ಕೇಜ್ರಿವಾಲ್ ಅವರ ವಿರುದ್ಧ ದಾಖಲಾಗಿದರುವ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ತಡೆ ನೀಡಲು ನಿರಾಕರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಕರಣದಲ್ಲಿ ಇಡಿ ಸಲ್ಲಿಸಿದ ದೂರಿನ ಮೇರೆಗೆ ಕೇಜ್ರಿವಾಲ್‌ ಅವರಿಗೆ ನೀಡಲಾದ ಸಮನ್ಸ್ ಅನ್ನು ಪ್ರಶ್ನಿಸಿದ ಅರ್ಜಿಯ ಆಧಾರದಲ್ಲಿ ಹೈಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ (ಇಡಿ) ನೋಟಿಸ್ ಜಾರಿ ಮಾಡಿದೆ. ಒಬ್ಬ ಅಧಿಕಾರಿಯಿಂದ ಸಮನ್ಸ್ ಜಾರಿಗೊಳಿಸಲಾಗಿದ್ದು, ಮತ್ತೊಬ್ಬ ಅಧಿಕಾರಿಯಿಂದ ದೂರು ದಾಖಲಿಸಲಾಗಿದೆ ಎಂಬ ಕಾರಣಕ್ಕೆ ಕೇಜ್ರಿವಾಲ್ ಪರ ವಕೀಲರು ಈ ದೂರಿನ ನಿರ್ವಹಣೆಯ ಬಗ್ಗೆ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ.

ಸಮನ್ಸ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಸೆಷನ್ಸ್ ನ್ಯಾಯಾಲಯದ ಸೆಪ್ಟೆಂಬರ್ 17ರ ಆದೇಶವನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಹೈಕೋರ್ಟ್‌ನಲ್ಲಿ  ಅರ್ಜಿಯ ವಿಚಾರಣೆಯ ಸಂದರ್ಭ, ಇಡಿ ಪರವಾಗಿ ಹಾಜರಾದ ವಕೀಲರು ಅರ್ಜಿಯ ನಿರ್ವಹಣೆಯ ಬಗ್ಗೆ ಪ್ರಾಥಮಿಕ ಆಕ್ಷೇಪಣೆಯನ್ನು ಎತ್ತಿದ್ದಾರೆ.

ಕೇಜ್ರಿವಾಲ್ ಅವರ ಮನವಿಯು ಎರಡನೇ ಪರಿಷ್ಕರಣೆ ಅರ್ಜಿಯಾಗಿದ್ದು, ಇದನ್ನು ಸಿಆರ್‌ಪಿಸಿಯ ಸೆಕ್ಷನ್ 482 ರ ಅಡಿಯಲ್ಲಿ ಸಲ್ಲಿಸಲಾಗಿದೆ. ಅದನ್ನು ಕಾನೂನಿನಲ್ಲಿ ನಿರ್ಬಂಧಿಸಲಾಗಿದೆ ಎಂದು ಅವರು ವಾದಿಸಿದ್ದಾರೆ. ಈ ಅರ್ಜಿಯಲ್ಲಿ ಮಾಡಲಾಗಿರುವ ಆಧಾರಗಳು ವಿಚಾರಣಾ ನ್ಯಾಯಾಲಯದ ಮುಂದೆ ಸಲ್ಲಿಸಲಾದ ಆಧಾರಗಳಿಗೆ ಸಮಾನವಾಗಿವೆ ಎಂದು ಅವರು ವಾದಿಸಿದ್ದಾರೆ.

ಆದರೆ, ಸಹಾಯಕ ನಿರ್ದೇಶಕ ಶ್ರೇಣಿಯ ಇಡಿ ಅಧಿಕಾರಿಯೊಬ್ಬರು ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿದ್ದಾರೆ. ಆದರೆ ಅದೇ ಶ್ರೇಣಿಯ ಇನ್ನೊಬ್ಬ ಇಡಿ ಅಧಿಕಾರಿಯಿಂದ ದೂರನ್ನು ದಾಖಲಿಸಿದ್ದಾರೆ. ನಿಯಮಗಳ ಪ್ರಕಾರ ಹೀಗೆ ಮಾಡುವಂತಿಲ್ಲ ಎಂದು ಕೇಜ್ರಿವಾಲ್ ಅವರ ವಕೀಲರು ವಾದಿಸಿದ್ದಾರೆ. ಸಮನ್ಸ್‌ಗೆ ಸಹಿ ಮಾಡಿದ ಅಧಿಕಾರಿ ಲಭ್ಯವಿದ್ದರೂ ಇನ್ನೊಬ್ಬ ಅಧಿಕಾರಿಯಿಂದ ನ್ಯಾಯಾಲಯಕ್ಕೆ ದೂರು ಸಲ್ಲಿಸಲಾಗಿದೆ ಎಂದು ವಕೀಲರು ಹೇಳಿದ್ದಾರೆ. ಹೈಕೋರ್ಟ್ ಡಿಸೆಂಬರ್ 19 ರಂದು ಮುಂದಿನ ವಿಚಾರಣೆಗೆ ಪ್ರಕರಣವನ್ನು ಪಟ್ಟಿ ಮಾಡಿದೆ.

ಇದನ್ನೂ ಓದಿ: ರಾಜ್ಯದ 6,158 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು! – ವರದಿ

ರಾಜ್ಯದ 6,158 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು! – ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...