Homeಮುಖಪುಟಮೌಖಿಕ ಮನವಿಯ ಮೇಲೆ ತುರ್ತು ವಿಚಾರಣೆ ನಡೆಸುವುದಿಲ್ಲ - ಸಿಜೆಐ ಖನ್ನಾ

ಮೌಖಿಕ ಮನವಿಯ ಮೇಲೆ ತುರ್ತು ವಿಚಾರಣೆ ನಡೆಸುವುದಿಲ್ಲ – ಸಿಜೆಐ ಖನ್ನಾ

- Advertisement -
- Advertisement -

ಪ್ರಕರಣಗಳ ತುರ್ತು ಪಟ್ಟಿಗೆ ಮತ್ತು ವಿಚಾರಣೆಗೆ ಯಾವುದೇ ಮೌಖಿಕ ಮನವಿಗಳನ್ನು ಅನುಮತಿಸಲಾಗುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮಂಗಳವಾರ ಘೋಷಿಸಿದ್ದಾರೆ. ಹಾಗಾಗಿ, ಇನ್ನು ಮುಂದಕ್ಕೆ ಅಂತಹ ಪ್ರಕರಣಗಳಿಗಾಗಿ ವಕೀಲರು  ಇಮೇಲ್ ಅಥವಾ ಲಿಖಿತ ಪತ್ರಗಳ ಮೂಲಕ ವಿನಂತಿಗಳನ್ನು ಸಲ್ಲಿಸಬೇಕಾಗುತ್ತದೆ. ಮೌಖಿಕ ಮನವಿಯ

ಸಾಂಪ್ರದಾಯಿಕವಾಗಿ, ವಕೀಲರು ತಮ್ಮ ಪ್ರಕರಣಗಳನ್ನು ಸಿಜೆಐ ನೇತೃತ್ವದ ಪೀಠದ ಮುಂದೆ ಪ್ರತಿನಿತ್ಯದ ವಿಚಾರಣೆಯ ಪ್ರಾರಂಭದಲ್ಲಿ ತುರ್ತು ಆಧಾರದ ಮೇಲೆ ಔಟ್-ಆಫ್-ಟರ್ನ್ ಪಟ್ಟಿಗಳು ಮತ್ತು ವಿಚಾರಣೆಗಳನ್ನು ಕೋರುತ್ತಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇನ್ನು ಮುಂದೆ ಯಾವುದೇ ಲಿಖಿತ ಅಥವಾ ಮೌಖಿಕ ಉಲ್ಲೇಖಗಳನ್ನು ಪರಿಗಣಿಸುವುದಿಲ್ಲ. ತುರ್ತು ಕಾರಣಗಳನ್ನು ತಿಳಿಸಿ ಇಮೇಲ್‌ಗಳು ಅಥವಾ ಲಿಖಿತ ಸ್ಲಿಪ್‌ಗಳು ಅಥವಾ ಪತ್ರಗಳನ್ನು ಸಲ್ಲಿಸಿದರೆ ಮಾತ್ರ ಅದನ್ನು ಸ್ವೀಕರಿಸಲಾಗುತ್ತದೆ” ಎಂದು ಸಿಜೆಐ ಹೇಳಿದ್ದಾರೆ. ಮೌಖಿಕ ಮನವಿಯ

ಸೋಮವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ 51ನೇ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಖನ್ನಾ, ನ್ಯಾಯಾಂಗ ಸುಧಾರಣೆಗಳಿಗೆ ಜನಕೇಂದ್ರಿತ ಕಾರ್ಯಸೂಚಿಯ ಮಹತ್ವವನ್ನು ಪುನರುಚ್ಚರಿಸಿದ್ದಾರೆ. ಜನರ ಸ್ಥಾನಮಾನವನ್ನು ಲೆಕ್ಕಿಸದೆ ಅವರಿಗೆ ಸುಲಭವಾಗಿ ನ್ಯಾಯ ಸಿಗುವಂತೆ ಮಾಡಲು ಮತ್ತು ಸಮಾನತೆಯನ್ನು ಖಚಿತಪಡಿಸುವುದು ನ್ಯಾಯಾಂಗದ ಸಾಂವಿಧಾನಿಕ ಕರ್ತವ್ಯವಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ.

“ನ್ಯಾಯಾಂಗವು ಆಡಳಿತ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿದ್ದರೂ, ಅದು ವಿಭಿನ್ನ ಮತ್ತು ಸ್ವತಂತ್ರ ಭಾಗವಾಗಿದೆ. ಸಂವಿಧಾನವು ನಮಗೆ ಸಂವಿಧಾನದ ರಕ್ಷಕನ ಪಾತ್ರ ವಹಿಸುತ್ತದೆ. ಜೊತೆಗೆ ಮೂಲಭೂತ ಹಕ್ಕುಗಳ ರಕ್ಷಕ ಮತ್ತು ನ್ಯಾಯವನ್ನು ನೀಡುವ ಜವಾಬ್ದಾರಿಯನ್ನು ವಹಿಸುತ್ತದೆ” ಎಂದು ಸಿಜೆಐ ತನ್ನ ಮೊದಲ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಾಕಿ ಉಳಿದಿರುವ ಪ್ರಕರಣಗಳನ್ನು ಕಡಿಮೆ ಮಾಡಲು, ದಾವೆಗಳನ್ನು ಹೆಚ್ಚು ಕೈಗೆಟುಕುವಂತೆ ಮಾಡಲು ಮತ್ತು ಸಂಕೀರ್ಣ ಕಾನೂನು ಪ್ರಕ್ರಿಯೆಗಳನ್ನು ಸರಳಗೊಳಿಸುವ ದೃಷ್ಟಿಕೋನವನ್ನು ಜಸ್ಟಿಸ್ ಖನ್ನಾ ಅವರು ವಿವರಿಸಿದ್ದಾರೆ. ನ್ಯಾಯ ವ್ಯವಸ್ಥೆಯು ಎಲ್ಲಾ ನಾಗರಿಕರನ್ನು ತಲುಪಬೇಕು ಎಂದು ಅವರು ಒತ್ತಿ ಹೇಳಿದ್ದು, ನ್ಯಾಯಾಲಯಗಳನ್ನು ಹೆಚ್ಚು ಸುಲಭವಾಗಿ ಮತ್ತು ಬಳಕೆದಾರ ಸ್ನೇಹಿಯನ್ನಾಗಿ ಮಾಡಲು ಪ್ರಸ್ತಾಪಿಸಿದ್ದಾರೆ.

ಇದನ್ನೂ ಓದಿ: ರಾಜ್ಯದ 6,158 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು! – ವರದಿ

ರಾಜ್ಯದ 6,158 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು! – ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...