Homeಮುಖಪುಟಉತ್ತರ ಪ್ರದೇಶ | ವಿಕಲಾಂಗ ಮಹಿಳೆಯನ್ನು ಥಳಿಸಿ ಕೊಂದ ಗುಂಪು

ಉತ್ತರ ಪ್ರದೇಶ | ವಿಕಲಾಂಗ ಮಹಿಳೆಯನ್ನು ಥಳಿಸಿ ಕೊಂದ ಗುಂಪು

- Advertisement -
- Advertisement -

ತಮ್ಮ ತೋಟದಿಂದ ಹಣ್ಣುಗಳನ್ನು ಕಿತ್ತಿದ್ದಾರೆ ಎಂಬ ಆರೋಪದ ಮೇಲೆ ಮಹಿಳೆಯರ ಗುಂಪಿನಿಂದ ಹಲ್ಲೆಗೊಳಗಾಗಿ ಗಾಯಗೊಂಡಿದ್ದ 30 ವರ್ಷದ ವಿಶೇಷ ಚೇತನ ಮಹಿಳೆಯೊಬ್ಬರು ಒಂದು ದಿನದ ನಂತರ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. ಪ್ರಕರಣವನ್ನು ನಿಭಾಯಿಸುವಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಮಂಗಳವಾರ ತಿಳಿಸಿದ್ದಾರೆ. ಉತ್ತರ ಪ್ರದೇಶ

ನವೆಂಬರ್ 9 ರಂದು ಸುನೀತಾ ದೇವಿ ಮತ್ತು ಅವರ ಪತಿ ಓಂಕಾರ್ ಅವರು ಪಾಪ್ರಿ ಗ್ರಾಮದ ಕೆರೆಯಿಂದ ಚೆಸ್ಟ್‌ನಟ್‌ ಹಣ್ಣುಗಳನ್ನು ಸಂಗ್ರಹಿಸಿ ಮನೆಗೆ ಮರಳುತ್ತಿದ್ದರು. ದಾರಿ ಮಧ್ಯೆ ಸುನೀತಾ ಮತ್ತು ಗ್ರಾಮದ ಸ್ಥಳೀಯ ಮಹಿಳೆಯರ ಗುಂಪಿನ ನಡುವೆ ವಾಗ್ವಾದ ನಡೆದಿತ್ತು. ಈ ವೇಳೆ ಮಹಿಳೆಯರು ಸುನೀತಾ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಶಿಕಾರ್ಪುರ ಸರ್ಕಲ್ ಅಧಿಕಾರಿ ವಿಕಾಸ್ ಪ್ರತಾಪ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹಲ್ಲೆ ನಡೆಸುವ ವೇಳೆ ಅವರ ಪತಿ ಓಂಕಾರ್ ಮಧ್ಯಪ್ರವೇಶಿಸಿ ತನ್ನ ಹೆಂಡತಿಯನ್ನು ಸ್ಥಳದಿಂದ ದೂರ ಕರೆದೊಯ್ದಿದ್ದರು. ಆದರೆ ಮರುದಿನ ಅವರು ಹಲ್ಲೆಯ ವೇಳೆ ಆಗಿದ್ದ ಗಾಯಗಳ ಕಾರಣಕ್ಕೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಉತ್ತರ ಪ್ರದೇಶ

ವಿಚಾರಣೆಗಾಗಿ ವಶಕ್ಕೆ ಪಡೆದಿರುವ ಇಬ್ಬರು ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಚೌಹಾಣ್ ತಿಳಿಸಿದ್ದಾರೆ. ಸಂತ್ರಸ್ತ ಮಹಿಳೆಯ ಕುಟುಂಬವು ನವೆಂಬರ್ 9 ರಂದು ಅಹಮದ್‌ಗಢ ಪೊಲೀಸ್ ಠಾಣೆಗೆ ಲಿಖಿತ ದೂರು ಸಲ್ಲಿಸಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲ್ಲ ಎಂದು ಆರೋಪಿಸಲಾಗಿದೆ.

“ಮಹಿಳೆಗೆ ಥಳಿಸಿದ ಮಂಜು ದೇವಿ (40) ಮತ್ತು ಆಕೆಯ ಸೊಸೆ ಕೀರ್ತಿ ಕುಮಾರ್ (21) ವಿರುದ್ಧ BNS ಸೆಕ್ಷನ್ 103 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಅವರನ್ನು ಬಂಧಿಸಲಾಗಿದೆ. ಮೂರನೇ ಆರೋಪಿ ಮಂಜು ಅವರ ಸೋದರಳಿಯ ಅಪ್ರಾಪ್ತ” ಎಂದು ಶಿಕಾರ್ಪುರ ಸರ್ಕಲ್ ಅಧಿಕಾರಿ ವಿಕಾಸ್ ಪ್ರತಾಪ್ ಸಿಂಗ್ ಚೌಹಾಣ್ ಹೇಳಿದ್ದಾರೆ.

“ಮಹಿಳೆಯರ ಗುಂಪು ಸುನಿತಾ ಅವರ ಮೇಲೆ ದೊಣ್ಣೆಯಿಂದ ಥಳಿಸಿದೆ. ಹಾಗಾಗಿ ಅವರು ತಲೆಗೆ ಗಂಭೀರ ಗಾಯಗಳಾಗಿತ್ತು. ಗಾಯಗೊಂಡಿದ್ದ ಪತ್ನಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ದಾಗ ಅಧಿಕಾರಿಗಳು ನಮ್ಮನ್ನು ನಿರ್ಲಕ್ಷಿಸಿದ್ದಾರೆ” ಎಂದು ಮಹಿಳೆಯ ಪತಿ ಓಂಕಾರ್ ಹೇಳಿದ್ದಾರೆ.

ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಪ್ರಾಥಮಿಕ ಹಂತದ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಸೌರವ್ ಕುಮಾರ್ ಮತ್ತು ಕಾನ್ ಸ್ಟೇಬಲ್ ಅಶು ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಚೌಹಾಣ್ ಹೇಳಿದ್ದಾರೆ. ಮುಂದಿನ ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜ್ಯೋತಿಬಾ ಫುಲೆ ಅವರ ‘ಗುಲಾಮಗಿರಿ’ ಕೃತಿಗೆ 150 ವರ್ಷ; ನ.14 ರಂದು ಬೆಂಗಳೂರಿನಲ್ಲಿ ವಿಶೇಷ ಉಪನ್ಯಾಸ

ಜ್ಯೋತಿಬಾ ಫುಲೆ ಅವರ ‘ಗುಲಾಮಗಿರಿ’ ಕೃತಿಗೆ 150 ವರ್ಷ; ನ.14 ರಂದು ಬೆಂಗಳೂರಿನಲ್ಲಿ ವಿಶೇಷ ಉಪನ್ಯಾಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...