Homeಮುಖಪುಟಮಹಾರಾಷ್ಟ್ರ | ಬಿಜೆಪಿ-ಎನ್‌ಸಿಪಿ ಮೈತ್ರಿ ಮಾತುಕತೆ ಸಭೆಯಲ್ಲಿ ಭಾಗವಹಿಸಿದ್ದ ಉದ್ಯಮಿ ಗೌತಮ್ ಅದಾನಿ!

ಮಹಾರಾಷ್ಟ್ರ | ಬಿಜೆಪಿ-ಎನ್‌ಸಿಪಿ ಮೈತ್ರಿ ಮಾತುಕತೆ ಸಭೆಯಲ್ಲಿ ಭಾಗವಹಿಸಿದ್ದ ಉದ್ಯಮಿ ಗೌತಮ್ ಅದಾನಿ!

- Advertisement -
- Advertisement -

ಮಹಾರಾಷ್ಟ್ರದ 2019ರ ವಿಧಾನಸಭೆಯ ಚುನಾವಣೆಯ ನಂತರ ಬಿಜೆಪಿ ಮತ್ತು ಅವಿಭಜಿತ ಎನ್‌ಸಿಪಿ ಜೊತೆಗೆ ನಡೆದಿದ್ದ ಸಭೆಯಲ್ಲಿ ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ಕೂಡಾ ಭಾಗವಹಿಸಿದ್ದರು ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ. ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ಮುಖ್ಯಮಂತ್ರಿಯಾಗಿ ಮತ್ತು ತಾನು (ಅವಿಭಜಿತ ಎನ್‌ಸಿಪಿಯ ಭಾಗವಾಗಿದ್ದ) ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮುಂಜಾನೆ ಸಮಾರಂಭಕ್ಕೂ ಮುನ್ನ ನಡೆದ ಬೆಳವಣಿಗೆಗಳ ಬಗ್ಗೆ ಅಜಿತ್ ಪವಾರ ಮಾತನಾಡಿದ್ದಾರೆ. ಮಹಾರಾಷ್ಟ್ರ

“ನಿಮಗೆ ಗೊತ್ತಿಲ್ಲವೇ? ಇದು ಐದು ವರ್ಷಗಳ ಹಿಂದೆ ನಡೆದ ಘಟನೆ. ಸಭೆ ಎಲ್ಲಿ ನಡೆಯಿತು ಎಂಬುದು ಎಲ್ಲರಿಗೂ ಗೊತ್ತು… ಎಲ್ಲರೂ ಅಲ್ಲಿದ್ದರು. ಮತ್ತೊಮ್ಮೆ ಹೇಳುತ್ತೇನೆ. ಅಮಿತ್ ಶಾ ಇದ್ದರು, ಗೌತಮ್ ಅದಾನಿ ಇದ್ದರು, ಪ್ರಫುಲ್ ಪಟೇಲ್ ಇದ್ದರು, ದೇವೇಂದ್ರ ಫಡ್ನವಿಸ್ ಇದ್ದರು, ಅಜಿತ್ ಪವಾರ್ ಇದ್ದರು, ಪವಾರ್ ಸಾಹೇಬ್(ಶರದ್ ಪವಾರ್) ಇದ್ದರು” ಎಂದು ಸ್ವತಂತ್ರ ಮಾಧ್ಯಮ ನ್ಯೂಸ್‌ ಮಿನಿಟ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅಜಿತ್ ಪವಾರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದರೆ, ಶರದ್ ಪವಾರ್ ಅವರನ್ನು ಬೆಂಬಲಿಸದಿರಲು ನಿರ್ಧರಿಸಿದ್ದರಿಂದ, ಅಜಿತ್ ಅವರ ವಿರುದ್ಧ ಬಂಡಾಯ ಎದ್ದಿದ್ದರು. ಆದರೆ ನಂತರ ಅಜಿತ್ ಪವಾರ್ ಅವರು ತಮ್ಮ ಬೆಂಬಲಿಗ ಶಾಸಕರೊಂದಿಗೆ ಮತ್ತೆ ಶರದ್ ಪವಾರ್ ಅವರ ಪಕ್ಷಕ್ಕೆ ಮರಳಿದ್ದರು. ಅದ ಅದಾಗ್ಯೂ, ಕೇವಲ 5 ದಿನಗಳಿಗೆ ಸರ್ಕಾರ ಪತನವಾಗಿತ್ತು. ಕೆಲವು ದಿನಗಳ ನಂತರ, ಅವಿಭಜಿತ ಎನ್‌ಸಿಪಿ ಮತ್ತು ಶಿವಸೇನೆಯು ಕಾಂಗ್ರೆಸ್‌ನೊಂದಿಗೆ ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ರಚಿಸಿತ್ತು. ಮಹಾರಾಷ್ಟ್ರ

ಈ ವೇಳೆ ಶರದ್ ಪವಾರ್ ಅವರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಜಿತ್ ಪವಾರ್ “ಶರದ್ ಪವಾರ್ ಅವರ ಮನಸ್ಸನ್ನು ಎಂದಿಗೂ ಊಹಿಸಲು ಸಾಧ್ಯವಿಲ್ಲ. ಜಗತ್ತಿನಲ್ಲಿ ಒಬ್ಬನೇ ವ್ಯಕ್ತಿಯೂ ಊಹಿಸಲು ಸಾಧ್ಯವಿಲ್ಲ. ನಮ್ಮ ಚಿಕ್ಕಮ್ಮ ಆಗಲಿ, ಅವರ ಮಗಳು ಸುಪ್ರಿಯಾ  ಅವರಿಗೆ ಕೂಡ ಸಾಧ್ಯವಿಲ್ಲ” ಎಂದು ಹೇಳಿದ್ದಾರೆ. ಅಜಿತ್ ಪವಾರ್ ಅವರ ಹೇಳಿಕೆ ಈಗ ರಾಜಕೀಯ ಚರ್ಚಕ್ಕೆ ದಾರಿ ಮಾಡಿಕೊಟ್ಟಿದೆ.

ಗೌತಮ್ ಅದಾನಿ ಭಾಗವಹಿಸಿದ್ದ ಸಭೆಯ ಬಗ್ಗೆ ಕೇಳಿದ ಪ್ರಶ್ನೆಗೆ ಎನ್‌ಸಿಪಿ-ಎಸ್‌ಪಿ ನಾಯಕಿ ಸುಪ್ರಿಯಾ ಸುಳೆ ಪ್ರತಿಕ್ರಿಯಿಸಿದ್ದು, ಅಂತಹ ಯಾವುದೇ ಸಭೆಯ ಬಗ್ಗೆ ನನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ. “ಅವರು ಸಂದರ್ಶನದಲ್ಲಿ ಪ್ರಸ್ತಾಪಿಸಿದ ಅಂತಹ ಯಾವುದೇ ಸಭೆಯ ಬಗ್ಗೆ ನನಗೆ ಸಂಪೂರ್ಣವಾಗಿ ತಿಳಿದಿಲ್ಲ ಎಂದು ನನಗೆ ಸ್ಪಷ್ಟವಾಗಿ ಹೇಳುತ್ತೇನೆ” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ರಾಜ್ಯಸಭಾ ಸಂಸದೆ ಮತ್ತು ಶಿವಸೇನೆ (ಯುಬಿಟಿ) ವಕ್ತಾರ ಪ್ರಿಯಾಂಕಾ ಚತುರ್ವೇದಿ ಅವರು ‘X’ನಲ್ಲಿ ಪ್ರತಿಕ್ರಿಯಿಸಿದ್ದು, “ಸಚಿವ ಸಂಪುಟದ ಹಿರಿಯ ಸಚಿವರೊಬ್ಬರು ಡಿಜಿಟಲ್ ವೇದಿಕೆಗೆ ನೀಡಿದ ಸಂದರ್ಶನದ ಪ್ರಕಾರ, ಮಹಾರಾಷ್ಟ್ರದಲ್ಲಿ ಬಿಜೆಪಿಯನ್ನು ಹೇಗೆ ಅಧಿಕಾರಕ್ಕೆ ತರಬೇಕು ಎಂದು ನಿರ್ಧರಿಸುವ ಸಭೆಗಳಲ್ಲಿ ಗೌತಮ್ ಅದಾನಿ ಭಾಗವಹಿಸಿದ್ದಾರೆ. ಇದು ಕೆಲವು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ” ಎಂದು ಹೇಳಿದ್ದಾರೆ.

“ಅವರು ಬಿಜೆಪಿಯ ಅಧಿಕೃತ ಸಂಧಾನಕಾರರೇ? ಮೈತ್ರಿಗಳನ್ನು ಸರಿಪಡಿಸುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆಯೇ? ಮಹಾರಾಷ್ಟ್ರದಲ್ಲಿ ಯಾವುದೇ ಬೆಲೆ ತೆತ್ತಾದರೂ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಉದ್ಯಮಿಯೊಬ್ಬರು ಏಕೆ ಇಷ್ಟು ಉತ್ಸಾಹದಿಂದ ಮತ್ತು ನಿಕಟವಾಗಿ ಕೆಲಸ ಮಾಡುತ್ತಿದ್ದಾರೆ?” ಎಂದು ಅವರು ಕೇಳಿದ್ದಾರೆ.

ಕಾಂಗ್ರೆಸ್ ಪಕ್ಷವು ಈ ಬಗ್ಗೆ ಯಾವುದೇ ಪ್ರತಿಕ್ರಿಯೆಗಳನ್ನು ನೀಡುವುದಿಲ್ಲ ಎಂದು ಹೇಳಿದ್ದಾಗಿ TNIE ವರದಿ ಮಾಡಿದೆ. ಅಷ್ಟೆ ಅಲ್ಲದೆ, ಅದಾನಿ ಗ್ರೂಪ್‌ನ ವಕ್ತಾರರೂ ಇದಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದೆ. ಈ ಸಭೆ ಐದು ವರ್ಷಗಳ ಹಿಂದೆ ನಡೆದಿದೆ ಎಂದು ಅಜಿತ್ ಪವಾರ್ ಸಂದರ್ಶನದಲ್ಲಿ ಹೇಳಿದ್ದರೂ, ಅವರು ಪ್ರಸ್ತಾಪಿಸಿದ ಸಭೆ 2017 ರಲ್ಲಿ ಸಂಭವಿಸಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ ಎಂದು ಪತ್ರಿಕೆ ಉಲ್ಲೇಖಿಸಿದೆ.

ಇದನ್ನೂ ಓದಿ: ಲೋಕಸಭೆಯಲ್ಲಿ ಅಂಗವಿಕಲರಿಗೆ ಮೀಸಲಾತಿ ಕೋರಿ ಸಲ್ಲಿಸಿದ್ದ PIL ವಜಾ

ಲೋಕಸಭೆಯಲ್ಲಿ ಅಂಗವಿಕಲರಿಗೆ ಮೀಸಲಾತಿ ಕೋರಿ ಸಲ್ಲಿಸಿದ್ದ PIL ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...