Homeಮುಖಪುಟನೆದರ್ಲ್ಯಾಂಡ್‌ನಲ್ಲಿ ಮುಂದುವರಿದ ಇಸ್ರೇಲ್ ವಿರೋಧಿ ಹಿಂಸಾಚಾರ : ವಾಹನಗಳಿಗೆ ಬೆಂಕಿ, ಪೊಲೀಸರೊಂದಿಗೆ ಸಂಘರ್ಷ

ನೆದರ್ಲ್ಯಾಂಡ್‌ನಲ್ಲಿ ಮುಂದುವರಿದ ಇಸ್ರೇಲ್ ವಿರೋಧಿ ಹಿಂಸಾಚಾರ : ವಾಹನಗಳಿಗೆ ಬೆಂಕಿ, ಪೊಲೀಸರೊಂದಿಗೆ ಸಂಘರ್ಷ

- Advertisement -
- Advertisement -

ನೆದರ್ಲ್ಯಾಂಡ್ ರಾಜಧಾನಿ ಆಮ್‌ಸ್ಟರ್‌ಡ್ಯಾಮ್​ನಲ್ಲಿ ಸೋಮವಾರ (ನ.11) ರಾತ್ರಿ ಮತ್ತೆ ಇಸ್ರೇಲ್ ವಿರೋಧಿ ಹಿಂಸಾಚಾರ ನಡೆದಿದೆ. ಕಳೆದ ವಾರದ ಹಿಂಸಾಚಾರ ಸಂಬಂಧ ಡಚ್ ಪೊಲೀಸರು ಮತ್ತೆ ಐವರನ್ನು ಬಂಧಿಸಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ.

ಕಳೆದ ವಾರ ಆಮ್‌ಸ್ಟರ್‌ಡ್ಯಾಮ್​ನಲ್ಲಿ ನಡೆದ ಯುರೋಪಾ ಲೀಗ್ ಫುಟ್‍ಬಾಲ್ ಟೂರ್ನಿಯಲ್ಲಿ ಸ್ಥಳೀಯ ಅಜಾಕ್ಸ್ ಕ್ಲಬ್ ಹಾಗೂ ಇಸ್ರೇಲ್‍ನ ಮಕಾಬಿ ಕ್ಲಬ್ ನಡುವಿನ ಪಂದ್ಯದ ಬಳಿಕ ಇಸ್ರೇಲ್ ತಂಡದ ಆಟಗಾರರು ಹಾಗೂ ಬೆಂಬಲಿಗರ ಮೇಲೆ ಹಲ್ಲೆ ನಡೆಸಲಾಗಿತ್ತು. ಸೋಮವಾರ ತಡರಾತ್ರಿ ನಡೆದ ಹಿಂಸಾಚಾರ ಈ ಘಟನೆಯ ಮುಂದುವರಿದ ಭಾಗವಾಗಿದೆ.

ವರದಿಗಳ ಪ್ರಕಾರ, ಕಪ್ಪು ಬಟ್ಟೆ ಧರಿಸಿದ್ದ ಜನರ ಗುಂಪೊಂದು ಸ್ಫೋಟಕಗಳನ್ನು ಸಿಡಿಸಿ ನಗರದಲ್ಲಿನ ಜನಪ್ರಿಯ ಟ್ರಾಮ್‍ಗೆ ಬೆಂಕಿ ಹಚ್ಚಿದ್ದಾರೆ. ಆದರೆ, ಟ್ರಾಮ್‍ನಲ್ಲಿ ಯಾರೂ ಇರದ ಕಾರಣ ಯಾವುದೇ ಸಾವು-ನೋವು ಸಂಭವಿಸಿಲ್ಲ. ಹಿಂಸಾಚಾರ ನಡೆಸಿದವರು ‘ಫ್ರೀ ಪ್ಯಾಲೆಸ್ತೀನ್’ ಘೋಷಣೆ ಕೂಗುತ್ತಿದ್ದರು ಎಂದು ವರದಿಯಾಗಿದೆ.

ಕಳೆದ ವಾರ ಇಸ್ರೇಲಿ ಆಟಗಾರರು ಹಾಗೂ ತಂಡದ ಬೆಂಬಲಿಗರ ಮೇಲೆ ನಡೆದ ದಾಳಿಯಲ್ಲಿ ಐದು ಮಂದಿ ಗಾಯಗೊಂಡಿದ್ದರು. ದಾಳಿಯ ಬಳಿಕ ವಿಶೇಷ ವಿಮಾನದಲ್ಲಿ ಆಟಗಾರರು ಹಾಗೂ ಬೆಂಬಲಿಗರನ್ನು ಇಸ್ರೇಲ್ ಸ್ವದೇಶಕ್ಕೆ ಕರೆಸಿಕೊಂಡಿತ್ತು.

ಈ ಮಧ್ಯೆ, ಇಸ್ರೇಲ್ ಫುಟ್‍ಬಾಲ್ ತಂಡದ ಅಭಿಮಾನಿಗಳು ಕಳೆದ ಬುಧವಾರ ಆಮ್‌ಸ್ಟರ್‌ಡ್ಯಾಮ್‌ನಲ್ಲಿ ಟ್ಯಾಕ್ಸಿಯೊಂದಕ್ಕೆ ದಾಳಿ ನಡೆಸಿದ್ದರಲ್ಲದೆ, ಪ್ಯಾಲೆಸ್ತೀನ್ ಧ್ವಜವನ್ನು ಸುಟ್ಟು ಹಾಕಿದ್ದರು. ಮರುದಿನ ಪಂದ್ಯ ನಡೆಯುತ್ತಿದ್ದಾಗಲೂ ಇಸ್ರೇಲ್ ತಂಡದ ಅಭಿಮಾನಿಗಳು ಅರಬ್ ವಿರೋಧಿ ಘೋಷಣೆ ಕೂಗುತ್ತಿದ್ದುದು ವಿಡಿಯೋದಲ್ಲಿ ಸೆರೆಯಾಗಿದೆ ಎಂದು ರಾಯ್ಟರ್ಸ್ ವರದಿ ಮಾಡಿತ್ತು.

“ಇಸ್ರೇಲಿಗರು, ವಿಶೇಷವಾಗಿ ಯಹೂದಿಗಳ ಮೇಲಿನ ದಾಳಿಗಳು ಆಘಾತಕಾರಿ ಮತ್ತು ಖಂಡನೀಯ’ ಎಂದು ನೆದರ್ಲ್ಯಾಂಡ್ ಪ್ರಧಾನಮಂತ್ರಿ ಡಿಕ್ ಸ್ಕೂಫ್ ಸೋಮವಾರ ಹೇಳಿದ್ದಾರೆ.

ಆಮ್‌ಸ್ಟರ್‌ಡ್ಯಾಮ್​ನಲ್ಲಿ ಗುರುವಾರ (ನ.14) ದವರೆಗೆ ಪ್ರತಿಭಟನೆ ನಡೆಸುವುದನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಆದರೂ, ಪ್ಯಾಲೆಸ್ತೀನ್ ಪರವಾದ ಪ್ರತಿಭಟನೆಗಳನ್ನು ನಗರ ಕೇಂದ್ರದಿಂದ ದೂರದಲ್ಲಿರುವ ಉದ್ಯಾನವನದಲ್ಲಿ ಮುಂದುವರಿಸಲು ಅನುಮತಿಸಲಾಗಿದೆ. ಪ್ರತಿಭಟನಾಕಾರರು ಆಮ್‌ಸ್ಟರ್‌ಡ್ಯಾಮ್ ಸಿಟಿ ಹಾಲ್ ಹೊರಗೆ ಪ್ರತಿಭಟಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ : ‘ಶಿಬಿರ ತೊರೆಯದಿರಿ’ | ಸಿಆರ್‌ಪಿಎಫ್ ಸಿಬ್ಬಂದಿಗೆ ತಾಕೀತು ಮಾಡಿದ ಕುಕಿ ಸಂಘಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...