Homeಮುಖಪುಟಬುಲ್ಡೋಝರ್ ಅ'ನ್ಯಾಯ'ಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್ : ಕಟ್ಟಡ ಕೆಡವಲು ಮಾರ್ಗಸೂಚಿ ಪ್ರಕಟ

ಬುಲ್ಡೋಝರ್ ಅ’ನ್ಯಾಯ’ಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್ : ಕಟ್ಟಡ ಕೆಡವಲು ಮಾರ್ಗಸೂಚಿ ಪ್ರಕಟ

- Advertisement -
- Advertisement -

‘ಬುಲ್ಡೋಝರ್ ಅ’ನ್ಯಾಯ’ಕ್ಕೆ ಲಗಾಮು ಹಾಕಿರುವ ಸುಪ್ರೀಂ ಕೋರ್ಟ್, “ಕಾರ್ಯಾಂಗ ನ್ಯಾಯಾಧೀಶರಾಗಲು ಸಾಧ್ಯವಿಲ್ಲ. ನ್ಯಾಯದ ಹೆಸರಿನಲ್ಲಿ ಆರೋಪಿಯನ್ನು ಅಪರಾಧಿ ಎಂದು ಘೋಷಿಸುವುದು ಮತ್ತು ಅವರ ಕಟ್ಟಡಗಳನ್ನು ಕೆಡುವುದು ಅಸಂವಿಧಾನಿಕ” ಎಂದು ಹೇಳಿದೆ.

ಬುಲ್ಡೋಝರ್ ಅನ್ಯಾಯ ಪ್ರಶ್ನಿಸಿ ಜಮಿಯತ್ ಉಲೇಮಾ-ಇ-ಹಿಂದ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಮತ್ತು ಕೆ.ವಿ. ವಿಶ್ವನಾಥನ್‌ ಅವರಿದ್ದ ಪೀಠ, ಕೇವಲ ಆರೋಪಿಗಳು ಅಥವಾ ಅಪರಾಧಿಗಳು ಎಂಬ ಕಾರಣಕ್ಕಾಗಿ ಜನರ ಮನೆಗಳನ್ನು ಕೆಡವುದು ಸಂಪೂರ್ಣ ಅಸಂವಿಧಾನಿಕ ಎಂದು ಇಂದು (ನ.13) ತೀರ್ಪು ನೀಡಿದೆ

“ಮನೆಗಳನ್ನು ಕೆಡವಿದ ಕಾರಣಕ್ಕೆ ಮಹಿಳೆಯರು ಮತ್ತು ಮಕ್ಕಳು ರಾತ್ರೋರಾತ್ರಿ ಬೀದಿಗೆ ಬೀಳುವುದು ಸಂತಸಪಡುವ ವಿಷಯವಲ್ಲ” ಎಂದು ತೀರ್ಪು ಪ್ರಕಟಿಸುವ ವೇಳೆ ನ್ಯಾ. ಗವಾಯಿ ಪ್ರತ್ಯೇಕವಾಗಿ ಹೇಳಿದ್ದಾರೆ.

ಪೂರ್ವಭಾವಿ ಶೋಕಾಸ್ ನೋಟಿಸ್ ನೀಡದೆ ಮತ್ತು ನೋಟಿಸ್ ಜಾರಿ ಮಾಡಿದ 15 ದಿನಗಳ ಒಳಗಾಗಿ ಯಾವುದೇ ಕಟ್ಟಡವನ್ನು ಕೆಡವಬಾರದು ಎಂದು ಪೀಠ ಸೂಚಿಸಿದೆ. ನಿಯಮ ಪ್ರಕಾರ ಕಟ್ಟಡಗಳನ್ನು ಕೆಡವುದಾದರೆ, ಕೆಡವುವ ಪ್ರಕ್ರಿಯೆಯ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಬೇಕು ಎಂದು ನಿರ್ದೇಶನ ನೀಡಿದೆ.

ಸಾರ್ವಜನಿಕ ಭೂಮಿಯಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣವಾದರೆ ಅಂತಹ ಸಮಯದಲ್ಲಿ ಈ ನಿರ್ದೇಶನ ಅನ್ವಯವಾಗುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ಸಂವಿಧಾನ ಮತ್ತು ಕ್ರಿಮಿನಲ್ ಕಾನೂನಿನ ಬೆಳಕಿನಲ್ಲಿ ಆರೋಪಿಗಳು ಮತ್ತು ಅಪರಾಧಿಗಳೂ ಕೆಲವು ಹಕ್ಕುಗಳು ಮತ್ತು ಸುರಕ್ಷತೆಗಳನ್ನು ಹೊಂದಿದ್ದಾರೆ ಎಂದು ಇದೇ ವೇಳೆ ಹೇಳಿದೆ.

ನಿಯಮಬಾಹಿರವಾಗಿ ಕಟ್ಟಡ ಕೆಡವಿದರೆ ಅಧಿಕಾರಿಗಳು ಹೊಣೆ

ನಿಯಮ ಬಾಹಿರವಾಗಿ ಜನರ ಮನೆಗಳು ಸೇರಿದಂತೆ ಕಟ್ಟಡಗಳನ್ನು ಕೆಡವಿದರೆ, ಅದಕ್ಕೆ ಸಂಬಂಧಿತ ಅಧಿಕಾರಿಗಳು ಹೊಣೆ ಎಂದು ನ್ಯಾಯಾಲಯ ಹೇಳಿದೆ.

ಆರೋಪಿ ಅಥವಾ ಅಪರಾಧಿಯ ಮನೆಗಳನ್ನು ಕೆಡವುದು, ಅವರ ಇಡೀ ಕುಟುಂಬಕ್ಕೆ ಶಿಕ್ಷೆ ವಿಧಿಸಿದಂತೆ. ಒಂದು ವೇಳೆ ಆಯ್ದ ವ್ಯಕ್ತಿಗಳ ಕಟ್ಟಡಗಳನ್ನು ಏನಾದರು ಅಧಿಕಾರಿಗಳು ಕೆಡವಿದರೆ, ಅದು ದುರುದ್ದೇಶಪೂರಿತ ನಡೆ ಎಂದು ಪರಿಗಣಿಸಲಾಗುತ್ತದೆ ಎಂದಿದೆ.

ತೆರವು ಕಾರ್ಯಾಚರಣೆಯಲ್ಲಿ ನಿಯಮಾವಳಿ ಉಲ್ಲಂಘನೆ ಕಂಡುಬಂದರೆ, ಕೆಡವಲಾದ ಆಸ್ತಿಯ ಮರುಪಾವತಿಗೆ ಅಧಿಕಾರಿಗಳೇ ಹೊಣೆಯಾಗುತ್ತಾರೆ. ಇದಕ್ಕೆ ತಗಲುವ ವೆಚ್ಚವನ್ನು ಅಧಿಕಾರಿಗಳ ವೇತನದಿಂದ ವಸೂಲಿ ಮಾಡಲಾಗುವುದು ಎಂದು ನ್ಯಾಯಾಲಯ ಎಚ್ಚರಿಸಿದೆ.

ಕಟ್ಟಡ ಕೆಡವಲು ನ್ಯಾಯಾಲಯ ಸೂಚಿಸಿದ ಮಾರ್ಗಸೂಚಿಗಳು 

  • ಯಾವುದೇ ಕಟ್ಟಡ ಕೆಡವಲು ನಿರ್ಧರಿಸಿದರೆ, ಆ ಕಟ್ಟಡಕ್ಕೆ ಸಂಬಂಧಿಸಿದವರಿಗೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಸಮಯವಕಾಶ ನೀಡಬೇಕು. ಒಂದು ವೇಳೆ ಅವರು ನ್ಯಾಯಾಲಯದಲ್ಲಿ ಪ್ರಶ್ನಿಸದಿದ್ದರೂ, ಮನೆ ಅಥವಾ ಕಟ್ಟಡ ಖಾಲಿ ಮಾಡಲು ಸಮಯ ನೀಡಬೇಕು.
  • ಈ ನಿಯಮ ರಸ್ತೆ, ಬೀದಿ, ಫುಟ್‌ಪಾತ್‌, ರೈಲ್ವೆ ಮಾರ್ಗಗಳಿಗೆ ಹೊಂದಿಕೊಂಡಿರುವ ಅಥವಾ ಯಾವುದೇ ನದಿ ಅಥವಾ ಜಲಾನಯನದಂತಹ ಸಾರ್ವಜನಿಕ ಸ್ಥಳಗಳಲ್ಲಿ ಇರುವ ಅನಧಿಕೃತ ಕಟ್ಟಡಗಳಿಗೆ ಅನ್ವಯಿಸುವುದಿಲ್ಲ.
  • ಪೂರ್ವಭಾವಿ ಶೋಕಾಸ್ ನೋಟಿಸ್ ನೀಡದೆ ಮತ್ತು ನೋಟಿಸ್ ಜಾರಿ ಮಾಡಿದ 15 ದಿನಗಳ ಒಳಗಾಗಿ ಯಾವುದೇ ಕಟ್ಟಡವನ್ನು ಕೆಡವಬಾರದು. ನೋಟಿಸ್ ನೀಡಿದ ದಿನದಿಂದ 15 ದಿನದ ಅವಧಿ ಪ್ರಾರಂಭವಾಗುತ್ತದೆ.
  • ನೋಟಿಸ್ ಅನ್ನು ನೋಂದಾಯಿತ ಅಂಚೆ (Registered post) ಮೂಲಕ ಕಟ್ಟಡ ಮಾಲೀಕರಿಗೆ ನೀಡಬೇಕು. ಅದೇ ನೋಟಿಸ್ ಅನ್ನು ಕೆಡವಲು ಉದ್ದೇಶಿಸಿದ ಕಟ್ಟಡದ ಗೋಡೆ ಮೇಲೆ ಅಂಟಿಸಬೇಕು.
  •  ನೋಟಿಸ್ ಅನಧಿಕೃತ ನಿರ್ಮಾಣದ ಸ್ವರೂಪ, ನಿಯಮಗಳ ಉಲ್ಲಂಘನೆ ಬಗ್ಗೆ ವಿವರಗಳು ಮತ್ತು ಕೆಡವುವಿಕೆಗೆ ಕಾರಣಗಳನ್ನು ಒಳಗೊಂಡಿರಬೇಕು.
  • ನೋಟಿಸ್ ನೀಡಿರುವುದು ತಡವಾಗಿದೆ ಎಂಬ ಆರೋಪಗಳು ಕೇಳಿ ಬರದಿರಲು. ಕಟ್ಟಡ ಮಾಲೀಕರಿಗೆ ನೀಡಿದ ನೋಟಿಸ್ ಅನ್ನೇ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಗೆ ಇ-ಮೇಲ್ ಮೂಲಕ ಕಳುಹಿಸಬೇಕು. ಅದನ್ನು ಸ್ವೀಕರಿಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿಯಿಂದ ಡಿಜಿಟಲ್ ರಶೀದಿ ಒದಗಿಸಬೇಕು.
  • ಕಟ್ಟಡ ಕೆಡವುವ ಪ್ರಕರಣಗಳ ನಿರ್ವಹಣೆ ಸಂಬಂಧ ಜಿಲ್ಲಾಧಿಕಾರಿ ನೋಡಲ್ ಅಧಿಕಾರಿಯನ್ನು ನೇಮಿಸಬೇಕು. ಅವರಿಗೆ ಪ್ರತ್ಯೇಕ ಇ-ಮೇಲ್ ಐಡಿ ಸೃಷ್ಟಿಸಬೇಕು. ಕಟ್ಟಡ ಕೆಡವುದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸಂಬಂಧಿತ ಎಲ್ಲಾ ಅಧಿಕಾರಿಗಳಿಗೆ ನೀಡಬೇಕು. ಇಂದಿನಿಂದ ಒಂದು ತಿಂಗಳ ಒಳಗಾಗಿ ಈ ಪ್ರಕ್ರಿಯೆ ಆಗಬೇಕು.
  • ಮುನ್ಸಿಪಲ್ ಪ್ರಾಧಿಕಾರಗಳು ಕಟ್ಟಡ ಕೆಡವುವ ಸಂಬಂಧ ಪ್ರತ್ಯೇಕ ಡಿಜಿಟಲ್ ಪೋರ್ಟಲ್ ಸ್ಥಾಪಿಸಬೇಕು. ಅದರಲ್ಲಿ ಕಟ್ಟಡ ತೆರವಿಗೆ ನೀಡಿದ ನೋಟಿಸ್ ಸೇರಿದಂತೆ ಎಲ್ಲಾ ಮಾಹಿತಿಗಳು ಹಂತ ಹಂತವಾಗಿ ದಾಖಲಿಸಬೇಕು.

    ಈ ಪ್ರಕರಣದಲ್ಲಿ ಹಿರಿಯ ವಕೀಲರಾದ ಡಾ. ಅಭಿಷೇಕ್ ಮನು ಸಿಂಘ್ವಿ, ಸಿಯು ಸಿಂಗ್, ಎಂ.ಆರ್ ಶಂಶಾದ್, ನಿತ್ಯಾ ರಾಮಕೃಷ್ಣನ್, ವಕೀಲರಾದ ಪ್ರಶಾಂತ್ ಭೂಷಣ್, ಮೊಹಮ್ಮದ್ ನಿಝಾಮ್ ಪಾಷಾ, ಫೌಝಿಯಾ ಶೇಖ್, ರಶ್ಮಿ ಸಿಂಗ್ ಮುಂತಾದವರ ಸಲಹೆಗಳಿಗೆ ನ್ಯಾಯಾಲಯ ತನ್ನ ಮೆಚ್ಚುಗೆಯನ್ನು ವ್ಯಕ್ತಪಡಿಸಿದೆ.
    ಹಿರಿಯ ವಕೀಲ ನಚಿಕೇತ ಜೋಶಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಸಹಕಾರವನ್ನು ನ್ಯಾಯಾಲಯ ಶ್ಲಾಘಿಸಿದೆ.

    ತೀರ್ಪು ಸ್ವಾಗತಿಸಿದ ಹಿರಿಯ ವಕೀಲ ಪ್ರಶಾಂತ್ ಭೂಷಣ್

    ಬುಲ್ಡೋಝರ್ ಅನ್ಯಾಯಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪನ್ನು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸ್ವಾಗತಿಸಿದ್ದಾರೆ. ಈ ತೀರ್ಪು ಆಶಾದಾಯಕವಾಗಿದೆ. ಇದು ‘ಬುಲ್ಢೋಝರ್ ನ್ಯಾಯ’ಕ್ಕೆ ಬ್ರೇಕ್ ಹಾಕುವ ಭರವಸೆ ಇದೆ ಎಂದಿದ್ದಾರೆ.



    ಇದನ್ನೂ ಓದಿ : ಶ್ರೀಲಂಕಾ ಬಂಧಿಸಿರುವ ತಮಿಳು ಮೀನುಗಾರರ ಬಿಡುಗಡೆಗೆ ಸಹಕರಿಸಿ: ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ ಎಂಕೆ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...