Homeಕರ್ನಾಟಕಆದಿವಾಸಿಗಳಿಗೆ ಅರಣ್ಯ ಇಲಾಖೆ ಅನಗತ್ಯ ಕಿರುಕುಳ ಕೊಡಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಆದಿವಾಸಿಗಳಿಗೆ ಅರಣ್ಯ ಇಲಾಖೆ ಅನಗತ್ಯ ಕಿರುಕುಳ ಕೊಡಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

ಇಷ್ಟು ದಿನ ಉಪ ಚುನಾವಣೆ ಪ್ರಚಾರದಲ್ಲಿ ನಿರತರಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಹಿರಂಗ ಪ್ರಚಾರ ಅಂತ್ಯವಾಗುತ್ತಿದ್ದಂತೆಯೇ ಮಂಗಳವಾರ ಎಚ್‌.ಡಿ. ಕೋಟೆ ತಾಲೂಕಿನ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕೆರೆ ಹಾಡಿಗೆ ಭೇಟಿ ನೀಡಿ, “ಅರಣ್ಯಾಧಿಕಾರಗಳು ಅನಗತ್ಯ ಕಿರುಕುಳ, ತೊಂದರೆ ಕೊಡಬಾರದು” ಎಂದು ಸೂಚಿಸಿದರು.

“ಆದಿವಾಸಿ-ಅರಣ್ಯವಾಸಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತಾಗಿ ಸದ್ಯದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ವನ್ಯಜೀವಿ ಮಂಡಳಿ ಸಭೆ ಕರೆದು ಅರಣ್ಯಾಧಿಕಾರಿಗಳಿಂದ ಅರಣ್ಯವಾಸಿಗಳಿಗೆ ಆಗುತ್ತಿರುವ ಸಮಸ್ಯೆಗಳ ಕುರಿತಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು” ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

“ಹಲವು ದಶಕಗಳಿಂದ ಕೆರೆಹಾಡಿ ಸೇರಿದಂತೆ ಒಂಬತ್ತು ಹಾಡಿಗಳಿಗೆ ವಿದ್ಯುತ್ ಸಂಪರ್ಕ ಇಲ್ಲ, ಕುಡಿಯುವ ನೀರಿಗೆ ಸಮಸ್ಯೆ ಇದೆ. ಇದು ಗಂಭಿರವಾದುದ್ದು. ಯಾವ ಅರಣ್ಯ ಕಾಯ್ದೆ ಕೂಡ ಅರಣ್ಯವಾಸಿಗಳಿಗೆ ಕರೆಂಟು, ನೀರು ಕೊಡಬೇಡಿ ಎಂದು ಹೇಳುವುದಿಲ್ಲ. ಅರಣ್ಯಾಧಿಕಾರಗಳು ಅನಗತ್ಯ ಕಿರುಕುಳ, ತೊಂದರೆ ಕೊಡಬಾರದು.
ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿಯವರು ಎಲ್ಲ ಅಡೆತಡೆಗಳನ್ನು ನಿವಾರಿಸಿ ಒಂದು ತಿಂಗಳಲ್ಲಿ ಕೆರೆಹಾಡಿ ಮತ್ತು ಇತರೆ ಎಂಟು ಹಾಡಿಗಳ ಕುಡಿಯುವ ನೀರು ಮತ್ತು ವಿದ್ಯುತ್ ಸಂಪರ್ಕದ ಸಮಸ್ಯೆ ಬಗೆಹರಿಸಲಿದ್ದಾರೆ” ಎಂದು ಸಿಎಂ ಭರವಸೆ ನೀಡಿದ್ದಾರೆ.

“ಹಕ್ಕುಪತ್ರ ಇದ್ದರೂ ಅರಣ್ಯಾಧಿಕಾರಿಗಳು ಮನೆ ಕಟ್ಟಲು ಬಿಡುತ್ತಿಲ್ಲ, ಎರಡು-ಮೂರು ಎಕರೆ ಜಾಗದಲ್ಲಿ ಹಲವಾರು ದಶಕಗಳಿಂದ ಉಳುಮೆ ಮಾಡುತ್ತಿದ್ದರೂ ಕೇವಲ 2, 3 ಗುಂಟೆಗೆ ಹಕ್ಕು ಪತ್ರ ನೀಡಿದ್ದಾರೆ. ಜಮೀನಿನಲ್ಲಿ ಟ್ರಾಕ್ಟರ್ ಬಳಸಲು ಅವಕಾಶ ನೀಡುತ್ತಿಲ್ಲ ಎನ್ನುವ ದೂರು ಬಂದಿದೆ. ಆದಿವಾಸಿಗಳು ಅಂದರೆ ಅವರು ಅರಣ್ಯದ ಭಾಗವೇ ಆಗಿದ್ದಾರೆ. ಇವರಿಂದ ಅರಣ್ಯಕ್ಕೆ ಯಾವುದೇ ತೊಂದರೆ ಆಗುವುದಿಲ್ಲ. ಆದ್ದರಿಂದ ಇವರಿಗೆ ಅನಗತ್ಯ ತೊಂದರೆ ಕೊಡಬಾರದು ಎಂಬ ಸ್ಪಷ್ಟ ಸೂಚನೆ ನೀಡಿದ್ದೇನೆ. ವನ್ಯ ಜೀವಿ ಮಂಡಳಿಗೆ ನಾನೇ ಅಧ್ಯಕ್ಷ ಆಗಿದ್ದೀನಿ. ಸದ್ಯದಲ್ಲೇ ಮಂಡಳಿ ಸಭೆ ಕರೆದು ಇಲ್ಲಿನ ಬುಡಕಟ್ಟು ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತೇನೆ” ಎಂದು ಹೇಳಿದ್ದಾರೆ.

ಪ್ರತ್ಯೇಕ ಆದಿವಾಸಿ ನಿಗಮ ಸ್ಥಾಪನೆಗೆ ಕ್ರಮ

“ತಾವು ಅಲೆಮಾರಿಗಳಲ್ಲ. ಊರ ನಾಯಕರೂ ಅಲ್ಲ. ತಾವೆಲ್ಲರೂ ಕಾಡಲ್ಲೇ ಒಂದೇ ಕಡೆ ನೆಲೆಸಿರುವ ಆದಿವಾಸಿಗಳು. ಆದ್ದರಿಂದ ಅಲೆಮಾರಿ ಅಭಿವೃದ್ಧಿ ನಿಗಮದಲ್ಲಿ ತಮ್ಮನ್ನು ಸೇರಿಸಬೇಡಿ. ನಮಗೆ ಪ್ರತ್ಯೇಕವಾದ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪಿಸಿ ಎನ್ನುವ ಬೇಡಿಕೆ ಇಟ್ಟಿದ್ದಾರೆ. ಪ್ರತ್ಯೇಕ ಆದಿವಾಸಿ ನಿಗಮ ಸ್ಥಾಪನೆ ಸಂಬಂಧ ಆದಷ್ಟು ಶೀಘ್ರ ಕ್ರಮ ವಹಿಸುತ್ತೇನೆ” ಎಂದಿದ್ದಾರೆ.

“ನಮ್ಮಪ್ಪ ಕೂಡ ಜನಪದ ನೃತ್ಯ ಕಲಿಯೋಕೆ ನನ್ನನ್ನು ಹಾಕ್ಬಿಟ್ಟಿದ್ರು. ನಾನು ಹಠತೊಟ್ಟು ಕಾನೂನು ಪದವಿ ಮಾಡಿದ್ದಕ್ಕೆ ಇಂದು ಮುಖ್ಯಮಂತ್ರಿ ಆಗುವ ಮಟ್ಟಕ್ಕೆ ಬೆಳೆದೆ. ಈ ಆದಿವಾಸಿ ಸಮುದಾಯದ ಮಕ್ಕಳು ಕೂಡ ಅರ್ಧಕ್ಕೇ ಶಾಲೆ ನಿಲ್ಲಿಸದೆ ಶಿಕ್ಷಣ ಪಡೆಯಬೇಕು. ಆಗ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ.
ಮೊದಲು ನಾಲ್ಕನೇ ತರಗತಿವರೆಗೂ ಮಾತ್ರ ಆಶ್ರಮ ಶಾಲೆಗಳನ್ನು ನಾನು ಎಂಟನೇ ತರಗತಿವರೆಗೂ ವಿಸ್ತರಿಸಿದ್ದೆ. ಇದನ್ನು ಪಿಯುಸಿ ವರೆಗೂ ವಿಸ್ತರಿಸಿ ಎನ್ನುವುದು ಆದಿವಾಸಿಗಳು ಬೇಡಿಕೆಯಾಗಿದೆ, ಈ ಬಗ್ಗೆ ಸಭೆ ಕರೆದು ಪರಿಶೀಲನೆ ನಡೆಸುತ್ತೇನೆ” ಎಂದರು.

ಒಳ ಮೀಸಲಾತಿ ಕುರಿತು ಕಾನೂನು ತಜ್ಞರ ಜೊತೆ ಚರ್ಚೆ

“ಪರಿಶಿಷ್ಟ ಜಾತಿಯವರ ಒಳ ಮೀಸಲಾತಿಗೆ ಮುಂದಾಗಿರುವ ರೀತಿಯಲ್ಲೇ , ಪರಿಶಿಷ್ಠ ವರ್ಗದವರ ಒಳ ಮೀಸಲಾತಿಗೆ ಕ್ರಮ ವಹಿಸಬೇಕು ಎನ್ನುವ ಬೇಡಿಕೆ ಇದೆ. ಆದರೆ ಸುಪ್ರೀಂ ಕೋರ್ಟ್‌ ಒಳಮೀಸಲಾತಿ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಅದರ ಆಧಾರದಲ್ಲಿ ಮುಂದುವರೆದಿದ್ದೇವೆ. ಎಸ್ ಟಿ ಒಳ ಮೀಸಲಾತಿ ಬಗ್ಗೆ ಏನೂ ತೀರ್ಪು ಬಂದಿಲ್ಲ. ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಲಾಗುವುದು” ಎಂದು ಹೇಳಿದರು.

ಇದನ್ನೂ ಓದಿ; ಹಾಸನ: ಅರಕಲಗೂಡಿನಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತ ಕುಟುಂಬದ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...