ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ದರ್ಭಾಂಗಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕಾಲನ್ನು ಮುಟ್ಟಿ ನಮಿಸಲು ಪ್ರಯತ್ನಿಸಿರುವ ಘಟನೆ ಬುಧವಾರ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ವೈರಲ್ ಆಗಿದ್ದು, ನಿತೀಶ್ ಕುಮಾರ್ ಅವರು ಮೋದಿಯವರಿಗೆ ಕೈಮುಗಿಯುತ್ತಾ ಅವರ ಕಾಲನ್ನು ಮುಟ್ಟಿ ನಮಿಸುತ್ತಿರುವುದು ಈ ವರ್ಷದಲ್ಲಿ ಇದು ಮೂರನೇ ಬಾರಿಯಾಗಿದೆ. ಮತ್ತೆ ಮೋದಿಯ ಕಾಲು
ನಿತೀಶ್ ಕುಮಾರ್ ಅವರು ತನ್ನ ಕಾಲನ್ನು ಮುಟ್ಟಲು ಪ್ರಯತ್ನಿಸುತ್ತಿರುವಾಗ ಪ್ರಧಾನಿ ಮೋದಿ ಅದನ್ನು ತಡೆದಿದ್ದು, ಅವರ ಕೈ ಕುಲುಕಿದ್ದಾರೆ. ಇದೇ ಕಾರ್ಯಕ್ರಮದ ಮತ್ತೊಂದು ವಿಡಿಯೊ ಕೂಡಾ ವೈರಲ್ ಆಗಿದ್ದು, ಅದರಲ್ಲಿ ಪಕ್ಷದ ಕಾರ್ಯಕರ್ತರು ಪ್ರಧಾನಿ ಮೋದಿಗೆ ಹಾರ ಹಾಕುತ್ತಿರುವ ವೇಳೆ, ಮೋದಿ ಅವರು ನಿತೀಶ್ ಕುಮಾರ್ ಅವರನ್ನು ತಮ್ಮ ಕಡೆಗೆ ಎಳೆದುಕೊಳ್ಳುತ್ತಾರೆ. ಮತ್ತೆ ಮೋದಿಯ ಕಾಲು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಈ ವರ್ಷದ ಜೂನ್‌ನಲ್ಲಿ ನಿತೀಶ್ ಕುಮಾರ್ ಅವರು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಮೋದಿಯವರ ಕಾಲನ್ನು ಮುಟ್ಟಿ ನಮಸ್ಕರಿಸಲು ಪ್ರಯತ್ನಿಸಿದ್ದರು. ಅಷ್ಟೆ ಅಲ್ಲದೆ, ಏಪ್ರಿಲ್ ವೇಳೆ ನವಾಡದಲ್ಲಿ ನಡೆದ ಲೋಕಸಭಾ ಚುನಾವಣಾ ರ್ಯಾಲಿಯಲ್ಲಿ ಕೂಡಾ ಪ್ರಧಾನಿ ಮೋದಿಯವರ ಕಾಲನ್ನು ಮುಟ್ಟಿ ನಮಸ್ಕರಿಸಿದ್ದರು.
#Watch– Bihar CM Nitish Kumar tries to touch PM Modi's feet during a rally in Darbhanga.#NitishKumar #PMModi #Darbhanga #Viral #ViralVideo pic.twitter.com/jVBRCvmSQK
— TIMES NOW (@TimesNow) November 13, 2024
ಲೋಕಸಭೆ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷವು ಬಿಜೆಪಿಯ ಎರಡನೇ ಅತಿದೊಡ್ಡ ಮಿತ್ರ ಪಕ್ಷವಾಗಿ ಹೊರಹೊಮ್ಮಿದೆ. ಅಲ್ಲದೆ, ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಲು ಅವರ ಪಕ್ಷವು ಬೆಂಬಲ ನೀಡಿದೆ. ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಬಹುಮತ ಪಡೆಯುವಲ್ಲಿ ವಿಫಲವಾಗಿದ್ದ ಬಿಜೆಪಿ, ಬಹುಮತದ ಗಡಿ ದಾಟಲು ಜೆಡಿಯು ಮತ್ತು ಚಂದ್ರಬಾಬು ನಾಯ್ಡು ಅವರ ಟಿಡಿಪಿಯನ್ನು ಅವಲಂಬಿಸಿದೆ.
ಬಿಹಾರವನ್ನು ‘ಜಂಗಲ್ ರಾಜ್’ನಿಂದ ಹೊರತಂದ ನಿತೀಶ್ ಕುಮಾರ್: ಮೋದಿ
ದರ್ಭಾಂಗಾದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ಏಮ್ಸ್‌ಗೆ ಅಡಿಪಾಯ ಹಾಕಿದ್ದು, ಸುಮಾರು 12,100 ಕೋಟಿ ರೂಪಾಯಿ ಮೌಲ್ಯದ ಹಲವಾರು ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಿತೀಶ್ ಕುಮಾರ್ ಅವರು ರಾಜ್ಯವನ್ನು ಪರಿವರ್ತನೆ ಮಾಡಿದ್ದು, ರಾಜ್ಯವನ್ನು ‘ಜಂಗಲ್ ರಾಜ್’ನಿಂದ ಹೊರತಂದಿದ್ದಾರೆ” ಎಂದು ಶ್ಲಾಘಿಸಿ, ಆರ್‌ಜೆಡಿ ಮತ್ತು ಲಾಲು ಪ್ರಸಾದ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಎನ್‌ಡಿಎ ಆಡಳಿತದಲ್ಲಿ ಬಿಹಾರದ ಆರೋಗ್ಯ ಮೂಲಸೌಕರ್ಯದಲ್ಲಿನ ಸುಧಾರಣೆಗಳನ್ನೂ ಪ್ರಧಾನಮಂತ್ರಿ ಎತ್ತಿ ತೋರಿಸಿದ್ದಾರೆ. “ಬಿಹಾರದಲ್ಲಿ ಸಾಕಷ್ಟು ಅಭಿವೃದ್ಧಿಯಾಗುತ್ತಿದೆ. ಬಿಹಾರದ ಹಿಂದಿನ ಸರ್ಕಾರ ಆರೋಗ್ಯ ಮೂಲಸೌಕರ್ಯಗಳ ಬಗ್ಗೆ ಎಂದಿಗೂ ತಲೆಕೆಡಿಸಿಕೊಳ್ಳಲಿಲ್ಲ. ಅವರು ಸುಳ್ಳು ಭರವಸೆಗಳನ್ನು ನೀಡುತ್ತಿದ್ದರು. ಆದರೆ ನಿತೀಶ್ ಕುಮಾರ್ ಅಧಿಕಾರಕ್ಕೆ ಬಂದ ನಂತರ ಪರಿಸ್ಥಿತಿ ಸುಧಾರಿಸಿದೆ” ಎಂದು ಮೋದಿ ಹೇಳಿದ್ದಾರೆ.
ಇದನ್ನೂ ಓದಿ: ‘ಬುಲ್ಡೋಜರ್ ಈಗ ಗ್ಯಾರೇಜ್‌ನಲ್ಲಿ ಉಳಿಯಲಿದೆ..’; ಯೋಗಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ
‘ಬುಲ್ಡೋಜರ್ ಈಗ ಗ್ಯಾರೇಜ್‌ನಲ್ಲಿ ಉಳಿಯಲಿದೆ..’; ಯೋಗಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ


