2021ರ ಅಕ್ಟೋಬರ್ 3ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದ 12 ಮಂದಿ ಆರೋಪಿಗಳಿಗೆ ಅಲಹಾಬಾದ್ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕರಾಳ ಕೃಷಿ ಕಾಯ್ದೆಯನ್ನು ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಈ ಹಿಂಸಾಚಾರ ನಡೆದಿತ್ತು. ಲಖಿಂಪುರ ಖೇರಿ
ಆರೋಪಿಗಳ ವಿರುದ್ಧ ದಾಖಲಾಗಿರುವ ಪ್ರಕರಣವು ಪ್ರಮುಖ ಆರೋಪಿ, ಮಾಜಿ ಕೇಂದ್ರ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಆಶಿಶ್ ಮಿಶ್ರಾ ಅವರ ಪ್ರಕರಣಕ್ಕಿಂತ ಉತ್ತಮ ನೆಲೆಯಲ್ಲಿದೆ ಎಂದು ನ್ಯಾಯಾಲಯ ಹೇಳಿದೆ. ಪ್ರಮುಖ ಆರೋಪಿ ಆಶಿಶ್ ಮಿಶ್ರಾಗೆ ಸುಪ್ರೀಂ ಕೋರ್ಟ್ 2023ರ ಜನವರಿ 25ರಂದು ಮಧ್ಯಂತರ ಜಾಮೀನು ನೀಡಿತ್ತು ಮತ್ತು ಜುಲೈ 22 ರಂದು ಜಾಮೀನು ನೀಡಿತ್ತು. ಲಖಿಂಪುರ ಖೇರಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಈಗ ರದ್ದಾಗಿರುವ ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯ ಸಮಯದಲ್ಲಿ ಲಖಿಂಪುರ ಖೇರಿಯಲ್ಲಿ ಹಿಂಸಾಚಾರವು ನಡೆದಿತ್ತು. ಪ್ರತಿಭಟನಾಕಾರರ ಗುಂಪಿನ ಮೇಲೆ ಅಜಯ್ ಮಿಶ್ರಾ ಅವರಿಗೆ ಸೇರಿದ ವಾಹನವೊಂದು ಹರಿದಿದ್ದು, ಅವರಲ್ಲಿ ನಾಲ್ವರು ಸಾವನ್ನಪ್ಪಿದ್ದರು ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಹಿಂಸಾಚಾರದ ಸಂದರ್ಭದಲ್ಲಿ ಬಿಜೆಪಿಯ ಕಾರ್ಯಕರ್ತರಾದ ಶುಭಂ ಮಿಶ್ರಾ ಮತ್ತು ಶ್ಯಾಮ್ ಸುಂದರ್ ನಿಶಾದ್ ಮತ್ತು ಕಾರು ಚಾಲಕ ಹರಿ ಓಂ ಮಿಶ್ರಾ ಅವರ ಹತ್ಯೆಗಳನ್ನು ಉಲ್ಲೇಖಿಸಿ ಪ್ರಕರಣಕ್ಕೆ “ಮತ್ತೊಂದು ಆವೃತ್ತಿ” ಕೂಡಾ ಇದೆ ಎಂದು ನ್ಯಾಯಮೂರ್ತಿ ಕ್ರಿಶನ್ ಪಹಲ್ ಹೇಳಿದ್ದಾರೆ. ವಿಚಾರಣೆಯು “ನಿಧಾನ ಗತಿಯಲ್ಲಿ” ಸಾಗುತ್ತಿದ್ದು, ಇದುವರೆಗೆ 114 ಸಾಕ್ಷಿಗಳಲ್ಲಿ ಏಳು ಮಂದಿಯನ್ನು ಮಾತ್ರ ಪರೀಕ್ಷಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.
ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ : ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ವಾಲ್ಮೀಕಿ ನಿಗಮ ಹಗರಣ : ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್


