Homeಮುಖಪುಟಚುನಾವಣಾಧಿಕಾರಿಯ ಮೇಲೆ ಹಲ್ಲೆ | ಆರೋಪಿಯ ಬಂಧನದ ಪ್ರಯತ್ನದ ವೇಳೆ ಹಿಂಸಾಚಾರ; 60 ಮಂದಿಯ ಬಂಧನ

ಚುನಾವಣಾಧಿಕಾರಿಯ ಮೇಲೆ ಹಲ್ಲೆ | ಆರೋಪಿಯ ಬಂಧನದ ಪ್ರಯತ್ನದ ವೇಳೆ ಹಿಂಸಾಚಾರ; 60 ಮಂದಿಯ ಬಂಧನ

- Advertisement -
- Advertisement -

ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಅಮಿತ್ ಚೌಧರಿ ಅವರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಡಿಯೋಲಿ ಉನಿಯಾರಾ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿ ನರೇಶ್ ಮೀನಾ ಅವರನ್ನು ಬಂಧಿಸಲು ಪೊಲೀಸರು ಯತ್ನಿಸಿದ ನಂತರ ಬುಧವಾರ ತಡರಾತ್ರಿ ರಾಜಸ್ಥಾನದ ಟೋಂಕ್‌ನ ಸಮ್ರಾವತ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದೆ. ಚುನಾವಣಾ ಪ್ರಕ್ರಿಯೆಗಳನ್ನು ನೋಡಿಕೊಳ್ಳುತ್ತಿದ್ದ ಅಮಿತ್ ಚೌಧರಿ ಅವರಿಗೆ ಮತಗಟ್ಟೆಯ ಹೊರಗೆ ಮೀನಾ ಅವರು ಹಲ್ಲೆ ನಡೆಸಿದ್ದರು. ಈ ವಿಡಿಯೊ ವೈರಲ್ ಆಗಿದೆ. ಚುನಾವಣಾಧಿಕಾರಿಯ ಮೇಲೆ ಹಲ್ಲೆ

ಪೊಲೀಸರು ಮೀನಾ ಅವರನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಂತೆ, ಹಿಂಸಾಚಾರ ಭುಗಿಲೆದ್ದಿದ್ದು, ಗಲಭೆಕೋರರು ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕನಿಷ್ಠ 60 ಜನರನ್ನು ಬಂಧಿಸಲಾಗಿದೆ ಎಂದು ಅಜ್ಮೀರ್ ರೇಂಜ್ ಐಜಿ ಓಂ ಪ್ರಕಾಶ್ ಖಚಿತಪಡಿಸಿದ್ದಾರೆ. ಚುನಾವಣಾಧಿಕಾರಿಯ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹಿಂಸಾಚಾರದ ವೇಳೆ ಉದ್ರಿಕ್ತ ಜನರು ಸುಮಾರು 24 ದೊಡ್ಡ ವಾಹನಗಳು ಮತ್ತು 48 ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿದ್ದು, ಹಲವಾರು ಮನೆಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ. ಹಿಂಸಾಚಾರಕ್ಕೆ ಪ್ರತಿಕ್ರಿಯೆಯಾಗಿ, ಶೋಧ ಕಾರ್ಯಾಚರಣೆಗಳನ್ನು ನಡೆಸಲು ಮತ್ತು ಕಾನೂನು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ತುಕಡಿಗಳನ್ನು ಗುರುವಾರ ಮುಂಜಾನೆ ನಿಯೋಜಿಸಲಾಯಿತು ಎಂದು ವರದಿ ಹೇಳಿದೆ.

ಘಟನೆಗಳ ಬಗ್ಗೆ ವಿವರಿಸಿದ ಟೋಂಕ್ ಎಸ್ಪಿ ವಿಕಾಸ್ ಸಾಂಗ್ವಾನ್, “ಸಮ್ರಾವತ ಗ್ರಾಮದಲ್ಲಿ ಕೆಲವರು ಮತದಾನವನ್ನು ಬಹಿಷ್ಕರಿಸಿದ್ದಾರೆ. ಸಮಸ್ಯೆ ಬಗೆಹರಿಸಲು ಎಸ್‌ಡಿಎಂ, ತಹಸೀಲ್ದಾರ್‌, ಹೆಚ್ಚುವರಿ ಎಸ್‌ಪಿ ಹಾಗೂ ಇತರೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಪಕ್ಷೇತರ ಅಭ್ಯರ್ಥಿ ನರೇಶ್ ಮೀನಾ ಮತಗಟ್ಟೆಗೆ ನುಗ್ಗಿ ಎಸ್‌ಡಿಎಂ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ. ತಕ್ಷಣ ಹೆಚ್ಚುವರಿ ಎಸ್ಪಿ ಅವರನ್ನು ತಡೆದಿದ್ದಾರೆ. ಈ ಬಗ್ಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ನಮ್ಮ ಮಧ್ಯಸ್ಥಿಕೆಯ ನಂತರ ಮತದಾನ ಶಾಂತಿಯುತವಾಗಿ ಪುನರಾರಂಭವಾಯಿತು” ಎಂದು ಹೇಳಿದ್ದಾ ರೆ.

ಘಟನೆ ಬಗ್ಗೆ ಮಾತನಾಡಿರುವ ಪಕ್ಷೇತರ ಅಭ್ಯರ್ಥಿ ನರೇಶ್ ಮೀನಾ, ಈ ಹಿಂದೆ ಎಸ್‌ಡಿಎಂ ಅಮಿತ್ ಚೌಧರಿ ಸ್ಥಳೀಯರ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಿದ್ದಾರೆ. “ಈ ಹಿಂದೆ ಹಿಂದೋಳಿಯಲ್ಲಿ ಎಸ್‌ಡಿಎಂ ಅಮಿತ್ ಅವರು ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ಮಹಿಳೆಯ ಪತಿ ಮತ್ತು ಶಿಕ್ಷಕರನ್ನೂ ಥಳಿಸಿದ್ದರು. ಈ ವೇಳೆ ಮತ ಹಾಕುವಂತೆ ಒತ್ತಾಯಿಸಿದ್ದ ಅವರು, ಇಲ್ಲವೆಂದರೆ ಕೆಲಸ ಕಳೆದುಕೊಳ್ಳುತ್ತೀರಿ ಎಂದು ಬೆದರಿಸಿದ್ದರು” ಎಂದು ಹೇಳಿದ್ದಾರೆ.

“ಅಷ್ಟೆ ಅಲ್ಲದೆ, ಅಕ್ಟೋಬರ್ 25 ರಿಂದ ನನ್ನ ಬೆಂಬಲಿಗರಿಗೆ ಕಿರುಕುಳ ನೀಡಲಾಗುತ್ತಿದೆ. ನನ್ನ ಪ್ರಚಾರ ಪೋಸ್ಟರ್‌ಗಳನ್ನು ಹರಿದು ಹಾಕಲಾಗಿದ್ದು, ಜನರು ನನಗೆ ಮತ ಹಾಕುವುದನ್ನು ತಡೆಯಲು ಈ ಪ್ರಯತ್ನಗಳನ್ನು ಮಾಡಲಾಗಿದೆ” ಎಂದು ಮೀನಾ ಹೇಳಿದ್ದಾರೆ. ಚುನಾವಣಾಧಿಕಾರಿಯ ಮೇಲೆ ಹಲ್ಲೆ

ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಿರುವುದರಿಂದ, ಮತ್ತಷ್ಟು ಹಿಂಸಾಚಾರವನ್ನು ತಡೆಗಟ್ಟಲು ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಮತ್ತು ಕಳೆದ ರಾತ್ರಿಯ ಅವ್ಯವಸ್ಥೆಗೆ ಕಾರಣರಾದವರನ್ನು ಗುರುತಿಸಲು ತನಿಖೆಗಳು ನಡೆಯುತ್ತಿವೆ ಎಂದು ಪೊಲೀಸರು ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿ ಮೀನಾ ಅವರನ್ನು ಬಂಧಿಸುವಂತೆ ರಾಜಸ್ಥಾನದ ಆಡಳಿತ ಸೇವಾ ಅಧಿಕಾರಿಗಳ ಸಂಘ ಒತ್ತಾಯಿಸಿದೆ.

ಇದನ್ನೂ ಓದಿ: ಬಿಜೆಪಿ ಆಡಳಿತದ ಅವಧಿಯಲ್ಲಿ ನಿರಾವರಿ ನಿಗಮದಿಂದ ₹300 ಕೋಟಿ ಮಠ – ಮಂದಿರಗಳಿಗೆ ದುರುಪಯೋಗ!

ಬಿಜೆಪಿ ಆಡಳಿತದ ಅವಧಿಯಲ್ಲಿ ನಿರಾವರಿ ನಿಗಮದಿಂದ ₹300 ಕೋಟಿ ಮಠ – ಮಂದಿರಗಳಿಗೆ ದುರುಪಯೋಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...