Homeಮುಖಪುಟಎಎಪಿ ಶಾಸಕ ಅಮಾನತುಲ್ಲಾ ಖಾನ್‌ಗೆ ಬಿಗ್ ರಿಲೀಫ್: ವಕ್ಫ್ ಪ್ರಕರಣದಲ್ಲಿ ಬಿಡುಗಡೆ ಮಾಡುವಂತೆ ಕೋರ್ಟ್‌ ನಿರ್ದೇಶನ

ಎಎಪಿ ಶಾಸಕ ಅಮಾನತುಲ್ಲಾ ಖಾನ್‌ಗೆ ಬಿಗ್ ರಿಲೀಫ್: ವಕ್ಫ್ ಪ್ರಕರಣದಲ್ಲಿ ಬಿಡುಗಡೆ ಮಾಡುವಂತೆ ಕೋರ್ಟ್‌ ನಿರ್ದೇಶನ

- Advertisement -
- Advertisement -

ದೆಹಲಿ ವಕ್ಫ್ ಬೋರ್ಡ್ ಪ್ರಕರಣದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಬಿಡುಗಡೆ ಮಾಡುವಂತೆ ಇಲ್ಲಿನ ನ್ಯಾಯಾಲಯವು ಗುರುವಾರ ಆದೇಶಿಸಿದೆ. ಅವರ ವಿರುದ್ಧ ಸಲ್ಲಿಸಲಾದ ಆರೋಪಪಟ್ಟಿಯನ್ನು ಸ್ವೀಕರಿಸಲು ನಿರಾಕರಿಸಿದೆ.

ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ಅವರು ಖಾನ್ ವಿರುದ್ಧ ಮುಂದುವರೆಯಲು ಸಾಕಷ್ಟು ಸಾಕ್ಷ್ಯಾಧಾರಗಳಿದ್ದರೂ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಯಾವುದೇ ಅನುಮತಿ ಇಲ್ಲ. “ಆದ್ದರಿಂದ, ಚಾರ್ಜ್‌ಶೀಟ್ ನಿರಾಕರಿಸಲಾಗಿದೆ” ಎಂದು ನ್ಯಾಯಾಧೀಶರು ಹೇಳಿದರು.

ಒಂದು ಲಕ್ಷ ರೂಪಾಯಿಯ ಜಾಮೀನು ಬಾಂಡ್ ಮತ್ತು ಅಂತಹ ಮೊತ್ತದ ಒಂದು ಶ್ಯೂರಿಟಿಯ ಮೇಲೆ ಖಾನ್ ಅವರನ್ನು ತಕ್ಷಣವೇ ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡುವಂತೆ ನ್ಯಾಯಾಲಯ ಸೂಚಿಸಿದೆ.

ಇಡಿ ಅಕ್ಟೋಬರ್ 29 ರಂದು 110 ಪುಟಗಳ ಮೊದಲ ಪೂರಕ ಪ್ರಾಸಿಕ್ಯೂಷನ್ ದೂರನ್ನು (ಇಡಿ ಚಾರ್ಜ್‌ಶೀಟ್‌ಗೆ ಸಮನಾಗಿರುತ್ತದೆ), ಖಾನ್ ಅವರು ದೆಹಲಿ ವಕ್ಫ್ ಬೋರ್ಡ್‌ನಲ್ಲಿನ ಭ್ರಷ್ಟಾಚಾರದ ಮೂಲಕ ಗಳಿಸಿದ ಹಣವನ್ನು ಲಾಂಡರಿಂಗ್ ಮಾಡಿದ್ದಾರೆ ಎಂದು ಆರೋಪಿಸಿದರು.

ಚಾರ್ಜ್‌ಶೀಟ್‌ನಲ್ಲಿ ಮರಿಯಮ್ ಸಿದ್ದಿಕಿ ಎಂಬುವರನ್ನು ಹೆಸರಿಸಲಾಗಿದ್ದು, ಅವರನ್ನು ಪ್ರಕರಣದಲ್ಲಿ ಇಡಿ ಆರೋಪಿ ಎಂದು ಬಂಧಿಸಿಲ್ಲ. ಸಿದ್ದಿಕಿ ವಿರುದ್ಧ ಮುಂದುವರಿಯಲು ಯಾವುದೇ ಪುರಾವೆಗಳಿಲ್ಲ ಎಂದು ನ್ಯಾಯಾಲಯ ಹೇಳಿದ್ದು, ಆಕೆಯನ್ನು ಬಿಡುಗಡೆ ಮಾಡಲು ಆದೇಶಿಸಿದೆ.

ಇದನ್ನೂ ಓದಿ; ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಪಡೆಯುವುದು ಸ್ಥಾಪಿತ ಹಕ್ಕಲ್ಲ : ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...