HomeಮುಖಪುಟCOP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ

COP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ

- Advertisement -
- Advertisement -

ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನಡೆಯುತ್ತಿರುವ 29ನೇ ವಿಶ್ವ ಹವಾಮಾನ ಶೃಂಗಸಭೆ (COP29) ಮೇಲೆ ಯುಎಸ್‌ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಮರು ಆಯ್ಕೆಯಾಗಿರುವ ಕಾರ್ಮೋಡ ಆವರಿಸಿದೆ.

ಮತ್ತೆ ಆಯ್ಕೆಯಾದರೆ ಜಾಗತಿಕ ತಾಪಮಾನ ನಿಯಂತ್ರಣ ಪ್ರಯತ್ನಗಳ ಹೆಗ್ಗುರುತಾಗಿರುವ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆಯುವುದಾಗಿ ಟ್ರಂಪ್ ಚುನಾವಣಾ ಪ್ರಚಾರದ ವೇಳೆ ಹೇಳಿದ್ದರು. ಅದರಂತೆ ನಡೆದುಕೊಳ್ಳುವ ಆತಂಕ ಎದುರಾಗಿದೆ.

ಟ್ರಂಪ್ 2016ರಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದಾಗ ಯುಎಸ್‌ ಅನ್ನು ಪ್ಯಾರಿಸ್ ಒಪ್ಪಂದದಿಂದ ಹೊರಗಿಟ್ಟಿದ್ದರು. ನಾಲ್ಕು ವರ್ಷಗಳ ನಂತರ ಜೋ ಬೈಡೆನ್ ಮತ್ತೆ ಒಪ್ಪಂದದಲ್ಲಿ ಯುಎಸ್‌ ಅನ್ನು ಸೇರಿಸಿದ್ದರು. ಈಗ ಎರಡನೇ ಬಾರಿ ಯುಎಸ್‌ ಅನ್ನು ಟ್ರಂಪ್ ಹೊರಗಿಡುವ ಸಾಧ್ಯತೆ ಇದೆ.

ಈ ಬಾರಿಯ ಹವಾಮಾನ ಶೃಂಗಸಭೆ ಹಿಂದುಳಿದ ಮತ್ತು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಪಳೆಯುಳಿಕೆ ಇಂಧನಗಳ ಬಳಕೆ ಕಡಿತಗೊಳಿಸುವುದು ಸೇರಿದಂತೆ ತಾಪಮಾನ ಹೆಚ್ಚಳ ನಿಯಂತ್ರಣ ಕ್ರಮಗಳಿಗೆ ಹಣಕಾಸಿನ ನೆರವು (COP FInance) ಒದಗಿಸುವ ಬಗ್ಗೆ ಪ್ರಮುಖ ಚರ್ಚೆ ನಡೆಯುತ್ತಿದೆ.

ಸಂಪದ್ಭರಿತ ಅಥವಾ ಮುಂದುವರಿದ ರಾಷ್ಟ್ರಗಳು ವಾರ್ಷಿಕ 100 ಬಿಲಿಯನ್ ಡಾಲರ್ ನೆರವನ್ನು ಹವಾಮಾನ ಯೋಜನೆಗಳ ನಿಧಿಗೆ ನೀಡಬೇಕು ಎಂದು 2009ರಲ್ಲಿ ಕೋಪನ್ ಹ್ಯಾಗನ್ ಒಪ್ಪಂದ ಮಾಡಿಕೊಳ್ಳಲಾಗಿತ್ತು.

2015 ಪ್ಯಾರಿಸ್ ಒಪ್ಪಂದವು 2009ರ ಒಪ್ಪಂದವನ್ನೇ ಮತ್ತೊಮ್ಮೆ ಪುನರುಚ್ಚರಿಸಿತ್ತು. ಆದರೆ, 2022ರ ಹೊತ್ತಿಗೆ ಕೇವಲ 83.3 ಬಿಲಿಯನ್ ಡಾಲರ್ ಮಾತ್ರ ಸಂಗ್ರಹಿಸಲು ಸಾಧ್ಯವಾಯಿತು. 100 ಬಿಲಿಯನ್ ಗುರಿಯನ್ನು ಅಂತಿಮವಾಗಿ 2023 ರಲ್ಲಿ ತಲುಪಲಾಯಿತು. ಯುಎಸ್ ಸೇರಿದಂತೆ ಎಲ್ಲಾ 196 ದೇಶಗಳು 2015ರ ಪ್ಯಾರಿಸ್ ಒಪ್ಪಂದಕ್ಕೆ ಸಹಿ ಹಾಕಿದ್ದವು. ಭೂಮಿಯ ತಾಪಮಾನ ಕಡಿಮೆ ಮಾಡುವಲ್ಲಿ ಬದ್ದವಾಗಿರುವುದಾಗಿ ಪ್ರತಿಜ್ಞೆ ಮಾಡಿದ್ದವು.

ಕೋಪನ್ ಹ್ಯಾಗನ್ ಮತ್ತು ಪ್ಯಾರಿಸ್, ಈ ಎರಡು ಒಪ್ಪಂದಗಳ ಮುಖ್ಯ ಗುರಿ ಹಿಂದುಳಿದ ಮತ್ತು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಹವಾಮಾನ ಯೋಜನೆಗಳ ಅನುಷ್ಠಾನಕ್ಕೆ ಮುಂದುವರಿದ ರಾಷ್ಟ್ರಗಳು ಆರ್ಥಿಕ ನೆರವು ಒದಗಿಸುವುದು.

2023ರಲ್ಲಿ 100 ಬಿಲಿಯನ್ ಗುರಿ ತಲುಪಿದರೂ, ಈ ಬಾರಿಯ ಬಾಕು ಶೃಂಗಸಭೆಯಲ್ಲಿ ಈ ಮೊತ್ತವನ್ನು ಹೆಚ್ಚಿಸಬೇಕು ಎಂದು ಭಾರತ ಸೇರಿದಂತೆ ಹಿಂದುಳಿದ ಮತ್ತು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳು ಬೇಡಿಕೆ ಇಟ್ಟಿವೆ. ಆದರೆ, ಮುಂದುವರಿದ ರಾಷ್ಟ್ರಗಳು ಈ ವಿಚಾರದಲ್ಲಿ ಬಿನ್ನಾಭಿಪ್ರಾಯ ಹೊಂದಿವೆ. ನಿಧಿ ಸಂಗ್ರಹ ವಿಚಾರದಲ್ಲಿ ಒಮ್ಮತ ಮೂಡಿಲ್ಲ. ಈ ನಡುವೆ ದೊಡ್ಡ ಪಾಲುದಾರರಾಗಿರುವ ಯುಎಸ್‌ ಅಧ್ಯಕ್ಷ ಟ್ರಂಪ್ ಪ್ಯಾರಿಸ್ ಒಪ್ಪಂದದಿಂದಲೇ ಹೊರ ನಡೆಯುವುದಾಗಿ ಹೇಳುತ್ತಿದ್ದಾರೆ.

ಬಾಕುನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯುಎಸ್‌ನ ಉನ್ನತ ಹವಾಮಾನ ರಾಯಭಾರಿ ಜಾನ್ ಪೊಡೆಸ್ಟಾ ಅವರು “ಟ್ರಂಪ್ ಸರ್ಕಾರ ಹವಾಮಾನ ಕ್ರಮಗಳು ಅಥವಾ ಪ್ಯಾರಿಸ್ ಒಪ್ಪಂದದ ವಿಚಾರದಲ್ಲಿ ಯೂ-ಟರ್ನ್‌ ಹೊಡೆಯಬಹುದು ಎಂದು ಒಪ್ಪಿಕೊಂಡಿದ್ದಾರೆ. ಆದರೆ, ಯುಎಸ್‌ನ ನಗರಗಳು, ರಾಜ್ಯಗಳು ಮತ್ತು ಜನರು ಜಾಗತಿಕ ತಾಪಮಾನ ತಗ್ಗಿಸುವ ವಿಚಾರದಲ್ಲಿ ಬದ್ದತೆಯ ಪ್ರಯತ್ನ ಮುಂದುವರೆಸಲಿದ್ದಾರೆ” ಎಂದು ಹೇಳಿದ್ದಾಗಿ ಎಎಫ್‌ಪಿ ವರದಿ ಮಾಡಿದೆ.

ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಯೋಜನೆಗಳು ಒಂದು ‘ವಂಚನೆ’ ಅದರಿಂದ ಯಾವುದೇ ಪರಿಣಾಮಗಳು ಆಗುತ್ತಿಲ್ಲ ಎಂಬುವುದು ಟ್ರಂಪ್ ವಾದ. ಅವರು ತನ್ನದೇ ಆದ ಯೋಜನೆಗಳನ್ನು ರೂಪಿಸಬಹುದು ಎಂದು ವರದಿಗಳು ಹೇಳಿವೆ.

2016ರಲ್ಲಿ ಟ್ರಂಪ್ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆದಾಗ ಇತರ ರಾಷ್ಟ್ರಗಳೂ ಇದೇ ನಿಲುವನ್ನು ಹೊಂದಬಹುದು ಎಂದು ಜಾಗತಿಕ ಮಟ್ಟದಲ್ಲಿ ಆತಂಕ ಶುರುವಾಗಿತ್ತು. ಆದರೆ, 2021ರಲ್ಲಿ ಜೋ ಬೈಡೆನ್ ಆಡಳಿತ ಅವಧಿಯಲ್ಲಿ ಯುಎಸ್‌ ಪ್ಯಾರಿಸ್ ಒಪ್ಪಂದಕ್ಕೆ ಮರು ಸೇರ್ಪಡೆ ಆಯಿತು. 2030ರ ವೇಳೆಗೆ, ತನ್ನ ಇಂಗಾಲ ಹೊರಸೂಸುವಿಕೆಯನ್ನು 2005ರ ಮಟ್ಟಕ್ಕಿಂತ ಅರ್ಧದಷ್ಟು ಕಡಿತಗೊಳಿಸುವುದಾಗಿ ಶಪಥ ಮಾಡಿತು.

ಯುಎಸ್ ಅಥವಾ ಅಮೆರಿಕ ದೊಡ್ಡ ಆರ್ಥಿಕ ದೇಶವಾದ್ದರಿಂದ ಕೋಪನ್ ಹ್ಯಾಗನ್ ಮತ್ತು ಪ್ಯಾರಿಸ್ ಒಪ್ಪಂದಗಳ ಗುರಿ ತಲುಪಲು ಅದರ ಸಹಭಾಗಿತ್ವ ಅಗತ್ಯವಾಗಿದೆ. ಅದರೆ, ಯುಎಸ್ ಹೊರ ನಡೆದರೆ, ಇತರ ದೇಶಗಳು ಅದನ್ನು ಹಿಂಬಾಲಿಸಬಹುದು. ಈ ಮೂಲಕ ಜಾಗತಿಕ ತಾಪಮಾನ ನಿಯಂತ್ರಣಕ್ಕೆ ಮಾಡಿದ ಶ್ರಮಗಳು ವ್ಯರ್ಥವಾಗಬಹುದು. ಭಾರತದಂತಹ ರಾಷ್ಟ್ರಗಳು ಸರಿಯಾದ ಆರ್ಥಿಕ ನೆರವು ಸಿಗದೆ ಹವಾಮಾನ ಯೋಜನೆಗಳ ಅನುಷ್ಠಾನಗೊಳಿಸಲು ವಿಫಲವಾಗಬಹುದು. ಈಗ ನಡೆಯುತ್ತಿರುವ COP ಯಂತಹ ಹವಾಮಾನ ಚರ್ಚೆಗಳು ಸ್ಥಗಿತಗೊಳ್ಳಬಹುದು. ಬಹು ಮುಖ್ಯವಾಗಿ ಯುಎಸ್‌ ತಾನು ಹೊರ ಹೋಗುವುದಲ್ಲದೆ ಇತರ ರಾಷ್ಟ್ರಗಳನ್ನು ತನ್ನ ಜೊತೆ ಕರೆದೊಯ್ಯಬಹುದು.

ಒಟ್ಟಿನಲ್ಲಿ, ಟ್ರಂಪ್ ಮರು ಆಯ್ಕೆಯ ಕಾರ್ಮೋಡ ಹವಾಮಾನ ಯೋಜನೆಗಳ ಮೇಲೆ ಆವರಿಸಿದೆ. ಟ್ರಂಪ್ ಆಡಳಿತದ ಹವಾಮಾನ ತಂತ್ರವು ಜನವರಿ 20ರಂದು ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರದ ನಂತರವೇ ಸ್ಪಷ್ಟವಾಗಿ ತಿಳಿಯಲಿದೆ.

ಇದನ್ನೂ ಓದಿ | COP29 Azerbaijan : ನಿಧಿ ಸಂಗ್ರಹ ಹೆಚ್ಚಳ ವಿಷಯದಲ್ಲಿ ಮೂಡದ ಒಮ್ಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...