Homeಅಂತರಾಷ್ಟ್ರೀಯಗಾಜಾದಲ್ಲಿ ಇಸ್ರೇಲ್ ಸೇನೆಯಿಂದ ಯುದ್ಧಾಪರಾಧ - ಹ್ಯೂಮನ್ ರೈಟ್ಸ್ ವಾಚ್ ಆರೋಪ

ಗಾಜಾದಲ್ಲಿ ಇಸ್ರೇಲ್ ಸೇನೆಯಿಂದ ಯುದ್ಧಾಪರಾಧ – ಹ್ಯೂಮನ್ ರೈಟ್ಸ್ ವಾಚ್ ಆರೋಪ

- Advertisement -
- Advertisement -

ಇಸ್ರೇಲಿ ಅಧಿಕಾರಿಗಳು ಗಾಜಾದಲ್ಲಿ ಪ್ಯಾಲೇಸ್ತೀನಿ ಜನರನ್ನು ಬಲವಂತದ ಸ್ಥಳಾಂತರ ಮಾಡಿದ್ದು, ಅದು ಯುದ್ಧಾಪರಾಧ ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳಾಗಿವೆ ಎಂದು ಹ್ಯೂಮನ್ ರೈಟ್ಸ್ ವಾಚ್ ಗುರುವಾರ ವರದಿಯಲ್ಲಿ ತಿಳಿಸಿದೆ. ಇಸ್ರೇಲ್ ಮುತ್ತಿಗೆ ಹಾಕಿರುವ ಗಾಝಾ ಪ್ರದೇಶದಲ್ಲಿ ಭೀಕರ ಮಾನವೀಯ ಪರಿಸ್ಥಿತಿಯ ಬಗ್ಗೆ ಹಲವಾರು ಅಂತರಾಷ್ಟ್ರೀಯ ಮಾನವ ಹಕ್ಕು ಸಂಸ್ಥೆಗಳ ಎಚ್ಚರಿಕೆ ನೀಡುತ್ತಲೆ ಇವೆ.

“ಗಾಜಾದಲ್ಲಿ ಬಲವಂತದ ಸ್ಥಳಾಂತರವು ವ್ಯಾಪಕವಾಗಿದೆ ಎಂದು ಹ್ಯೂಮನ್‌ ರೈಟ್ಸ್ ವಾಚ್ ಕಂಡುಕೊಂಡಿದೆ. ಇದು ಇಸ್ರೇಲ್‌ನ ವ್ಯವಸ್ಥಿತ ಮತ್ತು ಸರ್ಕಾರಿ ನೀತಿಯ ಭಾಗವಾಗಿದೆ ಎಂಬುವುದಕ್ಕೆ ಪುರಾವೆಗಳು ಇವೆ. ಅಂತಹ ಕೃತ್ಯಗಳು ಮಾನವೀಯತೆಯ ವಿರುದ್ಧದ ಅಪರಾಧಗಳಾಗಿವೆ” ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹ್ಯೂಮನ್ ರೈಟ್ಸ್‌ನ ಈ ವರದಿಯ ಬಗ್ಗೆ ಇಸ್ರೇಲಿ ಸೇನೆಯಾಗಲಿ ಅಥವಾ ವಿದೇಶಾಂಗ ಸಚಿವಾಲಯವಾಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲವಾದರೂ, ಇಸ್ರೇಲಿ ಅಧಿಕಾರಿಗಳು ಈ ಹಿಂದಿನಿಂದಲೂ ಇಂತಹ ಆರೋಪಗಳನ್ನು ತಿರಸ್ಕರಿಸುತ್ತಲೆ ಬಂದಿದ್ದು, ತಮ್ಮ ಪಡೆಗಳು ಅಂತರಾಷ್ಟ್ರೀಯ ಕಾನೂನಿಗೆ ಅನುಸಾರವಾಗಿ ಕಾರ್ಯನಿರ್ವಹಿಸುತ್ತವೆ ಎಂದು ಪ್ರತಿಪಾದಿಸಿದ್ದಾರೆ.

ನಾಗರಿಕರ ಭದ್ರತೆಯ ವಿಚಾರ ಅಥವಾ ಕಡ್ಡಾಯ ಮಿಲಿಟರಿ ಕಾರಣಗಳು ಇಲ್ಲದಿದ್ದರೆ ಆಕ್ರಮಿತ ಪ್ರದೇಶದಿಂದ ನಾಗರಿಕರನ್ನು ಬಲವಂತವಾಗಿ ಸ್ಥಳಾಂತರಿಸುವುದನ್ನು ಸಶಸ್ತ್ರ ಸಂಘರ್ಷದ ಕಾನೂನಿನ ನಿಯಮ ನಿಷೇಧಿಸುತ್ತದೆ.

ಕಳೆದ ವರ್ಷ ದಕ್ಷಿಣ ಇಸ್ರೇಲ್‌ ಮೇಲೆ ಹಮಾಸ್ ದಾಳಿ ಮಾಡಿ ಸುಮಾರು 1,200 ಜನರನ್ನು ಕೊಂದ ನಂತರ, ಇಸ್ರೇಲ್ ಗಾಜಾ ಪಟ್ಟಿಯನ್ನು ಆಕ್ರಮಿಸಿದೆ ಎಂದು ಇಸ್ರೇಲಿ ಅಧಿಕಾರಿಗಳು ಹೇಳಿದ್ದಾರೆ. ಹಮಾಸ್ ನೇತೃತ್ವದ ಈ ದಾಳಿಯಲ್ಲಿ 250 ಕ್ಕೂ ಹೆಚ್ಚು ಜನರನ್ನು ಒತ್ತೆಯಾಳುಗಳಾಗಿ ಅಪಹರಿಸಲಾಗಿದೆ ಎಂದು ಇಸ್ರೇಲ್ ಹೇಳಿದೆ.

ಅಂದಿನಿಂದ, ಇಸ್ರೇಲ್ ನಡೆಸಿದ ದಾಳಿಯಲ್ಲಿ ಗಾಜಾದ ಸುಮಾರು 43,500 ಕ್ಕೂ ಹೆಚ್ಚು ಜನರು ಹತ್ಯೆಯಾಗಿದ್ದಾರೆ. ಜೊತೆಗೆ ಪ್ರದೇಶದ ಹೆಚ್ಚಿನ ಮೂಲಸೌಕರ್ಯವನ್ನು ನಾಶವಾಗಿದ್ದು, 23 ಲಕ್ಷ ಜನರು ಹಲವಾರು ಬಾರಿ ಸ್ಥಳಾಂತರ ಆಗುವಂತೆ ಮಾಡಲಾಗಿದೆ. ಕಳೆದ ಒಂದು ತಿಂಗಳಿನಿಂದ, ಇಸ್ರೇಲಿ ಪಡೆಗಳು ಹಮಾಸ್ ಪಡೆಗಳ ನಾಶಕ್ಕೆ ಪ್ರಯತ್ನಿಸುತ್ತಿದ್ದು, ಉತ್ತರ ಗಾಜಾದಿಂದ ಹತ್ತಾರು ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಸೇನೆ ಹೇಳಿದೆ.

ಇದನ್ನೂ ಓದಿ: COP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ

COP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...

ಹನೂರ್ ‘ಶೂಟೌಟ್’: ದಾಖಲೆಗಳನ್ನು ಬಿಡುಗಡೆ ಮಾಡಿದ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ಸಿಬಿಐ ತನಿಖೆಗೆ ಆಗ್ರಹ 

ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಮೂವರ ಸಾವು ಮತ್ತು ಗುಂಡಿನ ಚಕಮಕಿ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆಗಸ್ಟ್ 15ರಂದು ಹನೂರಿನ ಮರಿಯಮಂಗಲ ಬಿಟ್ ಅರಣ್ಯ...

ಬಿಜೆಪಿ MLC ರವಿಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ...

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...