Homeಮುಖಪುಟರಾಜಕೀಯದಲ್ಲಿ ಹಸ್ತಕ್ಷೇಪ ಮಾಡಲು ಅದಾನಿ ಯಾರು? ಮಲ್ಲಿಕಾರ್ಜುನ ಖರ್ಗೆ

ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಲು ಅದಾನಿ ಯಾರು? ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

“ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಲು ಅದಾನಿ ಯಾರು? ಅವರಿಗೆ ಇಲ್ಲಿ (ರಾಜಕೀಯದಲ್ಲಿ) ಏನು ಕೆಲಸವಿದೆ?” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ (ನ.14) ಪ್ರಶ್ನಿಸಿದ್ದಾರೆ.

ಕಲಬುರಗಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ರಾಜಕೀಯದಲ್ಲಿ ಅದಾನಿ ಹಸ್ತಕ್ಷೇಪ ಮಾಡುತ್ತಿದ್ದು, ಪ್ರಧಾನಿ ಅವರನ್ನು ಬೆಂಬಲಿಸುತ್ತಿದ್ದಾರೆ ಎಂದಿದ್ದಾರೆ.

ಗರಿಷ್ಠ ಸಂಖ್ಯೆಯ ಜನರಿಗೆ ಉದ್ಯೋಗ ಸಿಗುವುದರಿಂದ ಸರ್ಕಾರ ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳನ್ನು ಬೆಂಬಲಿಸಬೇಕು. ಆದರೆ, ಎನ್‌ಡಿಎ ಸರ್ಕಾರ ದೊಡ್ಡ ಪ್ರಮಾಣದ ಕೈಗಾರಿಕೆಗಳನ್ನು ನಡೆಸಲು ಕಾರ್ಪೊರೇಟ್ ಸಂಸ್ಥೆಗಳಿಗೆ ಬೆಂಬಲ ನೀಡುತ್ತಿದೆ. ಅವುಗಳಿಂದ ನೇರ ಮತ್ತು ಪರೋಕ್ಷ ದೇಣಿಗೆಗಳನ್ನು ಪಡೆಯುತ್ತದೆ. ಆದ್ದರಿಂದಲೇ ಅದಾನಿಯವರಂತಹವರು ರಾಜಕೀಯದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

“ಮಹಾರಾಷ್ಟ್ರದ 2019ರ ವಿಧಾನಸಭೆಯ ಚುನಾವಣೆಯ ನಂತರ ಬಿಜೆಪಿ ಮತ್ತು ಅವಿಭಜಿತ ಎನ್‌ಸಿಪಿ ಜೊತೆಗೆ ನಡೆದಿದ್ದ ಸಭೆಯಲ್ಲಿ ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ಕೂಡಾ ಭಾಗವಹಿಸಿದ್ದರು” ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಹೇಳಿದ್ದರು.  

‘ಮೀಸಲಾತಿ’ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿರುವ ಹೇಳಿಕೆ ಕುರಿತು ಪ್ರಶ್ನಿಸಿದಾಗ, “ಮೀಸಲಾತಿಯ ಬಗ್ಗೆ ಮಾತನಾಡಲು ಅವರು ಯಾರು? ಸಂವಿಧಾನವೇ ಮೀಸಲಾತಿಯ ಹಕ್ಕನ್ನು ನೀಡಿದೆ; ಯಾರೂ ಅದನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಖರ್ಗೆ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪಕ್ಷವು ಜನರ ಕಲ್ಯಾಣಕ್ಕೆ ಆದ್ಯತೆ ನೀಡುತ್ತದೆ. ಅವರಿಗೆ ಪ್ರಯೋಜನಕಾರಿ ನೀತಿಗಳನ್ನು ಜಾರಿಗೆ ತರುತ್ತದೆ. ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಅನುಷ್ಠಾನಗೊಳಿಸಿರುವುದು ಕಾಂಗ್ರೆಸ್ ಪಕ್ಷದ ಬದ್ಧತೆಗೆ ಸಾಕ್ಷಿಯಾಗಿದೆ. ಕರ್ನಾಟಕದಲ್ಲಿ ಗ್ಯಾರಂಟಿಗಳ ಅನುಷ್ಠಾನ ಚುನಾವಣೆ ನಡೆಯುತ್ತಿರುವ ರಾಜ್ಯಗಳಲ್ಲಿ ನಮ್ಮ ಬದ್ಧತೆ ತೋರಿಸಲು ಮಾದರಿಯಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಧರ್ಮ ಆಧಾರಿತ ರಾಜಕೀಯಕ್ಕೆ ಪ್ರಾಮುಖ್ಯತೆ ನೀಡುತ್ತದೆ ಮತ್ತು ಧರ್ಮದ ಆಧಾರದ ಮೇಲೆ ಜನರನ್ನು ಓಲೈಸಲು ಪ್ರಯತ್ನಿಸುತ್ತದೆ ಎಂದು ಜನರಿಗೆ ತಿಳಿದಿದೆ. ನಾವು ಅದನ್ನು ವಿರೋಧಿಸುತ್ತೇವೆ. ನಾನು ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಈಗಾಗಲೇ ಮಹಾರಾಷ್ಟ್ರ ಮತ್ತು ಜಾರ್ಖಂಡ್ ಪ್ರವಾಸ ಮಾಡಿದ್ದು, ಜನರಿಂದ ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ ಎಂದಿದ್ದಾರೆ.

ಇದನ್ನೂ ಓದಿ : ಬಿಜೆಪಿಯಿಂದ ಕಾಂಗ್ರೆಸ್‌ನ 50 ಶಾಸಕರಿಗೆ ತಲಾ 50 ಕೋಟಿ ರೂ. ಆಫರ್ : ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...