Homeಕರ್ನಾಟಕಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ | ನವೆಂಬರ್ 20 ರಂದು ರಾಜ್ಯದಾದ್ಯಂತ ಮದ್ಯ ಮಾರಾಟ ಬಂದ್; ಪ್ರತಿಭಟನೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ | ನವೆಂಬರ್ 20 ರಂದು ರಾಜ್ಯದಾದ್ಯಂತ ಮದ್ಯ ಮಾರಾಟ ಬಂದ್; ಪ್ರತಿಭಟನೆ

- Advertisement -
- Advertisement -

ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿರುವ ವೈನ್ ಮರ್ಚೆಂಟ್ ಅಸೋಸಿಯೇಷನ್‌ಗಳ ಒಕ್ಕೂಟವು ನವೆಂಬರ್ 20 ರಂದು ರಾಜ್ಯದಾದ್ಯಂತ ಮದ್ಯ ಮಾರಾಟ ಬಂದ್ ಮಾಡುವುದಾಗಿ ಗುರುವಾರ ಹೇಳಿದೆ. ಭ್ರಷ್ಟಾಚಾರದ ಆರೋಪ ಮಾಡಿರುವ ಒಕ್ಕೂಟವು ತಮ್ಮ ಬೇಡಿಕೆಗಳ ಬಗ್ಗೆ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರ ನಮ್ಮ ಬೇಡಿಕೆಗಳಿಗೆ ಕಿವಿಗೊಡದ ಕಾರಣ ನವೆಂಬರ್ 20 ರಂದು ಅಂಗಡಿ ಮುಂಗಟ್ಟು ಬಂದ್ ಮಾಡಲು ನಿರ್ಧರಿಸಿದೆ. ಈ ಬಂದ್‌ನಿಂದಾಗಿ ರಾಜ್ಯದ ಬೊಕ್ಕಸಕ್ಕೆ ಸುಮಾರು 120 ಕೋಟಿ ರೂಪಾಯಿ ನಷ್ಟವಾಗಲಿದೆ ಎಂದು ಪ್ರಧಾನ ಕಾರ್ಯದರ್ಶಿ ಬಿ.ಗೋವಿಂದರಾಜ ಹೆಗಡೆ ತಿಳಿಸಿದ್ದಾರೆ.  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಬಕಾರಿ ಇಲಾಖೆಯಲ್ಲಿನ ಮಿತಿಮೀರಿದ ಭ್ರಷ್ಟಾಚಾರವನ್ನು ಪ್ರತಿಭಟಿಸಿ ನವೆಂಬರ್ 20 ರಂದು ರಾಜ್ಯದಾದ್ಯಂತ ಮದ್ಯ ಮಾರಾಟವನ್ನು ಬಂದ್ ಮಾಡಲು ನಿರ್ಧರಿಸಿದ್ದೇವೆ. ಅದೇ ದಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.

“ಅಬಕಾರಿ ಅಧಿಕಾರಿಗಳು ಲಂಚ ನೀಡುವಂತೆ ಮಾಡುತ್ತಿರುವ ಕಿರುಕುಳದಿಂದ ಮದ್ಯ ಮಾರಾಟಗಾರರು ಬೇಸತ್ತಿದ್ದು, ಅಧಿಕಾರಿಗಳ ಲಂಚದ ವ್ಯಾಮೋಹದಿಂದ ರಾಜ್ಯದಲ್ಲಿ ನಕಲಿ ಮದ್ಯ ಮಾರಾಟವೂ ಹೆಚ್ಚಾಗಿದೆ. ಅಬಕಾರಿ ಇಲಾಖೆ ವ್ಯಾಪ್ತಿಯಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಮತ್ತು ಪೊಲೀಸ್ ಇಲಾಖೆಗಳ ಜತೆಗೂಡಿ ಸಭೆ ನಡೆಸಬೇಕು,’’ ಎಂದು ಹೆಗಡೆ ಹೇಳಿದ್ದಾರೆ. ಅಬಕಾರಿ ಇಲಾಖೆಯನ್ನು ಹಣಕಾಸು ಇಲಾಖೆಯೊಂದಿಗೆ ವಿಲೀನಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಪೊಲೀಸರ ಹಸ್ತಕ್ಷೇಪ ಮತ್ತು ಅನಗತ್ಯ ಪರವಾನಗಿ ಅಮಾನತು, ಚಿಲ್ಲರೆ ಮದ್ಯ ಮಾರಾಟದ ಬಗ್ಗೆ ಸರ್ಕಾರ ಅಬಕಾರಿ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕು ಮತ್ತು ಮದ್ಯ ಮಾರಾಟದಿಂದ ಕನಿಷ್ಠ 20% ಲಾಭವನ್ನು ನೀಡಬೇಕು ಎಂಬ ಮೂರು ಪ್ರಮುಖ ಬೇಡಿಕೆಗಳನ್ನು ಹೊಂದಿದ್ದೇವೆ ಎಂದು ಹೆಗ್ಡೆ ಹೇಳಿದ್ದಾರೆ.

ಇದನ್ನೂ ಓದಿ: ಸಂವಿಧಾನ ಓದದ ಮೋದಿ ಅದನ್ನು ‘ಖಾಲಿ ಪುಸ್ತಕ’ ಎನ್ನುತ್ತಾರೆ: ರಾಹುಲ್ ಗಾಂಧಿ

ಸಂವಿಧಾನ ಓದದ ಮೋದಿ ಅದನ್ನು ‘ಖಾಲಿ ಪುಸ್ತಕ’ ಎನ್ನುತ್ತಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...