Homeಕರ್ನಾಟಕಬಿಜೆಪಿ ಅವಧಿಯ ಕೋವಿಡ್ ಹಗರಣ : ತನಿಖೆಗೆ ಎಸ್‌ಐಟಿ ರಚಿಸಲು ಸಂಪುಟ ನಿರ್ಧಾರ

ಬಿಜೆಪಿ ಅವಧಿಯ ಕೋವಿಡ್ ಹಗರಣ : ತನಿಖೆಗೆ ಎಸ್‌ಐಟಿ ರಚಿಸಲು ಸಂಪುಟ ನಿರ್ಧಾರ

- Advertisement -
- Advertisement -

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಪಿಪಿಇ ಕಿಟ್, ಔ‍ಷಧಿಗಳು ಮತ್ತು ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ನಡೆದಿರುವ ಅಕ್ರಮಗಳ ತನಿಖೆಗೆ ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಲು ರಾಜ್ಯ ಸರ್ಕಾರ ನಿರ್ಧಿರಿಸಿದೆ.

ಗುರುವಾರ (ನ.14) ವಿಧಾನಸೌಧದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್‌.ಕೆ ಪಾಟೀಲ್ ಈ ಕುರಿತು ಮಾಹಿತಿ ನೀಡಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಕೋವಿಡ್ ಅಕ್ರಮಗಳ ತನಿಖೆಗೆ ರಚಿಸಿದ್ದ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಆಯೋಗದ ಮಧ್ಯಂತರ ವರದಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವುದು ಬಯಲಾಗಿದೆ ಎಂದು ಹೆಚ್‌.ಕೆ ಪಾಟೀಲ್ ತಿಳಿಸಿದ್ದಾರೆ.

ಪಿಪಿಇ ಕಿಟ್, ಔಷಧಿ, ಯಂತ್ರೋಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ, ಕೋವಿಡ್ ಸಾಂಕ್ರಾಮಿಕದಿಂದ ಸಂಭವಿಸಿದ ಸಾವುಗಳ ಮಾಹಿತಿ ಮುಚ್ಚಿಟ್ಟಿರುವುದು, ದಾಖಲೆಗಳ ನಾಶ ಸೇರಿದಂತೆ ಹಲವು ವಿಷಯಗಳ ಬಗ್ಗೆ ಎಸ್ಐಟಿ ತನಿಖೆ ನಡೆಸಲಿದೆ. ಐಜಿಪಿ ಅಥವಾ ಅದಕ್ಕಿಂತ ಹೆಚ್ಚಿನ ದರ್ಜೆಯ ಪೊಲೀಸ್ ಅಧಿಕಾರಿ ಎಸ್ಐಟಿ ನೇತೃತ್ವ ವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ನ್ಯಾಯಮೂರ್ತಿ ಡಿ’ಕುನ್ಹಾ ಆಯೋಗದ ವರದಿಯಲ್ಲಿರುವ ಅಂಶಗಳ ಜೊತೆಗೆ ಎಸ್‌ಐಟಿ ಹೆಚ್ಚಿನ ತನಿಖೆ ನಡೆಸಲಿದೆ. ಅದರ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ದ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

187.91 ಕೋಟಿ ವಸೂಲಿಗೆ ಶಿಫಾರಸು

ಕೋವಿಡ್ ನಿರ್ವಹಣೆಗಾಗಿ ನಡೆದ ಖರೀದಿಯಲ್ಲಿ ನಿಯಮ ಉಲ್ಲಂಘನೆಯಿಂದ ಅಪಾರ ನಷ್ಟ ಸಂಭವಿಸಿದೆ. ಈ ಪೈಕಿ 187.91 ಕೋಟಿ ರೂಪಾಯಿಯನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನ, ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಸೇರಿದಂತೆ ಆರೋಗ್ಯ ಇಲಾಖೆಗಳಿಂದ ವಸೂಲಿ ಮಾಡುವಂತೆ ಮತ್ತು ಖರೀದಿ ಒಪ್ಪಂದ ಮಾಡಿಕೊಂಡ ಅಧಿಕಾರಿಗಳ ವಿರುದ್ದ ಅಪರಾಧ ಪ್ರಕರಣ ದಾಖಲಿಸುವಂತೆ ನ್ಯಾಯಮೂರ್ತಿ ಡಿ’ಕುನ್ಹಾ ಆಯೋಗ ಶಿಫಾರಸು ಮಾಡಿದೆ ಎಂದು ಹೆಚ್‌.ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಕೋವಿಡ್ ಹಗರಣ : ಯಡಿಯೂರಪ್ಪ, ಶ್ರೀರಾಮುಲು ವಿರುದ್ದ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಬೆಂಬಲ, ಭರವಸೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದಿಂದ ಕಾರ್ಯಸಾಧ್ಯತಾ ವರದಿ ಬಂದ ನಂತರ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರವು ನೀಡಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು...

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...