Homeಮುಖಪುಟ₹53 ಕೋಟಿಗೆ 63 ಕ್ಷೇತ್ರಗಳ ಇವಿಎಂ ಹ್ಯಾಕ್ : 'ಮಹಾ' ಚುನಾವಣೆಗೆ ಮುನ್ನ ರಹಸ್ಯ ಬಯಲು

₹53 ಕೋಟಿಗೆ 63 ಕ್ಷೇತ್ರಗಳ ಇವಿಎಂ ಹ್ಯಾಕ್ : ‘ಮಹಾ’ ಚುನಾವಣೆಗೆ ಮುನ್ನ ರಹಸ್ಯ ಬಯಲು

- Advertisement -
- Advertisement -

ನವೆಂಬರ್ 20ರಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯಲಿದ್ದು, ಅದಕ್ಕೂ ಮುನ್ನ ವಿದ್ಯುನ್ಮಾನ ಮತಯಂತ್ರ (ಇವಿಎಂ) ಗಳ ಸಮಗ್ರತೆಯ ಬಗ್ಗೆ ಮತ್ತೊಮ್ಮೆ ಪ್ರಶ್ನೆಗಳು ಎದ್ದಿವೆ.₹53 ಕೋಟಿಗೆ 

ಏಕೆಂದರೆ, ಸ್ವಘೋಷಿತ ಸೈಬರ್ ಎಕ್ಸ್‌ಪರ್ಟ್‌ ಓರ್ವ ಹಣ ಪಡೆದು ಇವಿಎಂ ಹ್ಯಾಕ್ ಮಾಡುವ ಮೂಲಕ ಅಭ್ಯರ್ಥಿಗಳನ್ನು ಗೆಲ್ಲಿಸಿ ಕೊಡುವುದಾಗಿ ಇಂಡಿಯಾ ಟುಡೇ ರಹಸ್ಯ ಕಾರ್ಯಾಚರಣೆಯಲ್ಲಿ ಒಪ್ಪಿಕೊಂಡಿದ್ದಾನೆ.

ಇಂಡಿಯಾ ಟುಡೇ ವರದಿಯ ಪ್ರಕಾರ, ಸೈಯದ್ ಶುಜಾ ಎಂಬಾತ ತಾನು ಯುಎಸ್ ರಕ್ಷಣಾ ಇಲಾಖೆಯ ತಂತ್ರಜ್ಞಾನ ಬಳಸಿಕೊಂಡು ಇವಿಎಂ ಹ್ಯಾಕ್ ಮಾಡುವ ಮೂಲಕ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡುತ್ತೇನೆ ಎಂದಿದ್ದಾನೆ. ಯುಎಸ್ ರಕ್ಷಣಾ ಇಲಾಖೆ ಜೊತೆ ತಾನು ಗುತ್ತಿಗೆ ಹೊಂದಿದ್ದೆ ಎಂದು ಹೇಳಿಕೊಂಡಿದ್ದಾನೆ.₹53 ಕೋಟಿಗೆ 

ಇವಿಎಂ ಹ್ಯಾಕ್ ಮಾಡಲಾಗಿದೆ ಎಂದು ಸೈಯದ್ ಶುಜಾ ಅನೇಕ ಚುನಾವಣೆಗಳ ಸಂದರ್ಭ ಆರೋಪಿಸಿದ್ದ. ವಿಶೇಷವಾಗಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದ್ದ 2014ರ ಲೋಕಸಭೆ ಚುನಾವಣೆಯಲ್ಲಿ ಈ ಆರೋಪ ಮಾಡಿದ್ದ. ಈ ಬಾರಿ ಮಹಾರಾಷ್ಟ್ರದ ಪ್ರತಿಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ ಅಘಾಡಿ (ಎಂವಿಎ)ಯ ನಾಯಕರೊಬ್ಬರು ನನ್ನನ್ನು ಸಂಪರ್ಕಿಸಿದ್ದಾರೆ ಎಂದಿದ್ದಾನೆ.

ಇಂಡಿಯಾ ಟುಡೇ ವರದಿಗಾರರು ಮಹಾರಾಷ್ಟ್ರದ ಸಂಸದರೊಬ್ಬರ ಆಪ್ತ ಸಹಾಯಕನಂತೆ ಸೈಯದ್ ಶುಜಾನನ್ನು ಸಂಪರ್ಕಿಸಿದ್ದರು. ಈ ವೇಳೆ ಆತ, ತನ್ನ ಬಳಿ ರಾಜ್ಯದ 288 ವಿಧಾನಸಭಾ ಕ್ಷೇತ್ರಗಳ ಪೈಕಿ 281 ಕ್ಷೇತ್ರಗಳ ಆಕ್ಸೆಸ್ (ಪ್ರವೇಶ) ಇದ್ದು, ವಿವಿಪ್ಯಾಟ್ ವಿವರಗಳನ್ನು ಒದಗಿಸಿದರೆ 63 ಕ್ಷೇತ್ರಗಳ ಇವಿಎಂಗಳನ್ನು ಟ್ಯಾಂಪರ್ ಮಾಡಿಕೊಡುತ್ತೇನೆ ಎಂದು ಒಪ್ಪಿಕೊಂಡಿದ್ದಾಗಿ ಎಂದು ತಿಳಿದು ಬಂದಿದೆ.

ವಿವಿಪ್ಯಾಟ್ ವಿವರ ಬಳಸಿಕೊಂಡು ನೀವು ಹೇಗೆ ಇವಿಎಂ ಟ್ಯಾಂಪರ್ ಮಾಡುತ್ತೀರಿ? ಎಂದು ವರದಿಗಾರ ಕೇಳಿದ್ದಕ್ಕೆ “ನಾನು ಫೈಲ್ ಪ್ರಿ ಪ್ರೋಗ್ರಾಂ ಮಾಡಿ ಇಟ್ಟಿರುತ್ತೇನೆ. ಉದಾಹರಣೆಗೆ ಅದು ಬಿಜೆಪಿ ಪರ ಫೈಲ್ ಆಗಿದ್ದರೆ, ಚುನಾವಣೆಯ ದಿನದಂದು ಟ್ರಾನ್ಸ್‌ಮಿಷನ್ ಪ್ರಾರಂಭವಾಗುವಾಗ, ಅವರ ಫೈಲ್ ತಡೆದು, ನನ್ನ ಫೈಲ್ ಅನ್ನು ಚುನಾವಣಾ ಆಯೋಗಕ್ಕೆ ಕಳುಹಿಸುತ್ತೇನೆ” ಎಂದು ಸೈಯದ್ ಶುಜಾ ಹೇಳಿಕೊಂಡಿರುವುದಾಗಿ ಇಂಡಿಯಾ ಟುಡೇ ವಿವರಿಸಿದೆ. ಇವಿಎಂಗಳು ಆನ್ ಇಲ್ಲದಿದ್ದರೂ ಟ್ರಾನ್ಸ್‌ಮಿಷನ್ ಮುಂದುವರಿಯುತ್ತದೆ ಎಂದು ಶುಜಾ ತಿಳಿಸಿದ್ದಾನೆ ಎಂದಿದೆ.

“ಇವಿಎಂ ತೆರೆದಾಗ, ಹೊಸ ಫೈಲ್ ಬರುತ್ತದೆ. ನಂತರ ಟ್ರಾನ್ಸ್‌ಮಿಷನ್ ಎಣಿಸಲಾಗುತ್ತದೆ. ಈ ಪ್ರಕ್ರಿಯೆ ಬಹಳ ಸುಲಭದ್ದಾಗಿದೆ. ಇವಿಎಂ ಟ್ಯಾಂಪರ್ ಮಾಡಿದ ಮುಂದಿನ ಮೂರು ದಿನಗಳವರೆಗೆ ನಾನು ಜಾಗರೂಕನಾಗಿರಬೇಕು. ಟ್ರಾನ್ಸ್‌ಮಿಷನ್ ಆಗುತ್ತಿದೆಯೋ ಇಲ್ಲವೋ ಎಂದು ಪ್ರತಿ ಗಂಟೆಗೆ ಸ್ಕ್ಯಾನ್ ಮಾಡಬೇಕು” ಎಂದು ಶುಜಾ ಹೇಳಿಕೊಂಡಿದ್ದಾನೆ.

ಗಣಿತಶಾಸ್ತ್ರದಲ್ಲಿ ಪಿಹೆಚ್‌ಡಿ ಮೈನರ್ ಆಗಿರುವ ಶುಜಾ ಇವಿಎಂ ಹ್ಯಾಕ್ ಮಾಡುವ ತನ್ನ ಕೆಲಸಕ್ಕಾಗಿ 6 ಮಿಲಿಯನ್ ಡಾಲರ್ (ಅಂದಾಜು ರೂ. 52-53 ಕೋಟಿ) ಬೇಡಿಕೆಯಿಟ್ಟಿದ್ದಾನೆ. ಇವಿಎಂ ಹ್ಯಾಕಿಂಗ್ ಕುರಿತು ಶುಜಾ ಸುದ್ದಿಯಾಗುತ್ತಿರುವುದು ಇದೇ ಮೊದಲಲ್ಲ. 2019ರಲ್ಲಿ, ಶುಜಾ ಇವಿಎಂಗಳನ್ನು ಹ್ಯಾಕ್ ಮತ್ತು ರಿಗ್ಗಿಂಗ್ ಮಾಡಿರುವುದಾಗಿ ಆರೋಪಿಸಿ ಚುನಾವಣಾ ಆಯೋಗ ದೆಹಲಿ ಪೊಲೀರಿಗೆ ದೂರು ನೀಡಿತ್ತು. ಪೊಲೀಸರು ಪ್ರಕರಣ ದಾಖಲಿಸಿದ್ದರು.

ಸ್ಕೈಪ್ ಮೂಲಕ ಲಂಡನ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶುಜಾ, 2014 ರಲ್ಲಿ ತನ್ನ ತಂಡದ ಸದಸ್ಯರನ್ನು ಕೊಂದ ನಂತರ ದೇಶದಲ್ಲಿ ಬೆದರಿಕೆ ಇದೆ ಎಂದು ಭಾವಿಸಿದ್ದರಿಂದ ಭಾರತದಿಂದ ಪಲಾಯನ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾನೆ.

ಚುನಾವಣೆಯಲ್ಲಿ ಇವಿಎಂ ಹ್ಯಾಕಿಂಗ್ ಬಗ್ಗೆ ತಿಳಿದಿದ್ದರಿಂದ ಬಿಜೆಪಿ ನಾಯಕ ಗೋಪಿನಾಥ್ ಮುಂಡೆ ಅವರನ್ನು ‘ಕೊಲ್ಲಲಾಗಿದೆ’ ಎಂದು ಶುಜಾ ಆರೋಪಿಸಿದ್ದಾನೆ.

ಇವಿಎಂ ಟ್ಯಾಂಪರಿಂಗ್‌ನ ಆರೋಪಗಳು ಲೋಕಸಭೆ ಚುನಾವಣೆಯ ಸಂದರ್ಭದಲ್ಲಿಯೂ ಮಹಾರಾಷ್ಟ್ರದಲ್ಲಿ ಪ್ರತಿಧ್ವನಿಸಿತ್ತು. ಗೆದ್ದ ಶಿವಸೇನಾ ಸಂಸದ ರವೀಂದ್ರ ವೈಕರ್ ಅವರ ಸಂಬಂಧಿಯೋರ್ವ ಮತ ಎಣಿಕೆ ಕೇಂದ್ರದಲ್ಲಿ ಇವಿಎಂ ಹ್ಯಾಕ್ ಮಾಡಲು ಮೊಬೈಲ್ ಮೂಲಕ ಒಟಿಪಿ ಕ್ರಿಯೇಟ್ ಮಾಡುತ್ತಿದ್ದುದು ಬೆಳಕಿಗೆ ಬಂದಿತ್ತು. ಈ ಪ್ರಕರಣದಲ್ಲಿ ಚುನಾವಣಾಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಇವಿಎಂ ಹ್ಯಾಕ್ ಆಗಿದೆ ಎಂದು ಕಾಂಗ್ರೆಸ್ ಮಾಡಿದ್ದ ಆರೋಪವನ್ನು ಚುನಾವಣಾ ಆಯೋಗ ಅಲ್ಲಗಳೆದಿತ್ತು. ಪ್ರತಿ ಬಾರಿಯಂತೆ ಈ ಬಾರಿಯೂ ಕಾಂಗ್ರೆಸ್ ಚುನಾವಣಾ ಆಯೋಗದ ಮೇಲೆ ಅನುಮಾನ ವ್ಯಕ್ತಪಡಿಸಿದೆ. ಇದು ಒಂದು ರಾಷ್ಟ್ರೀಯ ಪಕ್ಷದ ಕೀಳು ನಡೆ ಎಂದು ಹೇಳಿಕೊಂಡಿತ್ತು.

ಹರಿಯಾಣದ ಸುಮಾರು 26 ಕ್ಷೇತ್ರಗಳಲ್ಲಿ ಇವಿಎಂ ಟ್ಯಾಂಪರಿಂಗ್ ಆದ ಕುರಿತು ಅನುಮಾನ ವ್ಯಕ್ತಪಡಿಸಿ ಕಾಂಗ್ರೆಸ್ ಚುನಾವಣಾ ಆಯೋಗದ ಮೊರೆ ಹೋಗಿತ್ತು. ಇವಿಎಂಗಳ ಬ್ಯಾಟರಿಯ ಭಿನ್ನತೆಗಳ ಕುರಿತು ಗಮನ ಸೆಳೆದಿತ್ತು. ಆದರೆ, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು.

ಇದನ್ನೂ ಓದಿ : ಚುನಾವಣೆಯಲ್ಲಿ ಸ್ಪರ್ಧಿಸಲು ವಯೋಮಿತಿ ಇಳಿಸುವಂತೆ ಒತ್ತಾಯಿಸಿದ ತೆಲಂಗಾಣ ಸಿಎಂ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...