Homeಮುಖಪುಟ''ಇದು ಯುಪಿ ಅಲ್ಲ'' | ಆದಿತ್ಯನಾಥ್ ವಿರುದ್ಧ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ

”ಇದು ಯುಪಿ ಅಲ್ಲ” | ಆದಿತ್ಯನಾಥ್ ವಿರುದ್ಧ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ

- Advertisement -
- Advertisement -

ನವೆಂಬರ್ 20 ರಂದು ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಚಯಿಸಿದ ಬಿಜೆಪಿಯ ‘ಬಾಟಂಗೆ ತೋ ಕಟೇಂಗೆ’ ಘೋಷಣೆಯು ಆಡಳಿತಾರೂಢ ಮಹಾಯುತಿ ಮೈತ್ರಿಕೂಟದಲ್ಲಿ ಭಾರಿ ವಿವಾರ ಉಂಟು ಮಾಡಿದೆ.

ಹಾಲಿ ಸರ್ಕಾರದ ಭಾಗವಾಗಿರುವ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ)ದ ನಾಯಕರಾಗಿರುವ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಈ ಘೋಷಣೆಯನ್ನು ಬಹಿರಂಗವಾಗಿ ಟೀಕಿಸಿದ್ದಾರೆ. ಆದಿತ್ಯನಾಥ್ ಅವರ ಈ ಹೇಳಿಕೆ ಮಹಾರಾಷ್ಟ್ರಕ್ಕೆ ಸೂಕ್ತವಲ್ಲ ಎಂದು ಅವರು ಹೇಳಿದ್ದಾರೆ. ಅದಾಗ್ಯೂ, ರಾಜ್ಯದ ಮತ್ತೊಬ್ಬ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ಆದಿತ್ಯನಾಥ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಎನ್‌ಐ ಜೊತೆ ಮಾತನಾಡಿದ ಅಜಿತ್ ಪವಾರ್, “ಸಾರ್ವಜನಿಕ ರ‍್ಯಾಲಿಗಳು ಮತ್ತು ಮಾಧ್ಯಮ ಸಂದರ್ಶನಗಳಲ್ಲಿ ಘೋಷಣೆ ಬಗ್ಗೆ ನನ್ನ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದೇನೆ. ಕೆಲವು ಬಿಜೆಪಿ ನಾಯಕರೂ ಇದನ್ನು ಪ್ರತಿಧ್ವನಿಸಿದ್ದಾರೆ. ಮಹಾರಾಷ್ಟ್ರವು ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ನೀತಿಯನ್ನು ಅನುಸರಿಸುತ್ತದೆ ಮತ್ತು ಪ್ರಧಾನಮಂತ್ರಿಯವರ ಘೋಷಣೆ, ‘ಏಕ್ ಹೈ ತೋ ಸೇಫ್ ಹೈ,’ ನಮ್ಮ ತತ್ವಗಳೊಂದಿಗೆ ಹೊಂದಿಕೆಯಾಗುತ್ತದೆ ಎಂದು ಅವರು ಹೇಳಿದ್ದಾರೆ.

ಆದಿತ್ಯನಾಥ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಇದು ಉತ್ತರ ಪ್ರದೇಶವಲ್ಲ. ಇಂತಹ ಘೋಷಣೆಗಳು ಉತ್ತರ ಪ್ರದೇಶದಲ್ಲಿ ಪ್ರತಿಧ್ವನಿಸಬಹುದೆ ಹೊರತು, ಇಲ್ಲ ಅಲ್ಲ” ಎಂದು ಹೇಳಿದ್ದಾರೆ.

ಅಜಿತ್ ಅವರ ಅಭಿಪ್ರಾಯಕ್ಕೆ ವ್ಯತಿರಿಕ್ತವಾಗಿ, ಆದಿತ್ಯನಾಥ್ ಅವರ ಹೇಳಿಕೆಯನ್ನು ದೇವೇಂದ್ರ ಫಡ್ನವಿಸ್ ಸಮರ್ಥಿಸಿಕೊಂಡಿದ್ದಾರೆ. ಅವರ ಹೇಳಿಕೆಯು ಏಕತೆಯ ಮಹತ್ವವನ್ನು ಒತ್ತಿಹೇಳುತ್ತದೆ ಎಂದು ವಾದಿಸಿದ್ದಾರೆ. “ಆದಿತ್ಯನಾಥ್ ಅವರ ಘೋಷಣೆಗಳಲ್ಲಿ ನನಗೆ ಏನೂ ತಪ್ಪು ಕಾಣುತ್ತಿಲ್ಲ. ಜಾತಿ, ಸಮುದಾಯಗಳು ಮತ್ತು ರಾಜ್ಯಗಳಲ್ಲಿನ ಒಡಕುಗಳು ನಮ್ಮ ದೇಶವನ್ನು ದುರ್ಬಲಗೊಳಿಸಿದೆ ಎಂದು ಇತಿಹಾಸವು ನಮಗೆ ತೋರಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಅಜಿತ್ ಪವಾರ್ ಅವರು ಆದಿತ್ಯನಾಥ್ ಅವರ ಹೇಳಿಕೆಯನ್ನು ವಿರೋಧಿಸಿದ್ದು ಅವರ ಈ ಹಿಂದಿನ ರಾಜಕೀಯ ಸಂಬಂಧಗಳ ಕಾರಣಕ್ಕಾಗಿದೆ ಎಂದು ಫಡ್ನವೀಸ್ ಸೂಚಿಸಿದ್ದಾರೆ. “ಅಜಿತ್ ಪವಾರ್ ಅವರು ಜಾತ್ಯತೀತ ಮತ್ತು ಹಿಂದೂ ವಿರೋಧಿ ಸಿದ್ಧಾಂತಗಳೊಂದಿಗೆ ದಶಕಗಳ ಕಾಲ ಕಳೆದಿದ್ದಾರೆ. ಜಾತ್ಯತೀತರು ಎಂದು ಹೇಳಿಕೊಳ್ಳುವವರು, ಹಿಂದುತ್ವವನ್ನು ವಿರೋಧಿಸುತ್ತಾರೆ. ಸಾರ್ವಜನಿಕರ ಭಾವನೆಗಳೊಂದಿಗೆ ಹೊಂದಿಕೊಳ್ಳಲು ಅವರಿಗೆ ಸಮಯ ತೆಗೆದುಕೊಳ್ಳುತ್ತದೆ” ಎಂದು ಫಡ್ನವಿಸ್ ಹೇಳಿದ್ದಾರೆ.

ಆದಿತ್ಯನಾಥ್ ಅವರ ಘೋಷಣೆಗೆ ಕಾಂಗ್ರೆಸ್, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿಯನ್ನು ಒಳಗೊಂಡ ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿ ತೀವ್ರ ಟೀಕೆ ವ್ಯಕ್ತಪಡಿಸಿದೆ. ಅವರ ಘೋಷಣೆಯು ಕೋಮುವಾದವನ್ನು ಹೊಂದಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ.

ಅಷ್ಟೆ ಅಲ್ಲದೆ, ಇಬ್ಬರು ಪ್ರಮುಖ ಬಿಜೆಪಿ ನಾಯಕರಾದ ಪಂಕಜಾ ಮುಂಡೆ ಮತ್ತು ಅಶೋಕ್ ಚವಾಣ್ ಕೂಡ ಈ ಘೋಷಣೆಗೆ ತಮ್ಮ ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ ಹಿರಿಯ ನಾಯಕ, ದಿವಂಗತ ಗೋಪಿನಾಥ್ ಮುಂಡೆ ಅವರ ಪುತ್ರಿ ಪಂಕಜಾ ಮುಂಡೆ, ನಮ್ಮ ರಾಜಕೀಯ ಮೌಲ್ಯಗಳು ಭಿನ್ನವಾಗಿರುತ್ತವೆ ಮತ್ತು ತಾನು ಘೋಷಣೆಯ ಭಾಗವಾಗಿದ್ದರೂ ಸಹ ಈ ಘೋಷಣೆಯನ್ನು ಅನುಮೋದಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. “ಈ ಭೂಮಿಯಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯನ್ನು ನಮ್ಮದಾಗಿಸುವುದು ನಾಯಕನ ಕೆಲಸ. ಆದ್ದರಿಂದ, ನಾವು ಅಂತಹ ಯಾವುದೇ ವಿಷಯವನ್ನು ಮಹಾರಾಷ್ಟ್ರಕ್ಕೆ ತರಬೇಕಾಗಿಲ್ಲ” ಎಂದು ಅವರು ಟೀಕಿಸಿದ್ದಾರೆ.

ಅದೇ ರೀತಿ, ಫೆಬ್ರವರಿಯಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದ ಅಶೋಕ್ ಚವಾಣ್ ಅವರು ಈ ಘೋಷಣೆ ಅಪ್ರಸ್ತುತ ಮತ್ತು ಅಸಹ್ಯಕರ ಎಂದು ಟೀಕಿಸಿದ್ದಾರೆ. “ಜನರು ಇದನ್ನು ಮೆಚ್ಚುತ್ತಾರೆ ಎಂದು ನಾನು ಭಾವಿಸುವುದಿಲ್ಲ. ವೈಯಕ್ತಿಕವಾಗಿ, ನಾನು ಅಂತಹ ಘೋಷಣೆಯ ಪರವಾಗಿಲ್ಲ” ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದ 288 ವಿಧಾನಸಭಾ ಸ್ಥಾನಗಳಿಗೆ ಪ್ರಚಾರವು ತೀವ್ರಗೊಳ್ಳುತ್ತಿದ್ದಂತೆ, ಬಿಜೆಪಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣವನ್ನು ಒಳಗೊಂಡಿರುವ ಮಹಾಯುತಿ ಮೈತ್ರಿಕೂಟವು ಮತದಾರರ ಬೆಂಬಲವನ್ನು ಕ್ರೋಢೀಕರಿಸುವತ್ತ ಗಮನಹರಿಸುತ್ತಿದೆ. ನವೆಂಬರ್ 20 ರಂದು ಮತದಾನ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಮೈತ್ರಿಕೂಟದ ಒಗ್ಗಟ್ಟಿನ ಧೋರಣೆಯನ್ನು ಒತ್ತಿ ಹೇಳಿದ ಅಜಿತ್ ಪವಾರ್, “ಮಹಾಯುತಿಗೆ ಸಾಧ್ಯವಾದಷ್ಟು ಮತಗಳನ್ನು ಗಳಿಸುವುದು ನಮ್ಮ ಉದ್ದೇಶವಾಗಿದೆ. ಇತ್ತೀಚಿನ ತಿಂಗಳುಗಳಲ್ಲಿ ನಾವು ಮಾಡಿದ ಕೆಲಸಗಳು ಮತ್ತು ನಾವು ಕೈಗೊಂಡ ಉಪಕ್ರಮಗಳು ಮಹಾಯುತಿ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರಲು ಸಹಾಯ ಮಾಡುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್: 700 ಕೆಜಿ ಡ್ರಗ್ಸ್ ಸಹಿತ ಬೋಟ್ ಎಟಿಎಸ್ ವಶಕ್ಕೆ, 8 ಮಂದಿ ಇರಾನ್ ಪ್ರಜೆಗಳ ಬಂಧನ

ಗುಜರಾತ್: 700 ಕೆಜಿ ಡ್ರಗ್ಸ್ ಸಹಿತ ಬೋಟ್ ಎಟಿಎಸ್ ವಶಕ್ಕೆ, 8 ಮಂದಿ ಇರಾನ್ ಪ್ರಜೆಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...