Homeಮುಖಪುಟ'2019 ರಲ್ಲಿ ಅದಾನಿ ಜೊತೆ ಸಭೆ ನಡೆಸಿಲ್ಲ' | ಶರದ್ ಮತ್ತು ಅಜಿತ್ ಪವಾರ್ ಹೇಳಿಕೆ...

‘2019 ರಲ್ಲಿ ಅದಾನಿ ಜೊತೆ ಸಭೆ ನಡೆಸಿಲ್ಲ’ | ಶರದ್ ಮತ್ತು ಅಜಿತ್ ಪವಾರ್ ಹೇಳಿಕೆ ನಿರಾಕರಿಸಿದ ಬಿಜೆಪಿಯ ದೇವೇಂದ್ರ ಫಡ್ನವಿಸ್

- Advertisement -
- Advertisement -

2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ನಂತರ, ರಾಜ್ಯದಲ್ಲಿ ಬಿಜೆಪಿ-ಎನ್‌ಸಿಪಿ ಮೈತ್ರಿ ಸರ್ಕಾರ ರಚನೆ ಮಾಡುವ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ತಮ್ಮ ನಿವಾಸದಲ್ಲಿ ಸಭೆಯನ್ನು ಆಯೋಜಿಸಿದ್ದರು ಎಂಬ ವರದಿಗಳನ್ನು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಶುಕ್ರವಾರ ನಿರಾಕರಿಸಿದ್ದಾರೆ. ಶರದ್ ಮತ್ತು

“ನಾನು ಮತ್ತು ನನ್ನ ಸೋದರ ಸಂಬಂಧಿ ಅಜಿತ್ ಪವಾರ್ ಉದ್ಯಮಿ ಅದಾನಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದೆವು” ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಫಡ್ನವಿಸ್, ಅದಾನಿ ಈ ಹಿಂದೆ ನಮ್ಮ ಯಾವುದೇ ಸಭೆಗಳಲ್ಲಿ ಭಾಗವಹಿಸಿರಲಿಲ್ಲ ಎಂದು ತಿಳಿಸಿದ್ದಾರೆ. ಶರದ್ ಮತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನ್ಯೂಸ್‌ಲಾಂಡ್ರಿ ಮತ್ತು ದಿ ನ್ಯೂಸ್ ಮಿನಿಟ್‌ಗೆ ನೀಡಿದ ಸಂದರ್ಶನಗಳಲ್ಲಿ ಮಾತನಾಡಿರುವ ಶರದ್ ಪವಾರ್ ಅವರು, ಅದಾನಿ ಅವರು 2019 ರಲ್ಲಿ ದೆಹಲಿಯ ತಮ್ಮ ನಿವಾಸದಲ್ಲಿ ಸಭೆಯನ್ನು ಆಯೋಜಿಸಿದ್ದರು. ಈ ಸಭೆಯಲ್ಲಿ ಸರ್ಕಾರ ರಚನೆಗೆ ಬಿಜೆಪಿಯ ಬೆಂಬಲವನ್ನು ಕೋರುವ ಎನ್‌ಸಿಪಿಯ ಸಾಧ್ಯತೆಯ ಕುರಿತು ಚರ್ಚೆ ನಡೆಸಲಾಗಿತ್ತು ಆರೋಪಿಸಿದ್ದರು, ಇದರ ನಂತರ ಫಡ್ನವೀಸ್ ಸ್ಪಷ್ಟನೆ ನೀಡಿದ್ದಾರೆ.

ದೆಹಲಿಯಲ್ಲಿ ನಡೆದ ಸಭೆಯಲ್ಲಿ ತಾನು, ಅಜಿತ್ ಪವಾರ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಅದಾನಿ ಉಪಸ್ಥಿತರಿದ್ದರು ಎಂದು ಶರದ್ ಪವಾರ್ ಹೇಳಿಕೊಂಡಿದ್ದಾರೆ. ಅದಕ್ಕೂ ಮುಂಚೆ ಅಜಿತ್ ಪವಾರ್ ಅವರು ಕೂಡಾ ಈ ಸಭೆಯ ಬಗ್ಗೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.

2019ರ ಚುನಾವಣೆಯ ನಂತರ ಶರದ್ ಪವಾರ್ ಅವರ ಎನ್‌ಸಿಪಿಯಿಂದ ಬಂಡೆದ್ದಿದ್ದ ಅಜಿತ್ ಪವಾರ್ ಅವರ ಬಣದೊಂದಿಗೆ ಬಿಜೆಪಿ ರಚಿಸಿದ್ದ 3 ದಿನಗಳ ಸರ್ಕಾರಕ್ಕೆ ಮುನ್ನವೆ ಈ ಸಭೆ ನಡೆದಿತ್ತು. ಮೂರೂವರೆ ದಿನಗಳ ಅವಧಿಯ ಅಲ್ಪಾವಧಿ ಸರ್ಕಾರದಲ್ಲಿ ಫಡ್ನವಿಸ್ ಮುಖ್ಯಮಂತ್ರಿ ಮತ್ತು ಅಜಿತ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಅದಾಗ್ಯೂ, ನಾಟಕೀಯ ಬೆಳವಣಿಗೆಯ ನಂತರ, ಅಜಿತ್ ಪವಾರ್ ಅವರು ಮತ್ತೆ ಅವಿಭಜಿತ ಎನ್‌ಸಿಪಿಗೆ ಮರಳಿದ್ದು ಮೂರು ದಿನಗಳ ಸರ್ಕಾರ ಉರುಳಿತ್ತು. ಅದರ ನಂತರ ಎನ್‌ಸಿಪಿಯು ಕಾಂಗ್ರೆಸ್ ಮತ್ತು ಅವಿಭಜಿತ ಶಿವಸೇನೆಯೊಂದಿಗೆ ಮಹಾ ವಿಕಾಸ್ ಅಘಾಡಿ ಸರ್ಕಾರ ರಚಿಸಿತ್ತು. ಆದಾಗ್ಯೂ, 2022ರ ಜೂನ್ ತಿಂಗಳಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಶಾಸಕರ ಗುಂಪು ಬಂಡಾಯವೆದ್ದು, ಬಿಜೆಪಿ ಜೊತೆಗೆ ಸೇರಿದ ನಂತರ ಸರ್ಕಾರವು ಪತನವಾಯಿತು.

ಇದರ ನಂತರ ಶಿಂಧೆ ಅವರು ಬಿಜೆಪಿ ಜೊತೆಗೆ ಸಮ್ಮಿಶ್ರ ಸರ್ಕಾರ ರಚನೆ ಮಾಡಿದ್ದು ಇದರಲ್ಲಿ ಫಡ್ನವಿಸ್ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದರು. ಅದಾಗಿ ಒಂದು ವರ್ಷದ ನಂತರ, ಹಲವಾರು ಎನ್‌ಸಿಪಿ ಶಾಸಕರೊಂದಿಗೆ ಅಜಿತ್ ಪವಾರ್ ಮತ್ತೆ ಬಂಡಾಯವೆದ್ದು ಆಡಳಿತರೂಢ ಸಮ್ಮಿಶ್ರ ಸರ್ಕಾರಕ್ಕೆ ಸೇರಿ, ಅವರೂ ಉಪಮುಖ್ಯಮಂತ್ರಿಯಾದರು.

ಅಜಿತ್ ಪವಾರ್ ಅವರ ವಿಭಜನೆಯ ಪರಿಣಾಮವಾಗಿ ಎನ್‌ಸಿಪಿಯ ಒಂದು ಬಣ ಅವರನ್ನು ಬೆಂಬಲಿಸಿದ್ದರೆ, ಇನ್ನೊಂದು ಬಣ ಶರದ್ ಪವಾರ್ ಅವರನ್ನು ಬೆಂಬಲಿಸಿತು.

288 ಅಸೆಂಬ್ಲಿ ಸ್ಥಾನಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ನವೆಂಬರ್ 20 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮತಗಳ ಎಣಿಕೆ ಮೂರು ದಿನಗಳ ನಂತರ ನಡೆಯಲಿದೆ. ಶಿವಸೇನೆ ಮತ್ತು ಎನ್‌ಸಿಪಿ ವಿಭಜನೆಯ ನಂತರ ನಡೆಯುತ್ತಿರುವ ಮೊದಲ ವಿಧಾನಸಭೆ ಚುನಾವಣೆ ಇದಾಗಿದೆ.

ಇದನ್ನೂ ಓದಿ: ಗ್ರೇಟರ್ ಹೈದರಾಬಾದ್‌ನ ಟ್ರಾಫಿಕ್ ಸ್ವಯಂಸೇವಕರಾಗಿ ಟ್ರಾನ್ಸ್‌ಜೆಂಡರ್‌ಗಳ ನೇಮಕ

ಗ್ರೇಟರ್ ಹೈದರಾಬಾದ್‌ನ ಟ್ರಾಫಿಕ್ ಸ್ವಯಂಸೇವಕರಾಗಿ ಟ್ರಾನ್ಸ್‌ಜೆಂಡರ್‌ಗಳ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...