Homeಮುಖಪುಟ1,911 ವಿದ್ಯಾರ್ಥಿಗಳಿಗೆ 19 ಕೋಟಿ ರೂ. ಸೈಬರ್ ವಂಚನೆ

1,911 ವಿದ್ಯಾರ್ಥಿಗಳಿಗೆ 19 ಕೋಟಿ ರೂ. ಸೈಬರ್ ವಂಚನೆ

- Advertisement -
- Advertisement -

ಕೋಲ್ಕತಾ:  ಪಶ್ಚಿಮ ಬಂಗಾಳ ಸರಕಾರವು ಜಾರಿಗೆ ತಂದಿರುವ “ತರುನೆರ್ ಸ್ವಪ್ನೊ” ( ಯುವಕರ ಕನಸು) ಎಂಬ 10 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಖರೀದಿಗಾಗಿ ರೂ.10,000 ಒದಗಿಸುವ  ಯೋಜನೆಯಾಗಿದೆ. ಇದರಲ್ಲಿ ಸುಮಾರು 16 ಲಕ್ಷ ವಿದ್ಯಾರ್ಥಿಗಳು ಫಲಾನುಭವಿಗಳಾಗಿದ್ದು, ಇದರಲ್ಲಿ  1,911ರಷ್ಟು ವಿದ್ಯಾರ್ಥಿಗಳಿಗೆ ಸುಮಾರು 19 ಕೋಟಿ ಸೈಬರ್ ಕ್ರೈಂ ವಂಚನೆ ನಡೆದ ಘಟನೆ ವರದಿಯಾಗಿದೆ.

ಈ ಸಂಬಂಧ 93 ದೂರುಗಳು ದಾಖಲಾಗಿದ್ದು, 11 ಜನರನ್ನು ಬಂಧಿಸಲಾಗಿದೆ.  ಈ ಪ್ರಕರಣದಲ್ಲಿ ಮಹಾರಾಷ್ಟ್ರ, ರಾಜಸ್ಥಾನ ಮತ್ತು ಜಾರ್ಖಾಂಡ್ ಗಳನ್ನೊಳಗೊಂಡಂತೆ ಅಂತರ್ ರಾಜ್ಯ ಗ್ಯಾಂಗ್ ಗಳು ಭಾಗಿಯಾಗಿರುವುದು ಬಹಿರಂಗಗೊಂಡಿದೆ ಎಂದು ದಕ್ಷಿಣ ಬೆಂಗಾಳ ಹೆಚ್ಚವರಿ ಪೊಲೀಸ್ ಮಹಾನಿರ್ದೇಶಕ ಸುಪ್ರಿತಿಂ ಸಾರ್ಕರ್ ಹೇಳಿದ್ದಾರೆ.

ಬಂಧಿತರಲ್ಲಿ ಕೆಲವರು ಸರಕಾರಿ ಸೌಲಭ್ಯಗಳಲ್ಲಿ ಹಣ ವರ್ಗಾವಣೆ ಮಾಡುವ ಡಿಬಿಟಿ ಯೋಜನೆಗಳು ಮತ್ತು ನ್ಯಾಷನಲ್ ಸ್ಕಾಲರ್ ಶಿಪ್ ಪೋರ್ಟಲ್ ಗಳನ್ನು ಒಳಗೊಂಡಂತೆ ಈ ಹಿಂದಿನ ಹಗರಣಗಳಲ್ಲಿ ದುರುಪಯೋಗಪಡಿಸಿಕೊಂಡಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಸುಪ್ರಿತಿಂ ಸಾರ್ಕರ್ ತಿಳಿಸಿದ್ದಾರೆ.

ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಹಣ ವರ್ಗಾವಣೆ ವಂಚನೆಯ ಸೂತ್ರದಾರರು ಮತ್ತು ಹ್ಯಾಕರ್ ಗಳನ್ನು ಬಂಧಿಸಲು ರಾಜ್ಯಾದ್ಯಂತ ಕೋಲ್ಕತಾ ಪೊಲೀಸ್ ಮತ್ತು ಸಿಐಡಿ ಇಲಾಖೆಗಳು ದಾಳಿಯನ್ನು ನಡೆಸುತ್ತಿವೆ. ಈ ಪ್ರಕರಣದಲ್ಲಿ ಬ್ಯಾಂಕ್ ಅಕೌಂಟ್ ಹೊಂದಿರುವ ಹತ್ತಿರದ ಚೋಪ್ರಾ, ಇಸ್ಲಾಂಪುರ ನಿವಾಸಿಗಳಿಗೆ ಹಣ ವರ್ಗಾವಣೆಯಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಈ ಯೋಜನೆಯಡಿಯಲ್ಲಿ ಶೈಕ್ಷಣಿಕ ಉದ್ದೇಶಕ್ಕಾಗಿ ಸರಕಾರಿ ಅನುದಾನಿತ ಶಾಲೆಗಳು ಮತ್ತು ಮದ್ರಾಸಗಳ ಹೈಯರ್ ಸೆಕೆಂಡರಿ ವಿದ್ಯಾರ್ಥಿಗಳೂ ಕೂಡ ಒಂದು ಬಾರಿಗೆ ಮಾತ್ರ ಅನ್ವಯವಾಗುವ ರೂ. 10,000 ವನ್ನು ಲ್ಯಾಪ್ ಟ್ಯಾಪ್ ಖರೀದಿಗಾಗಿ ಪಡೆಯಬಹುದಾಗಿದೆ.  ಸಂಬಂಧಿಸಿದ ಶಾಲೆಗಳು  ಸರಕಾರಿ ಪೋರ್ಟಲ್ ನಲ್ಲಿ ಅರ್ಹ ವಿದ್ಯಾರ್ಥಿಗಳ ಬ್ಯಾಂಕ್ ಅಕೌಂಟಿನ ಮಾಹಿತಿಯನ್ನು ರವಾನಿಸುತ್ತವೆ. ನಂತರ ಹಣವು ಫಲಾನುಭವಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆಯಾಗುತ್ತದೆ.

ವಿದ್ಯಾರ್ಥಿಗಳ ಅಂಕಿ-ಅಂಶಗಳನ್ನು ಶಾಲೆಯ ಆಡಳಿತ ವರ್ಗವು ಪೋರ್ಟಲ್ ನಲ್ಲಿ ತಾನು ಉಪಯೋಗಿಸುತ್ತಿರುವ ಐಡಿಯೊಂದಿಗೆ ಲಾಗ್  ಮಾಡುವ ಆಗತ್ಯವಿದೆ.  ಪ್ರಾಥಮಿಕ ತನಿಖೆ ಪ್ರಕಾರ ಹ್ಯಾಕರ್ ಗಳು ಈ ವಿದ್ಯಾರ್ಥಿಗಳ ಬ್ಯಾಂಕ್ ಅಕೌಂಟಿಗೆ ತಮ್ಮ ಬ್ಯಾಂಕ್ ಅಕೌಂಟ್ ನಂಬರ್ ಅನ್ನು ಬದಲಾಯಿಸಲು ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ….ಝಾನ್ಸಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ : 10 ನವಜಾತ ಶಿಶುಗಳು ಸಜೀವ ದಹನ,16 ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...