ವಕ್ಫ್ ವಿಚಾರವನ್ನು ಪ್ರತಿಪಕ್ಷ ಬಿಜೆಪಿ ರಾಜಕೀಯ ಅಸ್ತ್ರವಾಗಿ ಬಳಸುತ್ತಿದೆ ಎಂದು ಆರೋಪಿಸಿರುವ ರಾಜ್ಯದ ಗೃಹ ಸಚಿವ ಜಿ ಪರಮೇಶ್ವರ ಅವರು ರಾಜ್ಯದಲ್ಲಿ ಶಾಂತಿ ಕದಡುವ ಯಾವುದೇ ಪ್ರಯತ್ನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭಾನುವಾರ ಎಚ್ಚರಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಈ ವಿಷಯದ ಬಗ್ಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟವನ್ನು ತೀವ್ರಗೊಳಿಸಲು ಬಿಜೆಪಿ ಯೋಜಿಸುತ್ತಿರುವ ಮಧ್ಯೆಯ ಅವರ ಈ ಹೇಳಿಕೆಗಳು ಬಂದಿವೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಬಿಜೆಪಿ ಈ ವಿಚಾರದಲ್ಲಿ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ವಕ್ಫ್ ವಿಚಾರವಾಗಿ ಬಿಜೆಪಿ ಮೂರು ತಂಡಗಳನ್ನು ರಚಿಸಿದ್ದು, ಈ ಮೂರು ತಂಡಗಳು ರಾಜ್ಯದ ಜಿಲ್ಲೆಗಳಿಗೆ ಭೇಟಿ ನೀಡಿ, ವಕ್ಫ್ ನೋಟಿಸ್‌ನಿಂದ ತೊಂದರೆಗೊಳಗಾದವರನ್ನು ಭೇಟಿ ಮಾಡುತ್ತವೆ. ವಕ್ಫ್ ವಿಚಾರವನ್ನು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ಅವರು (ಬಿಜೆಪಿ) ಇದನ್ನು (ವಕ್ಫ್ ಸಮಸ್ಯೆಯನ್ನು) ರಾಜಕೀಯ ಅಸ್ತ್ರವಾಗಿ ಬಳಸುತ್ತಿದ್ದಾರೆ. ಅಂದರೆ, ಅವರು ಕೋಮು ಬೆಂಕಿ ಹಾಕಿ ಶಾಂತಿ ಕದಡುವ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಅದಕ್ಕಾಗಿ ಅವರು ತಮ್ಮ ಯಾತ್ರೆಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂಬುದು ನಮ್ಮ ಆರೋಪ ಎಂದು ಪರಮೇಶ್ವರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡಲು ಮತ್ತು ರಾಷ್ಟ್ರಪತಿ ಆಳ್ವಿಕೆ ಹೇರಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಭಯ ಆಡಳಿತಾರೂಢ ಕಾಂಗ್ರೆಸ್‌ಗೆ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಅದು ಸಾಧ್ಯವಿಲ್ಲ. ಪೊಲೀಸ್ ಇಲಾಖೆ ರಾಜ್ಯದಲ್ಲಿ ಶಾಂತಿ ಕಾಪಾಡುತ್ತಿದೆ. ಕೆಲವು ಘಟನೆಗಳು ನಡೆದಿರಬಹುದು, ಆದರೆ ಒಟ್ಟಾರೆಯಾಗಿ ನಾವು ಶಾಂತಿಯನ್ನು ಕಾಪಾಡುವಲ್ಲಿ ಯಶಸ್ವಿಯಾಗಿದ್ದೇವೆ” ಎಂದು ಹೇಳಿದ್ದಾರೆ.
ಗಲಾಟೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಗೆ ನೀಡಿರುವ ಎಲ್ಲಾ ನೋಟಿಸ್‌ಗಳನ್ನು ಹಿಂಪಡೆಯುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಯಾವುದೇ ಸೂಚನೆಯಿಲ್ಲದೆ ಭೂ ದಾಖಲೆಗಳಲ್ಲಿ ಅನಧಿಕೃತ ತಿದ್ದುಪಡಿಗಳನ್ನು ಸಹ ರದ್ದುಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಬಿಹಾರ | ಮೃತದೇಹದ ಕಣ್ಣೆ ನಾಪತ್ತೆ; ಇಲಿ ಕಚ್ಚಿ ತೆಗೆದಿದೆ ಎಂದ ವೈದ್ಯರು!
ಬಿಹಾರ | ಮೃತದೇಹದ ಕಣ್ಣೆ ನಾಪತ್ತೆ; ಇಲಿ ಕಚ್ಚಿ ತೆಗೆದಿದೆ ಎಂದ ವೈದ್ಯರು!


