Homeಮುಖಪುಟಬಿಜೆಪಿ ಉದ್ದೇಶಪೂರ್ವಕವಾಗಿ ಮಣಿಪುರವನ್ನು ಸುಡಲು ಬಯಸುತ್ತಿದೆ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಉದ್ದೇಶಪೂರ್ವಕವಾಗಿ ಮಣಿಪುರವನ್ನು ಸುಡಲು ಬಯಸುತ್ತಿದೆ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಮಣಿಪುರದಲ್ಲಿ ಹಿಂಸಾಚಾರ ಮತ್ತಷ್ಟು ತೀವ್ರಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ತನ್ನ ದಾಳಿಯನ್ನು ಮುಂದುವರಿಸಿದೆ. “ಭಾರತೀಯ ಜನತಾ ಪಕ್ಷವು (ಬಿಜೆಪಿ) ಮಣಿಪುರವನ್ನು ಉದ್ದೇಶಪೂರ್ವಕವಾಗಿ ಸುಡುತ್ತಿದೆ” ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಆರೋಪಿಸಿದ್ದಾರೆ.

ಎಕ್ಸ್‌ನಲ್ಲಿ ಸುದೀರ್ಘ ಪೋಸ್ಟ್‌ ಮಾಡಿರುವ ಅವರು, “ಮಣಿಪುರರದಲ್ಲಿ ಮೇ 2023 ರಿಂದ ಊಹಿಸಲಾಗದ ನೋವು, ವಿಭಜನೆ ಮತ್ತು ಕುದಿಯುತ್ತಿರುವ ಹಿಂಸಾಚಾರ ತನ್ನ ಜನರ ಭವಿಷ್ಯವನ್ನು ನಾಶಪಡಿಸಿದೆ. ಬಿಜೆಪಿ ಉದ್ದೇಶಪೂರ್ವಕವಾಗಿ ಮಣಿಪುರವನ್ನು ಸುಡಬೇಕೆಂದು ಬಯಸುತ್ತಿದೆ ಎಂದು ತೋರುತ್ತಿದೆ ಎಂದು ನಾವು ಅತ್ಯಂತ ಜವಾಬ್ದಾರಿಯಿಂದ ಹೇಳುತ್ತಿದ್ದೇವೆ. ಏಕೆಂದರೆ, ಅದು ತನ್ನ ದ್ವೇಷಪೂರಿತ ವಿಭಜಕ ರಾಜಕೀಯವನ್ನು ಪೂರೈಸುತ್ತದೆ” ಎಂದು ಖರ್ಗೆ ಹೇಳಿದರು.

“ನರೇಂದ್ರಮೋದಿಯವರೆ, ನಿಮ್ಮ ಡಬಲ್ ಎಂಜಿನ್ ಸರ್ಕಾರಗಳ ಅಡಿಯಲ್ಲಿ, ನಾ ಮಣಿಪುರ ಏಕ್ ಹೈ, ನ ಮಣಿಪುರ ಸೇಫ್ ಹೈ” ಮೇ 2023 ರಿಂದ, ಇದು ಊಹಿಸಲಾಗದ ನೋವು, ವಿಭಜನೆ ಮತ್ತು ಕುದಿಯುತ್ತಿರುವ ಹಿಂಸೆಗೆ ಒಳಗಾಗುತ್ತಿದೆ, ಇದು ತನ್ನ ಜನರ ಭವಿಷ್ಯವನ್ನು ನಾಶಪಡಿಸಿದೆ ಎಂದು ನಾವು ಅತ್ಯಂತ ಜವಾಬ್ದಾರಿಯಿಂದ ಹೇಳುತ್ತಿದ್ದೇವೆ” ಎಂದಿದ್ದಾರೆ.

“ಸುಂದರವಾದ ಗಡಿ ರಾಜ್ಯದಲ್ಲಿ ಎರಡೂ ಸರ್ಕಾರಗಳು ವಿಫಲವಾಗಿವೆ” ಮತ್ತು ಅವರ ಪರಿಸ್ಥಿತಿಗಾಗಿ ಮಣಿಪುರದ ಜನರು “ಎಂದಿಗೂ ಕ್ಷಮಿಸುವುದಿಲ್ಲ ಅಥವಾ ಮರೆಯುವುದಿಲ್ಲ” ಎಂದು ಖರ್ಗೆ ಹೇಳಿದರು.

“ನವೆಂಬರ್ 7 ರಿಂದ ಕನಿಷ್ಠ 17 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕಲಹ ಪೀಡಿತ ಪ್ರದೇಶಗಳ ಪಟ್ಟಿಗೆ ಹೊಸ ಜಿಲ್ಲೆಗಳನ್ನು ಸೇರಿಸಲಾಗುತ್ತಿದೆ ಮತ್ತು ಈಶಾನ್ಯ ರಾಜ್ಯಗಳ ಗಡಿಗೆ ಬೆಂಕಿ ಹರಡುತ್ತಿದೆ. ನೀವು ಮಣಿಪುರವನ್ನು ವಿಫಲಗೊಳಿಸಿದ್ದೀರಿ. ಸುಂದರವಾದ ಗಡಿ ರಾಜ್ಯಕ್ಕೆ ಭವಿಷ್ಯದಲ್ಲಿ ನೀವು ಭೇಟಿ ನೀಡಿದರೂ ಸಹ, ರಾಜ್ಯದ ಜನರು ಎಂದಿಗೂ ಕ್ಷಮಿಸುವುದಿಲ್ಲ ಅಥವಾ ಮರೆಯುವುದಿಲ್ಲ. ನೀವು ಅವರನ್ನು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಬಿಟ್ಟಿದ್ದೀರಿ ಮತ್ತು ಅವರ ದುಃಖವನ್ನು ಗುಣಪಡಿಸಲು, ಪರಿಹಾರವನ್ನು ಕಂಡುಕೊಳ್ಳಲು ಅವರ ರಾಜ್ಯಕ್ಕೆ ಎಂದಿಗೂ ಕಾಲಿಡುವುದಿಲ್ಲ” ಎಂದಿದ್ದಾರೆ.

23 ಜನರ ಬಂಧನ

ಪೊಲೀಸ್ ಅಧಿಕಾರಿಗಳು “ಮನೆಗಳಿಗೆ ದರೋಡೆ ಮತ್ತು ಬೆಂಕಿ ಹಚ್ಚಿದ” ಗುಂಪಿನ ಭಾಗವಾಗಿದ್ದ 23 ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಮಣಿಪುರ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಈ ವ್ಯಕ್ತಿಗಳನ್ನು ರಾಜ್ಯದ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ಬಿಷ್ಣುಪುರ ಜಿಲ್ಲೆಗಳಿಂದ ಬಂಧಿಸಲಾಗಿದೆ. ಹೆಚ್ಚುವರಿಯಾಗಿ, ಪೊಲೀಸ್ ಅಧಿಕಾರಿಗಳು ಅವರ ಬಳಿಯಿಂದ 32 ಪಿಸ್ತೂಲ್, ಏಳು ಸುತ್ತಿನ ಒಂದು ಎಸ್‌ಬಿಬಿಎಲ್, ಎಂಟು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದಲ್ಲಿ ಉಲ್ಬಣಗೊಳ್ಳುವ ಮಧ್ಯೆ, ಮುಂದಿನ ಆದೇಶದವರೆಗೆ ಇಂಫಾಲ್‌ನಲ್ಲಿ ಸಂಪೂರ್ಣ ಕರ್ಫ್ಯೂ ವಿಧಿಸಲಾಗಿದೆ. ಇದರ ಬೆನ್ನಲ್ಲೇ ಸರ್ಕಾರ ಎರಡು ದಿನಗಳ ಕಾಲ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ತಕ್ಷಣವೇ ಸ್ಥಗಿತಗೊಳಿಸಿದೆ.

ಈ ಘಟನೆಯ ನಂತರ ಇಂಫಾಲದಲ್ಲಿ ಸೇನೆ ಮತ್ತು ಅಸ್ಸಾಂ ರೈಫಲ್ಸ್ ಸೇರಿದಂತೆ ಭಾರೀ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿತ್ತು.

ಮಣಿಪುರ ಪೊಲೀಸರ  ಎಕ್ಸ್‌ ಪೋಸ್ಟ್‌ನಲ್ಲಿ, “16.11.2024 ರಂದು, ಕ್ರೋಧದ ಗುಂಪುಗಳು ಇಂಫಾಲ್‌ನಲ್ಲಿ ರಾಜ್ಯದ ಮಂತ್ರಿಗಳು ಮತ್ತು ಶಾಸಕರು ಸೇರಿದಂತೆ ಸಾರ್ವಜನಿಕ ಪ್ರತಿನಿಧಿಗಳ ವಿವಿಧ ಮನೆಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡಿವೆ. ಪೊಲೀಸರು ಚದುರಿಸಲು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ. ಧ್ವಜ ಮೆರವಣಿಗೆಗಳನ್ನು ಬಲಪಡಿಸಲು ಇಂಫಾಲ್‌ನಲ್ಲಿ ಸೇನೆ ಮತ್ತು ಅಸ್ಸಾಂ ರೈಫಲ್ಸ್ ಸೇರಿದಂತೆ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಗುಂಪು ಚದುರಿಸುವ ಪ್ರಕ್ರಿಯೆಯಲ್ಲಿ 08 (ಎಂಟು) ವ್ಯಕ್ತಿಗಳು ಗಾಯಗೊಂಡಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ; ಸಿಎಂ ಬಿರೇನ್ ಸಿಂಗ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಮೈತೇಯಿ ಗುಂಪು; ರಾಜ್ಯ ಸರ್ಕಾರಕ್ಕೆ 24 ಗಂಟೆಗಳ ಗಡುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...