Homeಮುಖಪುಟತೆಲಂಗಾಣ | ತಡರಾತ್ರಿ ಬುಡಕಟ್ಟು ಜನರ ಮನೆಗಳಿಗೆ ನುಗ್ಗಿ ಪೊಲೀಸರಿಂದ ದೌರ್ಜನ್ಯ ಆರೋಪ : ಎಸ್‌ಸಿ,...

ತೆಲಂಗಾಣ | ತಡರಾತ್ರಿ ಬುಡಕಟ್ಟು ಜನರ ಮನೆಗಳಿಗೆ ನುಗ್ಗಿ ಪೊಲೀಸರಿಂದ ದೌರ್ಜನ್ಯ ಆರೋಪ : ಎಸ್‌ಸಿ, ಎಸ್‌ಟಿ ಆಯೋಗಕ್ಕೆ ದೂರು

- Advertisement -
- Advertisement -

ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ಗುಂಪೊಂದು ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ದೂರು ಸಲ್ಲಿಸಿದ್ದು, ಪೊಲೀಸರು ಮಧ್ಯರಾತ್ರಿಯಲ್ಲಿ ಗರ್ಭಿಣಿಯರು ಸೇರಿದಂತೆ ಬುಡಕಟ್ಟು ರೈತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ನವೆಂಬರ್ 11 ರಂದು ಜಿಲ್ಲೆಯ ಲಗಚರ್ಲಾ ಗ್ರಾಮದಲ್ಲಿ ಅಧಿಕಾರಿಗಳ ಮೇಲೆ ದಾಳಿ ನಡೆದ ನಂತರ, ಮಧ್ಯರಾತ್ರಿ 12 ರಿಂದ ಬೆಳಿಗ್ಗೆ 6 ಗಂಟೆಯ ನಡುವೆ ಬುಡಕಟ್ಟು ನಿವಾಸಿಗಳ ಮನೆಗಳಿಗೆ ‘ಪೊಲೀಸ್ ಸಿಬ್ಬಂದಿ ಹಿಂಸಾತ್ಮಕವಾಗಿ ಪ್ರವೇಶಿಸಿ’ ಬಾಗಿಲು ಒಡೆದು ಗರ್ಭಿಣಿಯರು ಸೇರಿದಂತೆ ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಶಾಸಕಿ ಸತ್ಯವತಿ ರಾಥೋಡ್ ಮತ್ತು ಮಾಜಿ ಐಪಿಎಸ್‌ ಅಧಿಕಾರಿ ಆರ್‌ಎಸ್ ಪ್ರವೀಣ್ ಕುಮಾರ್ ಸೇರಿದಂತೆ ವಿರೋಧ ಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌)ಯ ಹಲವು ನಾಯಕರು ಕೂಡ ದೂರು ನೀಡಿದವರಲ್ಲಿ ಸೇರಿದ್ದಾರೆ. ನವೆಂಬರ್ 16 ರಂದು ಶನಿವಾರ ತೆಲಂಗಾಣ ಎಸ್‌ಸಿ/ಎಸ್‌ಟಿ ಆಯೋಗದ ಅಧ್ಯಕ್ಷ ಬಕ್ಕಿ ವೆಂಕಟಯ್ಯ ಅವರಿಗೆ ದೂರು ಸಲ್ಲಿಸಲಾಗಿದೆ.

ನವೆಂಬರ್ 11 ರಂದು ವಿಕಾರಾಬಾದ್ ಜಿಲ್ಲಾಧಿಕಾರಿ ಪ್ರತೀಕ್ ಜೈನ್, ಹೆಚ್ಚುವರಿ ಜಿಲ್ಲಾಧಿಕಾರಿ ಜಿ ಲಿಂಗಯ್ಯ ನಾಯ್ಕ್, ಕೊಡಂಗಲ್ ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಕಾಡಾ) ಅಧ್ಯಕ್ಷ ವೆಂಕಟ್ ರೆಡ್ಡಿ ಮತ್ತು ಇತರ ಅಧಿಕಾರಿಗಳು ಫಾರ್ಮಾ ಕ್ಲಸ್ಟರ್‌ಗೆ ಭೂಸ್ವಾಧೀನಪಡಿಸಿಕೊಳ್ಳುವ ಕುರಿತು ಸಾರ್ವಜನಿಕರ ಅಹವಾಳು ಆಲಿಸಲು ಲಗಚಾರ್ಲಾ ಗ್ರಾಮಕ್ಕೆ ಭೇಟಿ ನೀಡಿದ್ದರು. ಈ ವೇಳೆ ಕೃಷಿ ಭೂಮಿ ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿದ ಗ್ರಾಮದ ನಿವಾಸಿಗಳು, ಅಧಿಕಾರಿಗಳನ್ನು ಓಡಿಸಿದ್ದರು. ಅವರ ಮೇಲೆ ಕಲ್ಲು ತೂರಾಟ ನಡೆಸಿ ವಾಹನಗಳನ್ನು ಜಖಂಗೊಳಿಸಿದ್ದರು.

ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಕ್ಷೇತ್ರ ಕೊಡಂಗಲ್‌ನಲ್ಲಿ ನಡೆದ ಈ ಘಟನೆಯು ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಆರ್‌ಎಸ್ ನಡುವೆ ರಾಜಕೀಯ ಕಿತ್ತಾಟಕ್ಕೆ ಕಾರಣವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಕೊಡಂಗಲ್‌ನ ಮಾಜಿ ಬಿಆರ್‌ಎಸ್ ಶಾಸಕ ಪಟ್ನಂ ನರೇಂದ್ರ ರೆಡ್ಡಿ ಸೇರಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿದೆ. ಬಿಆರ್‌ಎಸ್ ನಾಯಕ ಕೆಟಿ ರಾಮರಾವ್ ಅವರ ಸೂಚನೆ ಮೇರೆಗೆ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನದ ಭಾಗವಾಗಿ ಹಿಂಸಾಚಾರವನ್ನು ಪ್ರಚೋದಿಸಿದ್ದಾಗಿ ನರೇಂದ್ರ ರೆಡ್ಡಿ ಒಪ್ಪಿಕೊಂಡಿದ್ದಾರೆ ಎಂದು ರಿಮಾಂಡ್ ವರದಿಯಲ್ಲಿ ಪೊಲೀಸರು ತಿಳಿಸಿದ್ದಾರೆ.

ರಾಜಕೀಯ ಲಾಭ ಗಳಿಸುವುದು ಮತ್ತು ತೆಲಂಗಾಣ ಸರ್ಕಾರದ ಪ್ರತಿಷ್ಠೆಗೆ ಮಸಿ ಬಳಿಯುವುದು ಅವರ ಗುರಿಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಕೆಟಿಆರ್‌, ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ನಮ್ಮನ್ನು ಬಂಧಿಸಲಿ ಎಂದು ಸವಾಲು ಹಾಕಿದ್ದಾರೆ. ಈ ನಡುವೆ ರಾತ್ರೋರಾತ್ರಿ ಬುಡಕಟ್ಟು ಜನರ ಮನೆಗಳಿಗೆ ನುಗ್ಗಿ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಲಂಬಾಡಾ ಬುಡಕಟ್ಟು ಜನಾಂಗದ ಲಗಚಾರ್ಲ ನಿವಾಸಿಗಳ ಗುಂಪಿನ ಹೆಸರಿನಲ್ಲಿ ದೂರು ದಾಖಲಾಗಿದೆ. ಸರ್ಕಾರಿ ಅಧಿಕಾರಿಗಳ ಮೇಲಿನ ದಾಳಿಯ ರಾತ್ರಿ, ಪೊಲೀಸರು ಅವರ ಮನೆಗಳಿಗೆ ಪ್ರವೇಶಿಸಿದರು ಮತ್ತು “ಮಹಿಳೆಯರನ್ನು ಹಿಂಸಾತ್ಮಕವಾಗಿ ತಳ್ಳಲಾಯಿತು, ತೀವ್ರ ಗಾಯಗಳನ್ನು ಉಂಟುಮಾಡಿದರು ಮತ್ತು ಅವರ ಮನೆಗಳನ್ನು ಬಿಟ್ಟು ಓಡಿಹೋಗುವಂತೆ ಒತ್ತಾಯಿಸಲಾಯಿತು, ಹತ್ತಿರದ ಕಾಡುಗಳು ಮತ್ತು ಕೃಷಿಭೂಮಿಗಳಲ್ಲಿ ಆಶ್ರಯ ಪಡೆದರು” ಎಂದು ಅದು ಹೇಳಿದ್ದಾರೆ.

ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಬಂಧಿತರಾಗಿರುವ ಹಲವು ಆರೋಪಿಗಳ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಲಾಗಿದೆ ಎಂದು ಆರೋಪಿಸಿದೆ. ಹಿಂಸಾಚಾರದಲ್ಲಿ ಭಾಗಿಯಾದವರು ಸರ್ಕಾರಿ ಅಧಿಕಾರಿಗಳ ಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ದಾಳಿಯಲ್ಲಿ ಕಲೆಕ್ಟರ್ ಪ್ರತೀಕ್ ಜೈನ್ ರಕ್ತಸ್ರಾವದಿಂದ ಗಾಯಗೊಂಡಿದ್ದಾರೆ ಎಂದು ರಿಮಾಂಡ್ ವರದಿ ಹೇಳಿದೆ. ಆದರೆ, ಘಟನೆ ನಡೆದ ಮರುದಿನ ಪತ್ರಿಕಾಗೋಷ್ಠಿ ನಡೆಸಿದ ಜಿಲ್ಲಾಧಿಕಾರಿ ಪ್ರತೀಕ್ ಜೈನ್, ‘ಯಾವುದೇ ಹಿಂಸಾಚಾರ ನಡೆದಿಲ್ಲ ಮತ್ತು ಯಾವುದೇ ರೀತಿಯ ಗಾಯಗಳಾಗಿಲ್ಲ” ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಆದ್ದರಿಂದ ಬಂಧಿತರ ವಿರುದ್ಧ ಮಾಡಿರುವ ಆರೋಪಗಳು ರಾಜಕೀಯ ಪ್ರೇರಿತ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ಜೊತೆಗೂಡಿ ಗ್ರಾಮದಲ್ಲಿ ಎಸ್‌ಸಿ ಮತ್ತು ಎಸ್‌ಟಿ ಮಹಿಳೆಯರ ವಿರುದ್ಧ ಜಾತಿ ನಿಂದನೆ ಪದಗಳನ್ನು ಬಳಸಿದ್ದಾರೆ, ಅವರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಬಂಧಿತ ಆರೋಪಿಗಳ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಜಾತಿಯ ಹೆಸರಿನಲ್ಲಿ ನಿಂದಿಸಿದ್ದಾರೆ ಮತ್ತು ಮ್ಯಾಜಿಸ್ಟ್ರೇಟ್‌ಗೆ ಹಿಂಸೆಯನ್ನು ಪ್ರಸ್ತಾಪಿಸದಂತೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಆರೋಪಗಳ ಕುರಿತು ತನಿಖೆ ನಡೆಸಲು ಎಸ್‌ಸಿ/ಎಸ್‌ಟಿ ಆಯೋಗವು ಶೀಘ್ರವೇ ಲಗಚರ್ಲಾ ಗ್ರಾಮಕ್ಕೆ ಭೇಟಿ ನೀಡಲಿದೆ ಎಂದು ಬಕ್ಕಿ ವೆಂಕಟಯ್ಯ ತಿಳಿಸಿದ್ದಾರೆ. ನವೆಂಬರ್ 16 ರವರೆಗೆ ಸರ್ಕಾರಿ ಅಧಿಕಾರಿಗಳ ಮೇಲಿನ ದಾಳಿಗೆ ಸಂಬಂಧಿಸಿದಂತೆ 25 ಜನರನ್ನು ಬಂಧಿಸಲಾಗಿದೆ.

ಇದನ್ನೂ ಓದಿ : 50% ಮೀಸಲಾತಿ ಮಿತಿ ತೆಗೆಯುತ್ತೇವೆ : ಪುನರುಚ್ಚರಿಸಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...