Homeಮುಖಪುಟಜಾರ್ಖಂಡ್ | ಸೋರೆನ್ ವಿರುದ್ಧ ಅಪಪ್ರಚಾರಕ್ಕೆ ಬಿಜೆಪಿಯಿಂದ ₹500 ಕೋಟಿ ಖರ್ಚು - ಆರೋಪ

ಜಾರ್ಖಂಡ್ | ಸೋರೆನ್ ವಿರುದ್ಧ ಅಪಪ್ರಚಾರಕ್ಕೆ ಬಿಜೆಪಿಯಿಂದ ₹500 ಕೋಟಿ ಖರ್ಚು – ಆರೋಪ

- Advertisement -
- Advertisement -

ಜಾರ್ಖಂಡ್‌ನಲ್ಲಿ ದುರುದ್ದೇಶಪೂರಿತ ಅಪ್ರಚಾರಕ್ಕಾಗಿ ಬಿಜೆಪಿ 500 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ರಾಜ್ಯದ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮಂಗಳವಾರ ಆರೋಪಿಸಿದ್ದಾರೆ. ಜನರ ನಡುವೆ ದ್ವೇಷ ಹುಟ್ಟುಹಾಕಿ ಆ ಮೂಲಕ ರಾಜಕೀಯ ಮಹತ್ವಾಕಾಂಕ್ಷೆಗಳನ್ನು ಪೂರೈಸುವಲ್ಲಿ ಬಿಜೆಪಿ ನಿಪುಣತೆಯನ್ನು ಹೊಂದಿದೆ ಎಂದು ಸೋರೆನ್ ಆರೋಪಿಸಿದ್ದು, ಆದರೆ ಜಾರ್ಖಂಡ್‌ನ ಸಂಸ್ಕೃತಿಯು ಇಂತಹ “ದುರುದ್ದೇಶಪೂರಿತ ಅಪ್ರಚಾರಗಳನ್ನು” ಅನುಮತಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಜಾರ್ಖಂಡ್

“ದ್ವೇಷ ಭಾವನೆಗಳನ್ನು ಹುಟ್ಟುಹಾಕುವ ಮೂಲಕ ನಾಯಕರು ತಮ್ಮ ರಾಜಕೀಯ ಮಹತ್ವಾಕಾಂಕ್ಷೆಗಳನ್ನು ಈಡೇರಿಸುವುದು ತುಂಬಾ ಸುಲಭವಾದ ವಿಚಾರವಾಗಿದೆ. ಈ ರೀತಿಯ ಪ್ರಚಾರ ಅಭಿಯಾನವು ಅತ್ಯಂತ ಸುಲಭವಾಗಿದ್ದು, ಅದರಲ್ಲಿ ಬಿಜೆಪಿ ಪರಿಣತ. ಆದರೆ ನಾನು ಜಾರ್ಖಂಡ್‌ನವನು, ನಮ್ಮ ಸಂಸ್ಕೃತಿ ಇದಕ್ಕೆ ಅವಕಾಶ ನೀಡುವುದಿಲ್ಲ. ಇದನ್ನು ಎಂದಿಗೂ ಮಾಡಬೇಡಿ” ಎಂದು X ನ ಪೋಸ್ಟ್‌ನಲ್ಲಿ ಸೊರೆನ್ ಹೇಳಿದ್ದಾರೆ. ಜಾರ್ಖಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಒಂದು ಅಂದಾಜಿನ ಪ್ರಕಾರ, ನನ್ನ ವಿರುದ್ಧ ದ್ವೇಷ ಪ್ರಚಾರಕ್ಕಾಗಿ ಬಿಜೆಪಿ 500 ಕೋಟಿ ರೂ.ಗೂ ಹೆಚ್ಚು ಖರ್ಚು ಮಾಡಿದೆ” ಎಂದು ಅವರು ಆರೋಪಿಸಿದ್ದಾರೆ. ತನ್ನ ವಿರುದ್ಧ ಅಪಪ್ರಚಾರ ಮಾಡಲು ಬಿಹಾರ, ಛತ್ತೀಸ್‌ಗಢ, ಒಡಿಶಾ ಮತ್ತು ಬಂಗಾಳದಿಂದ ಬಿಜೆಪಿ ಜನರನ್ನು ಕರೆತಂದಿದೆ. ಅವರ ಮೂಲಕ ಚುನಾವಣಾ ವೇಳೆ ಮತದಾರರಲ್ಲಿ ಬಿಜೆಪಿ ಭಯ ಹುಟ್ಟುಹಾಕಿದೆ ಎಂದು ಸೋರೆನ್ ಆರೋಪಿಸಿದ್ದಾರೆ.

ಬಿಹಾರ, ಛತ್ತೀಸ್‌ಗಢ, ಒಡಿಶಾ, ಬಂಗಾಳದ ಜನರು ಚುನಾವಣೆ ನಡೆಯುವ ಕ್ಷೇತ್ರಗಳ ರಸ್ತೆ, ಸಂದಿಗಳಲ್ಲಿ ಚುನಾವಣೆ ಕುರಿತು ಚರ್ಚೆ ನಡೆಸುತ್ತಿರುವುದು ಕಂಡು ಬರುತ್ತಿದೆ. ಇದು ಬಿಜೆಪಿಯ ಹೊಸ ಗಿಮಿಕ್, ಇದನ್ನು ಪಿಸುಮಾತು ಪ್ರಚಾರ ಎಂದು ಕರೆಯಲಾಗುತ್ತದೆ. ಇದಕ್ಕಾಗಿ 1 ಕೋಟಿ ರೂ. ಪ್ರತಿ ಕ್ಷೇತ್ರದಲ್ಲಿ ಖರ್ಚು ಮಾಡಿದ್ದು, ಅವರು ಬಂದು ತಮ್ಮ ಕೆಲಸದ ಬಗ್ಗೆ ಮಾತನಾಡುವುದಿಲ್ಲ. ಬದಲಾಗಿ ಅವರು ನಿಮ್ಮನ್ನು ಸುಳ್ಳಿನ ಮೂಲಕ ಹೆದರಿಸುತ್ತಾರೆ ಎಂದು ಸೋರೆನ್ ಆಪಾದಿತ ಪ್ರಚಾರದ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

“ನಾವು ಚುನಾವಣಾ ಬಾಂಡ್‌ಗಳು, ನಕಲಿ ಔಷಧಿಗಳು ಅಥವಾ ನಕಲಿ ಲಸಿಕೆಗಳ ಮೂಲಕ ದೇಶದ ಜನರ ಜೀವನದ ಜೊತೆ ಆಟವಾಡುವ ಮೂಲಕ ದೇಣಿಗೆ ಸಂಗ್ರಹಿಸಿಲ್ಲ. ಆದ್ದರಿಂದ, ಜಾರ್ಖಂಡ್ ನಿವಾಸಿಗಳಾದ ನೀವೆಲ್ಲರೂ ಇಂದು ಮತ್ತು ನಾಳೆ ನನ್ನ ಪರವಾಗಿ ಬಹಿರಂಗವಾಗಿ ಪ್ರಚಾರ ಮಾಡುವಂತೆ ನಾನು ಮನವಿ ಮಾಡುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕುಕಿ ಬಂಡುಕೋರರ ವಿರುದ್ದ ‘ಬೃಹತ್ ಕಾರ್ಯಾಚರಣೆ’ ನಡೆಸಿ : ಕೇಂದ್ರಕ್ಕೆ ಅಗ್ರಹಿಸಿದ ಮಣಿಪುರ ಸರ್ಕಾರ

ಕುಕಿ ಬಂಡುಕೋರರ ವಿರುದ್ದ ‘ಬೃಹತ್ ಕಾರ್ಯಾಚರಣೆ’ ನಡೆಸಿ : ಕೇಂದ್ರಕ್ಕೆ ಅಗ್ರಹಿಸಿದ ಮಣಿಪುರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...