Homeಮುಖಪುಟಮಹಾರಾಷ್ಟ್ರ ಚುನಾವಣೆ | ಹಣ ಹಂಚುವಾಗ ಸಿಕ್ಕಿಬಿದ್ದ ಬಿಜೆಪಿ ರಾಷ್ಟ್ರೀಯ ಪ್ರ. ಕಾರ್ಯದರ್ಶಿ ವಿನೋದ್ ತಾವ್ಡೆ...

ಮಹಾರಾಷ್ಟ್ರ ಚುನಾವಣೆ | ಹಣ ಹಂಚುವಾಗ ಸಿಕ್ಕಿಬಿದ್ದ ಬಿಜೆಪಿ ರಾಷ್ಟ್ರೀಯ ಪ್ರ. ಕಾರ್ಯದರ್ಶಿ ವಿನೋದ್ ತಾವ್ಡೆ : ಆರೋಪ

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನದ ಮುನ್ನಾದಿನ ಇಂದು (ನ.19) ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಬರೋಬ್ಬರಿ 5 ಕೋಟಿ ರೂಪಾಯಿ ಹಣದೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪ ಕೇಳಿ ಬಂದಿದೆ.

ಫಾಲ್ಘರ್ ಜಿಲ್ಲೆಯ ವಿರಾರ್ ನಗರದ ಹೋಟೆಲೊಂದರಲ್ಲಿ ವಿನೋದ್ ತಾವ್ಡೆ ಹಣ ಹಂಚುತ್ತಿದ್ದಾಗ ಬಹುಜನ ವಿಕಾಸ್ ಅಘಾಡಿ (ಬಿವಿಎ) ಕಾರ್ಯಕರ್ತರು ಸೆರೆ ಹಿಡಿದಿದ್ದಾರೆ ಎಂದು ವರದಿಯಾಗಿದೆ. ಅದಕ್ಕೆ ಸಂಬಂಧಿಸಿದ್ದು ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ.

ಬಿವಿಎ ಕಾರ್ಯಕರ್ತರು ತಾವ್ಡೆ ಮೇಲೆ ಮುಗಿ ಬೀಳುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅವರಿಗೆ ರಕ್ಷಣ ಒದಗಿಸಿದ್ದಾರೆ. ವಿಡಿಯೋದಲ್ಲಿ ವಿನೋದ್ ತಾವ್ಡೆಯನ್ನು ಜನರ ಗುಂಪೊಂದು ಸುತ್ತುವರಿದಿರುವುದನ್ನು ನೋಡಬಹುದು.

ವರದಿಗಳ ಪ್ರಕಾರ, ವಿನೋದ್ ತಾವ್ಡೆ ಅವರು ಮನ್ವೇಲ್ಪಾಡಾದ ವಿವಾಂತ್ ಹೋಟೆಲ್‌ನಲ್ಲಿ ಬಿಜೆಪಿ ಅಭ್ಯರ್ಥಿರಾಜನ್ ನಾಯ್ಕ್ ಮತ್ತು ಮುಖಂಡರ ಜೊತೆ ಸಭೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಬಿವಿಎ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.

“ತಾವ್ಡೆ ಸಭೆಯಲ್ಲಿ ಹಾಜರಿದ್ದವರಿಗೆ ಹಣ ಹಂಚುವುದನ್ನು ತಾವು ಕಣ್ಣಾರೆ ಕಂಡಿದ್ದೇವೆ” ಎಂದು ಬಿವಿಎ ಕಾರ್ಯಕರ್ತರೊಬ್ಬರು ಆರೋಪಿಸಿದ್ದಾರೆ. ಬಿವಿಎ ಅಭ್ಯರ್ಥಿ ಕ್ಷಿತಿಜ್ ಠಾಕೂರ್ ಅವರು ತಾವ್ಡೆ ಬಳಿ 5 ಕೋಟಿ ರೂಪಾಯಿ ಹಣ ಮತ್ತು ಎರಡು ಡೈರಿಗಳಲ್ಲಿ ಹೆಸರುಗಳಿತ್ತು ಎಂದು ಹೇಳಿದ್ದಾರೆ. ತಾವ್ಡೆ ಅವರು ಸಭೆ ನಡೆಸುತ್ತಿದ್ದಾಗ ಹೊಟೇಲ್‌ನ ಮುಖ್ಯ ದ್ವಾರವನ್ನು ಮುಚ್ಚಲಾಗಿತ್ತು ಎಂದು ಬಿವಿಎ ಆರೋಪಿಸಿದೆ.

ನಲಸೋಪಾರ ಕ್ಷೇತ್ರದ ಎಲ್ಲಾ 507 ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ಬಗ್ಗೆ ಬಿವಿಎ ಕಳವಳ ವ್ಯಕ್ತಪಡಿಸಿದೆ. ಈ ಪ್ರದೇಶವು ಪಾಲ್ಘರ್ ಜಿಲ್ಲೆಯ ಎರಡು ನಿರ್ಣಾಯಕ ಮತಗಟ್ಟೆಗಳಲ್ಲಿ ಒಂದನ್ನು ಒಳಗೊಂಡಿದೆ. ಜಿಲ್ಲೆಯ ಮತ್ತೊಂದು ಕ್ಷೇತ್ರ ವಸಾಯಿಯಲ್ಲಿ ಠಾಕೂರ್ ಅವರು ಬಿಜೆಪಿ ಅಭ್ಯರ್ಥಿ ಸ್ನೇಹಾ ದುಬೆ ಅವರನ್ನು ಎದುರಿಸಲಿದ್ದಾರೆ. ವಸಾಯಿಯಲ್ಲಿ ಶೇ.93 ಬೂತ್‌ಗಳನ್ನು ವೆಬ್‌ಕಾಸ್ಟ್ ಮಾಡಲಾಗಿದೆ.

ವಿರಾರ್‌ನಲ್ಲಿ ತಾನು ವಾಸ್ತವ್ಯ ಹೂಡಿದ್ದಕ್ಕೆ ಕ್ಷಮೆಯಾಚಿಸಲು ತಾವ್ಡೆ ನನಗೆ ಫೋನ್ ಮಾಡಿದ್ದರು ಎಂದು ಠಾಕೂರ್ ಹೇಳಿದ್ದಾರೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ, ಪೊಲೀಸರು ಮತ್ತು ಚುನಾವಣಾಧಿಕಾರಿಗಳು ಗಮನಹರಿಸುವಂತೆ ಒತ್ತಾಯಿಸಿದ್ದಾರೆ.

ವಿನೋದ್ ತಾವ್ಡೆ ಹಣದ ಜೊತೆ ಸಿಕ್ಕಿಬಿದ್ದ ವಿರಾರ್ ಪ್ರದೇಶ ನಲಸೋಪಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ಬಿವಿಎ ಪಕ್ಷದ ಕ್ಷಿತಿಜ್ ಠಾಕೂರ್ ಇಲ್ಲಿನ ಹಾಲಿ ಶಾಸಕರಾಗಿದ್ದರು. ಪ್ರಸ್ತುತ ನಡೆಯುತ್ತಿರುವ ಚುನಾವಣೆಗೆ ಕ್ಷಿತಿಜ್ ಠಾಕೂರ್ ಮತ್ತೊಮ್ಮೆ ಸ್ಪರ್ದಿಸಿದ್ದು, ಇವರ ವಿರುದ್ದ ಬಿಜೆಪಿಯಿಂದ ರಾಜನ್ ನಾಯ್ಕ್, ಕಾಂಗ್ರೆಸ್‌ನಿಂದ ಸಂದೀಪ್ ಪಾಂಡೆ ಕಣಕ್ಕಿಳಿದಿದ್ದಾರೆ.

2019ರಲ್ಲಿ ಮೂವರು ಶಾಸಕರ ಮೂಲಕ ಬಿವಿಎ ಬಿಜೆಪಿ ನೇತೃತ್ವದ ಮಹಾಯುತಿಯನ್ನು ಬೆಂಬಲಿಸಿತ್ತು. ಈ ಬಾರಿ ಪ್ರಚಾರದ ಅವಧಿ ಕೊನೆಗೊಂಡು ನಾಳೆ ಮತದಾನ ನಡೆಯಲಿದ್ದರೂ, ಹೊರಗಿನ ರಾಜಕಾರಣಿಗಳು ಕ್ಷೇತ್ರದಲ್ಲಿರುವುದನ್ನು ಬಿವಿಎ ಅಧ್ಯಕ್ಷ ಹಿತೇಂದ್ರ ಠಾಕೂರ್ ಪ್ರಶ್ನಿಸಿದ್ದಾರೆ.

ಮಹಾರಾಷ್ಟ ಬಿಜೆಪಿ ಆರೋಪವನ್ನು ತಳ್ಳಿ ಹಾಕಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ವಿನೋದ್ ತಾವ್ಡೆ ವಾರ್ಡ್‌ ಮಟ್ಟದಲ್ಲಿ ಹಣ ಹಂಚುತ್ತಾರೆಯೇ? ಎಂದು ಪ್ರಶ್ನಿಸಿದೆ.

ಇದನ್ನೂ ಓದಿ : ಗಾಯಕ ಟಿಎಂ ಕೃಷ್ಣಗೆ ‘ಎಂಎಸ್ ಸುಬ್ಬುಲಕ್ಷ್ಮಿ’ ಹೆಸರಿನಲ್ಲಿ ಪ್ರಶಸ್ತಿ ನೀಡದಂತೆ ಮದ್ರಾಸ್ ಹೈಕೋರ್ಟ್ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...