ಸರ್ಕಾರಿ ಶಾಲೆಯ ಆವರಣದಲ್ಲಿ ಶಿಕ್ಷಕಿಯೊಬ್ಬರ ಮೇಲೆ ಮಾರಣಾಂತಿಕವಾಗಿ ಇರಿದು ಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ತಂಜಾವೂರು ಜಿಲ್ಲೆಯ ಮಲ್ಲಿಪಟ್ಟಿನಂನಲ್ಲಿ ನಡೆದಿದೆ. ಸಂತ್ರಸ್ತೆಯನ್ನು ಚಿನ್ನಮನೈ ಗ್ರಾಮದ ನಿವಾಸಿ ರಮಣಿ (26) ಎಂದು ಗುರುತಿಸಲಾಗಿದ್ದು, ಅವರು ಕಳೆದ ಐದು ತಿಂಗಳಿನಿಂದ 6 ರಿಂದ 9 ನೇ ತರಗತಿಗೆ ತಾತ್ಕಾಲಿಕ ತಮಿಳು ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ತಮಿಳುನಾಡು
ಘಟನೆಯು ಶಾಲೆಯ ಸ್ಟಾಫ್ ರೂಮ್ ಬಳಿ ಈ ಸಂಭವಿಸಿದೆ. ಅಲ್ಲಿ ಅವರು ತನ್ನ ಗ್ರಾಮದ ಎಸ್. ಮದನ್ (30) ಎಂಬ ವ್ಯಕ್ತಿಯ ಜಜೊತೆಗೆ ಮಾತನಾಡುತ್ತಿದ್ದರು. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಶಾಲಾ ಸಿಬ್ಬಂದಿಗೆ ಕೊಠಡಿಯಿಂದ ಕಣ್ಣಿಗೆ ಕಾಣುವಂತೆ ಮದನ್ ರಮಣಿಯ ಕುತ್ತಿಗೆ ಮತ್ತು ಹೊಟ್ಟೆಗೆ ಪದೇ ಪದೇ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ರಮಣಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕುಸಿದು ಬೀಳುತ್ತಿದ್ದಂತೆ, ಮದನ್ ಓಡಿಹೋಗಲು ಪ್ರಯತ್ನಿಸಿದ್ದು, ಆದರೆ ಶಾಲೆಯ ಸಿಬ್ಬಂದಿ ಅವರನ್ನು ಹಿಡಿದಿದ್ದಾರೆ. ಗಂಭೀರವಾಗಿ ಗಾಯಗೊಂಡ ಶಿಕ್ಷಕಿಯನ್ನು ಪಟ್ಟುಕೊಟ್ಟೈ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿನ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಆಶಿಶ್ ರಾವತ್ ಮತ್ತು ಅವರ ತಂಡ ಶಾಲೆಗೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ ಎಂದು ವರದಿ ಹೇಳಿದೆ.
தஞ்சாவூர் மாவட்டம் மல்லிப்பட்டினம் அரசுப் பள்ளியில் பணிபுரிந்த ஆசிரியர் ரமணி அவர்களின் மீதான தாக்குதலை வன்மையாக கண்டிக்கின்றோம்.
ஆசிரியர்கள் மீதான வன்முறையை துளியும் சகித்துக் கொள்ள முடியாது. தாக்குதலை நடத்தியவர் மீது கடுமையான சட்ட நடவடிக்கை மேற்கொள்ளப்படும்.
ஆசிரியர் ரமணி…
— Anbil Mahesh (@Anbil_Mahesh) November 20, 2024
ಪ್ರಾಥಮಿಕ ತನಿಖೆಯಲ್ಲಿ ರಮಣಿ ಮತ್ತು ಮದನ್ ಸಂಬಂಧದಲ್ಲಿ ಇದ್ದರು ಎಂದು ತಿಳಿದುಬಂದಿದೆ, ಆದರೆ ಇಬ್ಬರೂ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದರೂ ಅವರ ಕುಟುಂಬವು ಅವರ ಮದುವೆಗೆ ವಿರೋಧ ವ್ಯಕ್ತಪಡಿಸಿತ್ತು. ತನ್ನ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ನಡೆಯಲು ಸಾಧ್ಯವಿಲ್ಲ ಎಂದು ರಮಣಿ ಮದನ್‌ಗೆ ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದರಿಂದ ಕುಪಿತಗೊಂಡ ಮದನ್ ಆಕೆಯ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಸೇತುಬಾವಚತಿರಂ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ಘಟನೆಯು ಸ್ಥಳೀಯರಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ. ಜೊತೆಗೆ, ತಮಿಳುನಾಡು ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರು ತಂಜಾವೂರು ಜಿಲ್ಲೆಯ ಮಲ್ಲಿಪಟ್ಟಣಂ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಶಿಕ್ಷಕಿ ರಮಣಿ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.
“ಶಿಕ್ಷಕರ ಮೇಲಿನ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ. ದಾಳಿಕೋರನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಶಿಕ್ಷಕ ರಮಣಿ ಅವರ ಕುಟುಂಬ, ವಿದ್ಯಾರ್ಥಿಗಳು ಮತ್ತು ಸಹ ಶಿಕ್ಷಕರಿಗೆ ನಾವು ನಮ್ಮ ಸಂತಾಪ ವ್ಯಕ್ತಪಡಿಸುತ್ತೇವೆ” ಎಂದು ಸಚಿವರು ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಹೇಳಿದ್ದಾರೆ.


