ನಕಲಿ ಕಂಪನಿಗಳನ್ನು ಸ್ಥಾಪಿಸಿ, ಅದರ ಮೂಲಕ ನಕಲಿ ಉದ್ಯೋಗ ಪ್ರಮಾಣಪತ್ರಗಳನ್ನು ತಯಾರಿಸಿ ಅನರ್ಹರಿಗೆ ನೂರಾರು ಉದ್ಯೋಗಿ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ಕಾರ್ಡ್‌ಗಳನ್ನು ರಚಿಸುವ ದಂಧೆಯನ್ನು ಮಂಗಳವಾರ ಭೇದಿಸಿದ್ದಾಗಿ ಬೆಂಗಳೂರು ಪೊಲೀಸರ ಕೇಂದ್ರ ಅಪರಾಧ ವಿಭಾಗ ಮಂಗಳವಾರ ತಿಳಿಸಿದೆ. ನಕಲಿ ಉದ್ಯೋಗ
ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾಗಿ ಹೇಳಿದ್ದಾರೆ. ಬಂಧಿತ ಆರೋಪಿಗಳನ್ನು ನಿವೃತ್ತ ಸೇನಾಧಿಕಾರಿ ಶ್ರೀಧರ್(42), ರಮೇಶ್ ಬಿ ಕೆ(54), ಚಂದ್ರ ಕುಮಾರ್ ಎಸ್ ಎಚ್(37) ಮತ್ತು ಶಿವಗಂಗಾ(38) ಎಂದು ಗುರುತಿಸಿದ್ದಾರೆ. ಈ ಎಲ್ಲಾ ಆರೋಪಿಗಳು ಬೆಂಗಳೂರಿನಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ ಉದ್ಯೋಗ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ನಕಲಿ ಉದ್ಯೋಗ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಆರೋಪಿ ರಮೇಶ್ 2018 ರಲ್ಲಿ ಈ ಹಗರಣವನ್ನು ಪ್ರಾರಂಭಿಸಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಅದಾಗ್ಯೂ, ಅವರ ಅಕ್ರಮ ಕಾರ್ಯಾಚರಣೆ ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ಸ್ಥಗಿತಗೊಂಡಿದ್ದವು. 2022 ರಲ್ಲಿ ಇದನ್ನು ಮತ್ತೆ ಪ್ರಾರಂಭಿಸಲಾಗಿತ್ತು, ಈ ವೇಳೆ ಮತ್ತೊಬ್ಬ ಆರೋಪಿ ಶ್ರೀಧರ್ ಕೂಡಾ ಅವರೊಂದಿಗೆ ಸೇರಿಕೊಂಡಿದ್ದ ಎಂದು ಅವರು ಹೇಳಿದ್ದಾರೆ.
21,000 ಕ್ಕಿಂತ ಕಡಿಮೆ ಮಾಸಿಕ ವೇತನವನ್ನು ಗಳಿಸುವ ಕಾರ್ಮಿಕರಿಗೆ ESIC ಕಾರ್ಡ್ ನೀಡಲಾಗುತ್ತದೆ. ಈ ಕಾರ್ಡ್ ಇದ್ದವರಿಗೆ ESIC ಸಂಯೋಜಿತ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆಗಳು ವಭ್ಯವಾಗುತ್ತದೆ.
ಆರೋಪಿಗಳು ಖಾಸಗಿ ಆಸ್ಪತ್ರೆಗಳಲ್ಲಿ ಸೌಲಭ್ಯ ವಂಚಿತ ರೋಗಿಗಳನ್ನು ಗುರಿಯಾಗಿಸಿಕೊಂಡು, ಅತ್ಯಲ್ಪ ಶುಲ್ಕಕ್ಕೆ ಇಎಸ್‌ಐಸಿ ಕಾರ್ಡ್‌ಗಳನ್ನು ನೀಡುತ್ತಿದ್ದರು. ಅದಕ್ಕಾಗಿ ಅವರು ನಕಲಿ ಕಂಪನಿಗಳನ್ನು ಸ್ಥಾಪಿಸಿದ್ದರು. ಜೊತೆಗೆ ESIC ಕಾರ್ಡ್ ಅರ್ಹತಾ ಮಾನದಂಡಗಳನ್ನು ಪೂರೈಸಲು ಉದ್ಯೋಗ ಪ್ರಮಾಣಪತ್ರಗಳನ್ನು ಕೂಡಾ ತಯಾರಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಈ ದಾಖಲೆಗಳನ್ನು ಬಳಸಿಕೊಂಡು, ಅವರು 869 ESIC ಕಾರ್ಡ್‌ಗಳನ್ನು ರಚಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಜೊತೆಗೆ ಆರೋಪಿಗಳು ಫಲಾನುಭವಿಗಳಿಂದ ಮಾಸಿಕ 500 ರೂಪಾಯಿಗಳನ್ನು “ಖಾತೆ ಶುಲ್ಕ” ಎಂದು ಸಂಗ್ರಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಂಧೆಯ ಸಂಪೂರ್ಣ ವ್ಯಾಪ್ತಿಯನ್ನು ನಿರ್ಧರಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


