ಪ್ರತಿಷ್ಠಿತ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು(IIM-B)ನಲ್ಲಿ ಜಾತಿ ಆಧಾರಿತ ತಾರತಮ್ಯದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಗಿದೆ. ಸಂಸ್ಥೆಯ ನಿರ್ದೇಶಕರ ರಾಜೀನಾಮೆಗೆ ಒತ್ತಾಯಿಸಿದ ಪ್ರತಿಭಟನಾಕಾರರು, ಸಂಸ್ಥೆಯು ಇಕ್ವಿಟಿ ಮತ್ತು ಸೇರ್ಪಡೆಯ ಸಾಂವಿಧಾನಿಕ ಆದೇಶಗಳನ್ನು ಎತ್ತಿಹಿಡಿಯಲು ವಿಫಲವಾಗಿದೆ ಎಂದು ಅವರು ಆರೋಪಿಸಿದ್ದಾರೆ. ಐಐಎಂ ಬೆಂಗಳೂರು
ಅಖಿಲ ಭಾರತ OBC ಸ್ಟೂಡೆಂಟ್ಸ್ ಅಸೋಸಿಯೇಷನ್ (AIOBCSA), ಡಾ ಬಿಆರ್ ಅಂಬೇಡ್ಕರ್ ಅಸೋಸಿಯೇಷನ್ ಆಫ್ ಇಂಜಿನಿಯರ್ಸ್ (BANAE), ಮತ್ತು OBC ಫೆಡರೇಶನ್ ಆಫ್ ಇಂಡಿಯಾದಿಂದ ಆಯೋಜಿಸಲಾದ ಪ್ರತಿಭಟನೆಯು ತಳಮಟ್ಟದ ಸಮುದಾಯಗಳು ಮತ್ತು ಪ್ರಗತಿಪರ ಸಂಘಟನೆಗಳ ಪ್ರತಿನಿಧಿಗಳನ್ನು ಒಟ್ಟುಗೂಡಿಸಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಭಾರತದ ಉನ್ನತ ಶೈಕ್ಷಣಿಕ ಸಂಸ್ಥೆಗಳಲ್ಲಿ ದಲಿತ ಮತ್ತು ಹಿಂದುಳಿದ ವರ್ಗದವರನ್ನು ವ್ಯವಸ್ಥಿತವಾದ ಹೊರಗಿಡಲಾಗುತ್ತಿದೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು, ಶಿಕ್ಷಣ ಕೇಂದ್ರದಲ್ಲಿ ರಚನಾತ್ಮಕ ಸುಧಾರಣೆಗಳನ್ನು ತರಬೇಕು ಎಂದು ಆಗ್ರಹಿಸಿದ್ದಾರೆ.
ಐಐಎಂ ಬೆಂಗಳೂರು ನಿರ್ದೇಶಕ ರಿಷಿಕೇಶ ಟಿ ಕೃಷ್ಣನ್ ಅವರು ಮೀಸಲಾತಿ ನೀತಿಗಳನ್ನು ಉಲ್ಲಂಘಿಸಿದ್ದಾರೆ ಮತ್ತು ಕ್ಯಾಂಪಸ್‌ನಲ್ಲಿ ವೈವಿಧ್ಯತೆ ಮತ್ತು ದಾಖಲಾತಿ ಸಮಸ್ಯೆಗಳನ್ನು ಪರಿಹರಿಸಲು ವಿಫಲರಾಗಿದ್ದಾರೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. IIM-B ನಿರಂತರವಾಗಿ ಮೀಸಲಾತಿಯ ಸಾಂವಿಧಾನಿಕ ಆದೇಶಗಳನ್ನು ಕಡೆಗಣಿಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಐಐಎಂ ಬೆಂಗಳೂರಿನಲ್ಲಿ ಮಂಜೂರಾದ 120 ಹುದ್ದೆಗಳಿಗೆ ಭರ್ತಿಯಾಗಿರುವ 110 ಅಧ್ಯಾಪಕರ ಹುದ್ದೆಗಳಲ್ಲಿ ಕೇವಲ 16 ಮಂದಿ ಮಾತ್ರ ಹಿಂದುಳಿದ ಸಮುದಾಯಗಳ ಜನರು ಇದ್ದಾರೆ ಎಂದು ಆರ್‌ಟಿಐ ಮಾಹಿತಿ ಬಹಿರಂಗಪಡಿಸಿದ್ದಾರೆ. ಇದರಲ್ಲಿ ಐದು ಜನರು ಪರಿಶಿಷ್ಟ ಜಾತಿಯಿಂದ (ಎಸ್‌ಸಿ), ಒಬ್ಬರು ಪರಿಶಿಷ್ಟ ಪಂಗಡದಿಂದ (ಎಸ್‌ಟಿ) ಮತ್ತು ಹತ್ತು ಜನರು ಇತರ ಹಿಂದುಳಿದ ವರ್ಗ (ಒಬಿಸಿ) ಸಮುದಾಯಕ್ಕೆ ಸೇರಿದವರಾಗಿದ್ದಾರೆ ಎಂದು ಆರ್‌ಟಿಐ ಮಾಹಿತಿ ಹೇಳಿದೆ.
ಉನ್ನತ ಶಿಕ್ಷಣದಲ್ಲಿ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಸಾಂವಿಧಾನಿಕ ಆದೇಶಗಳನ್ನು ಎತ್ತಿಹಿಡಿಯುವಲ್ಲಿ ಸಂಸ್ಥೆಯು ವಿಫಲವಾಗಿದ್ದು, ತಳಸಮುದಾಯಕ್ಕೆ ಕಡಿಮೆ ಪ್ರಾತಿನಿಧ್ಯವನ್ನು ನೀಡಲಾಗಿದೆ ಎಂದು ಪ್ರತಿಭಟನಾಕಾರರು ಎತ್ತಿ ತೋರಿಸಿದ್ದಾರೆ. ಎಲ್ಲಾ ಅಧ್ಯಾಪಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿ ವರ್ಗಗಳಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಮೀಸಲಾತಿ ನೀತಿಗಳನ್ನು ತಕ್ಷಣವೇ ಜಾರಿಗೆ ತರಬೇಕೆಂದು ಅವರು ಒತ್ತಾಯಿಸಿದ್ದಾರೆ.
ಎಐಒಬಿಸಿಎಸ್‌ಎ ರಾಷ್ಟ್ರೀಯ ಅಧ್ಯಕ್ಷ ಕಿರಣ್ ಕುಮಾರ್ ಗೌಡ ಮಾತನಾಡಿ, ವೈವಿಧ್ಯತೆ ಮತ್ತು ಒಳಗೊಳ್ಳುವಿಕೆ ಇರಬೇಕು ಎಂದು ಪ್ರತಿಪಾದಿಸುವ ಅಧ್ಯಾಪಕರು ಆಡಳಿತದಿಂದ ಕಿರುಕುಳವನ್ನು ಎದುರಿಸುತ್ತಿದ್ದಾರೆ. ಅಂತಹ ನಿದರ್ಶನಗಳು, ಹಿಂದುಳಿದ ಸಮುದಾಯಗಳಿಗೆ ಪ್ರತಿಕೂಲ ವಾತಾವರಣವನ್ನು ಸೃಷ್ಟಿಸುತ್ತವೆ. ಜೊತೆಗೆ ಅದು ಅವರ ಹೊರಗಿಡುವಿಕೆ ಮತ್ತು ತಾರತಮ್ಯವನ್ನು ಮತ್ತಷ್ಟು ಶಾಶ್ವತಗೊಳಿಸುತ್ತವೆ ಎಂದು ಅವರು ಹೇಳಿದ್ದಾರೆ.
ಅಷ್ಟೆ ಅಲ್ಲದೆ, ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಅನೇಕ ಅಧ್ಯಾಪಕರು ಸಂಸ್ಥೆಯಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. “ಆದರೆ ಅವರು ಗುರಿಯಾಗುವ ಭಯದಿಂದ ಮುಂದೆ ಬರಲು ಹಿಂಜರಿಯುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಐಐಎಂ ವಿದ್ಯಾರ್ಥಿಗಳು, ಅಧ್ಯಾಪಕರ ಪತ್ರ


