- Advertisement -
- Advertisement -
ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನ ವಿಧಾನಸಭಾ ಚುನಾವಣೆಗಳು ಬುಧವಾರ ಮುಗಿದಿದ್ದು, ಎಕ್ಸಿಟ್ ಪೋಲ್‌ಗಳು ಬಿಜೆಪಿ ನೇತೃತ್ವದ ಸರ್ಕಾರಗಳು ಉಭಯ ರಾಜ್ಯಗಳಲ್ಲಿ ಅಧಿಕಾರ ಹಿಡಿಯಲಿವೆ ಎಂದು ಸೂಚಿಸಿವೆ.
ಜಾರ್ಖಂಡ್‌ನಲ್ಲಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ನೇತೃತ್ವದ ಜೆಎಂಎಂ ಅಧಿಕಾರದಲ್ಲಿ ಇದ್ದರೆ, ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಶಿಂಧೆ ನೇತೃತ್ವದ ಮಹಾಯುತಿ ಸರ್ಕಾರ ಅಧಿಕಾರದಲ್ಲಿ ಇವೆ.
ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೇ ಹಂತದ ಮತದಾನವು ಬುಧವಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಿ ಸಂಜೆ 6 ಗಂಟೆಗೆ ಮುಕ್ತಾಯವಾಯಿತು.
ಜಾರ್ಖಂಡ್ ವಿಧಾನಸಭಾ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದಲ್ಲಿ ಮತದಾನ ಕೂಡ ಬುಧವಾರ ಮುಕ್ತಾಯವಾಗಿದೆ. ಮೊದಲ ಹಂತದ ಮತದಾನ ನವೆಂಬರ್ 13 ರಂದು ನಡೆದಿತ್ತು. ಒಟ್ಟು 81 ವಿಧಾನಸಭಾ ಸ್ಥಾನಗಳು ಇರುವ ರಾಜ್ಯದಲ್ಲಿ ಅಧಿಕಾರ ಉಳಿಸಲು ಜೆಎಂಎಂ ಕಾಂಗ್ರೆಸ್ ಜೊತೆಗೆ ಇಂಡಿಯಾ ಒಕ್ಕೂಟದ ಮೈತ್ರಿಯಲ್ಲಿ ಸ್ಪರ್ಧಿಸಿದರೆ.
ಎರಡೂ ರಾಜ್ಯಗಳ ಚುನಾವಣಾ ಫಲಿತಾಂಶ ನವೆಂಬರ್ 23ಕ್ಕೆ ಹೊರಬರಲಿದೆ.


